More

    ಬಾಗಲಕೋಟೆ ರೈಲ್ವೆ ಮಾರ್ಗ ಸರ್ವೇಗೆ ಹಣ ಮಂಜೂರು: ಸಂಗಣ್ಣ ಸಂಗಣ್ಣ ಕರಡಿ ಮಾಹಿತಿ

    ಕೊಪ್ಪಳ: ಗಂಗಾವತಿ-ದರೋಜಿ ನೂತನ ರೈಲು ಮಾರ್ಗವನ್ನು ಕನಕಗಿರಿ, ಕುಷ್ಟಗಿ, ಇಳಕಲ್ ಮತ್ತು ಹುನಗುಂದ ಮಾರ್ಗವಾಗಿ ಬಾಗಲಕೋಟೆವರೆಗೆ ವಿಸ್ತರಿಸಲು ಕೇಂದ್ರ ಸರ್ಕಾರ ಸ್ಪಂದಿಸಿದ್ದು, 157 ಕಿಮೀ ಉದ್ದದ ರೈಲ್ವೆ ಮಾರ್ಗದ ಸರ್ವೇ ಕಾರ್ಯಕ್ಕೆ 78.50 ಲಕ್ಷ ರೂ. ಮಂಜೂರು ಮಾಡಿದೆ ಎಂದು ಸಂಸದ ಸಂಗಣ್ಣ ಕರಡಿ ತಿಳಿಸಿದ್ದಾರೆ. ಈ ಸಂಬಂಧ ಮನವಿ ಮಾಡಿದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ನೈರುತ್ಯ ರೈಲ್ವೆ ವಿಭಾಗದ ಮುಖ್ಯ ಪ್ರಬಂಧಕರು ಕೇಂದ್ರ ಸರ್ಕಾರಕ್ಕೆ ನೂತನ ರೈಲು ಮಾರ್ಗ ವಿಸ್ತರಣೆ ಕುರಿತು ಶಿಫಾರಸು ಮಾಡಿದ್ದರು. ಇದಕ್ಕೆ ಸ್ಪಂದಿಸಿದ ಕೇಂದ್ರ ಸರ್ಕಾರ ನೂತನ ಸುಮಾರು 157 ಕಿ.ಮೀ. ಉದ್ದದ ರೈಲು ಮಾರ್ಗದ ಸರ್ವೇ ಕಾರ್ಯಕ್ಕೆ ಅನುದಾನ ಮಂಜೂರು ಮಾಡಿದೆ. ಹೊಸ ಮಾರ್ಗದಿಂದ ಜಿಲ್ಲೆಯ ಜನರ ಜತೆಗೆ ಬಾಗಲಕೋಟೆ ಭಾಗದ ಪ್ರಯಾಣಿಕರಿಗೆ ಬೆಂಗಳೂರು, ತಿರುಪತಿ ಪ್ರಯಾಣದ ದೂರ ಮತ್ತು ಸಮಯ ಕಡಿಮೆಯಾಗಿ ಅನುಕೂಲವಾಗಲಿದೆ ಎಂದು ಸಂಗಣ್ಣ ಕರಡಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts