More

    ಗಣೇಶ ಮೂರ್ತಿ ವಿಸರ್ಜನೆ ಅದ್ದೂರಿ: ಡಿಜೆ ಹಾಡಿಗೆ ಕುಣಿದು ಕುಪ್ಪಳಿಸಿದ ಯುವಕರು

    ಕೊಪ್ಪಳ: ನಗರದ ಹಿಂದು ಮಹಾ ಮಂಡಳಿಯಿಂದ ಶನಿವಾರ ಹಮ್ಮಿಕೊಂಡಿದ್ದ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವಿಜೃಂಭಣೆಯಿಂದ ನೆರವೇರಿತು. ಯುವಕರು ಭಾನುವಾರ ಬೆಳಗಿನವರೆಗೆ ಡಿಜೆ ಹಾಡಿಗೆ ಕುಣಿದು ಕುಪ್ಪಳಿಸಿದರು.

    ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಮೆರವಣಿಗೆಗೆ ಸಾವಿರಾರು ಯುವಕರು ಸಾಕ್ಷಿಯಾಗಿದ್ದರು. ಮೆರವಣಿಗೆ ಆರಂಭವಾಗುತ್ತಿದ್ದಂತೆ ಜಿಟಿಜಿಟಿ ಮಳೆ ಅಡ್ಡಿ ಉಂಟುಮಾಡಿತು. ಗವಿಸಿದ್ಧೇಶ್ವರ ಮಠ ಮುಂಭಾಗದಲ್ಲಿ ಮೆರವಣಿಗೆ ಬರುತ್ತಿದ್ದಂತೆ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ಆಗಮಿಸಿ ವಿಘ್ನೇಶ್ವರನ ದರ್ಶನ ಪಡೆದರು. ಯುವಕರ ನೃತ್ಯ ಕಂಡು ಖುಷಿ ಪಟ್ಟರು. ಯುವಕರು ಗವಿಶ್ರೀಗಳೊಂದಿಗೆ ಫೋಟೊ ಕ್ಲಿಕ್ಕಿಸಿಕೊಂಡರು.

    ಡಿಜೆ ಸದ್ದಿಗೆ ಸಂಸದ ಸಂಗಣ್ಣ ಕರಡಿ, ಯುವಕರೊಂದಿಗೆ ಹೆಜ್ಜೆ ಹಾಕಿದರು. ಅಭಿಮಾನಿಗಳು, ಬೆಂಬಲಿಗರು ಮುಂದಿನ ಶಾಸಕ ಸಂಗಣ್ಣ ಕರಡಿಗೆ ಜಯವಾಗಲಿ ಎಂದು ಘೋಷಣೆ ಕೂಗಿದರು. ವಿವಿಧ ಮುಖಂಡರು ಹಾಗೂ ಹಿಂದು ಕಾರ್ಯಕರ್ತರು ಮತ್ತು ಸುತ್ತಮುತ್ತಲಿನ ಗ್ರಾಮಗಳ ಯುವಕರು ಮೆರವಣಿಗೆಯಲ್ಲಿ ಭಾಗವಹಿಸಿ ಕುಣಿದು ಕುಪ್ಪಳಿಸಿದರು.

    ಗಲಾಟೆ, ನಾಲ್ವರಿಗೆ ಗಾಯ: ಕನಕಗಿರಿ ಪಟ್ಟಣದ 17ನೇ ವಾರ್ಡ್‌ನಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಯ ವಿಸರ್ಜನೆ ವೇಳೆ ಶನಿವಾರ ರಾತ್ರಿ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದು ನಾಲ್ವರು ಗಾಯಗೊಂಡಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ವೆಂಕಟೇಶ ಗೊಲ್ಲರ್, ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಬಸಪ್ಪ ಚೌಡ್ಕಿ ಗಂಗಾವತಿಯಲ್ಲಿ ದಾಖಲಾಗಿದ್ದಾರೆ. ಘಟನೆ ಸಂಬಂಧ ಎರಡೂ ಗುಂಪುಗಳ 15 ಜನರ ವಿರುದ್ಧ ದೂರು-ಪ್ರತಿದೂರು ದಾಖಲಾಗಿದೆ. ಈಗಾಗಲೇ ಪೊಲೀಸರು ಆರು ಜನರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಉಳಿದವರ ಶೋಧ ನಡೆಸಿದ್ದು, ಮುಂಜಾಗ್ರತಾ ಕ್ರಮವಾಗಿ 15 ಹಾಗೂ 17ನೇ ವಾರ್ಡ್ ವ್ಯಾಪ್ತಿಯಲ್ಲಿ ಜಿಲ್ಲಾ ಸಶಸ್ತ್ರ ಪಡೆ ನಿಯೋಜಿಸಲಾಗಿದೆ. ಸ್ಥಳಕ್ಕೆ ಡಿವೈಎಸ್ಪಿ ರುದ್ರೇಶ ಉಜ್ಜನಕೊಪ್ಪ ಭೇಟಿ ನೀಡಿ ಪರಿಶೀಲಿಸಿದ್ದಾರೆ.

    ಗಣೇಶ ಮೂರ್ತಿ ವಿಸರ್ಜನೆ ಅದ್ದೂರಿ: ಡಿಜೆ ಹಾಡಿಗೆ ಕುಣಿದು ಕುಪ್ಪಳಿಸಿದ ಯುವಕರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts