More

    ಶೈಕ್ಷಣಿಕ ಸಹಾಯಧನ ಬಿಡುಗಡೆ ಮಾಡಿ: ಕೊಪ್ಪಳದಲ್ಲಿ ಸಿಐಟಿಯು ನೇತೃತ್ವದಲ್ಲಿ ಕಟ್ಟಡ ಕಾರ್ಮಿಕರ ಪ್ರತಿಭಟನೆ

    ಕೊಪ್ಪಳ: ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನದ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಸಿಐಟಿಯು ನೇತೃತ್ವದಲ್ಲಿ ಕಟ್ಟಡ ಕಾರ್ಮಿಕರು ಗುರುವಾರ ನಗರದ ಅಶೋಕ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

    ಪ್ರತಿ ವರ್ಷ ಕಟ್ಟಡ ಕಾರ್ಮಿಕರ ಮಂಡಳಿಯಿಂದ ಅನೇಕ ಯೋಜನೆಗಳನ್ನು ನೀಡಲಾಗುತ್ತಿದೆ. ಅವುಗಳಲ್ಲಿ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸ ಪ್ರೋತ್ಸಾಹಕ್ಕೆ ಶೈಕ್ಷಣಿಕ ಸಹಾಯಧನ ನೀಡಲಾಗುತ್ತಿದೆ. ಆದರೆ, ಪ್ರಸಕ್ತ ವರ್ಷ ಈವರೆಗೂ ಅರ್ಜಿ ಆಹ್ವಾನಿಸಿಲ್ಲ. ಈ ಬಗ್ಗೆ ಹಲವು ಬಾರಿ ಮಂಡಳಿ ಕಾರ್ಯದರ್ಶಿಗೆ ಮನವಿ ಕೊಟ್ಟರೂ ಪ್ರಯೋಜನವಾಗಿಲ್ಲ. ಬೋಗಸ್ ಕಾರ್ಡ್ ಪಡೆದವರ ಪತ್ತೆ ಮಾಡುವ ಕಾರಣ ವಿಳಂಬ ಮಾಡುತ್ತಿರುವುದಾಗಿ ಅಧಿಕಾರಿಗಳು ಹೇಳುತ್ತಾರೆ. ಆದರೆ, ಇತರ ಯೋಜನೆಗಳನ್ನು ಅನುಷ್ಠಾನ ಮಾಡುತ್ತಿದ್ದು, ಅನರ್ಹರು ಆ ಯೋಜನೆ ಲಾಭ ಪಡೆಯುವುದಿಲ್ಲವೆ? ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಕೂಡಲೇ ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಬೇಕು. 2021-22ನೇ ಸಾಲಿನಲ್ಲಿ ವಂಚಿತರಾದ ವಿದ್ಯಾರ್ಥಿಗಳಿಗೆ ಸಹಾಯಧನ ಮಂಜೂರು ಮಾಡಬೇಕು. ವಿಳಂಬ ನೀತಿ ಬಿಡಬೇಕು. ಅರ್ಜಿ ಸಲ್ಲಿಕೆ, ವಿಲೇವಾರಿ ವೇಗ ಹೆಚ್ಚಿಸಬೇಕು. ಕಾರ್ಮಿಕ ಇಲಾಖೆಯಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ಒತ್ತಾಯಿಸಿದರು. ಪ್ರತಿಭಟನೆ ಬಳಿಕ ಕಾರ್ಮಿಕ ಅಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಫೆಡರೇಷನ್ ಜಿಲ್ಲಾ ಸಮಿತಿ ಅಧ್ಯಕ್ಷ ಕಾಸಿಂಸಾಬ್ ಸರ್ದಾರ, ತಾಲೂಕು ಅದ್ಯಕ್ಷ ಹನುಮೇಶ, ಗೌಸುಸಾಬ್ ನದಾಫ್, ಖಾಜಾಸಾಬ್ ಹನುಕುಂಟಿ, ಇಸ್ಮಾಯಿಲ್ ಸಾಬ್, ಉಮೇಶ, ಶೇಖಪ್ಪ, ಹನುಮಂತಪ್ಪ, ಮೈಲಾರಪ್ಪ, ಸಾವಿತ್ರಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts