More

    ಹುಲಿಹೈದರ್ ಪ್ರಕರಣ ನ್ಯಾಯಾಂಗ ತನಿಖೆಗೆ ಒಳಪಡಿಸಿ: ಗಂಗಾವತಿಯಲ್ಲಿ ಸಿಪಿಐಎಂ ತಾಲೂಕು ಸಮಿತಿ ಪ್ರತಿಭಟನೆ

    ಗಂಗಾವತಿ: ಹುಲಿಹೈದರ್ ಗುಂಪು ಘರ್ಷಣೆ-ಕೊಲೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೊಳಪಡಿಸುವಂತೆ ಒತ್ತಾಯಿಸಿ ಎಸ್‌ಎ್ಐ, ಸಿಐಟಿಯು ನೇತೃತ್ವದಲ್ಲಿ ಸಿಪಿಐ(ಎಂ) ತಾಲೂಕು ಸಮಿತಿ ಸದಸ್ಯರು ನಗರದ ತಾಲೂಕು ಆಡಳಿತ ಸೌಧದ ಮುಂದೆ ಗುರುವಾರ ಪ್ರತಿಭಟನೆ ನಡೆಸಿದರು. ಎಸ್‌ಎ್ಐ ಅಧ್ಯಕ್ಷ ಅಮರೇಶ ಕಡಗದ್ ಮತ್ತು ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ನಿರುಪಾದಿ ಬೆಣಕಲ್ ಮಾತನಾಡಿ, ಹುಲಿಹೈದರ್‌ನಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಘಟನೆಯಿಂದ ಗ್ರಾಮದಲ್ಲಿ ಪ್ರಕ್ಷುಬ್ಧ ಸ್ಥಿತಿ ನಿರ್ಮಾಣವಾಗಿದೆ. ಬಹುತೇಕರು ಗ್ರಾಮ ತೊರೆದಿದ್ದು, ಜಾನುವಾರುಗಳಿಗೆ ಮೇವು, ನೀರು ಕುಡಿಸಲು ಜನರಿಲ್ಲದಂತಾಗಿದೆ. ಪ್ರಕರಣದ ದಿಕ್ಕು ತಪ್ಪಿಸಲು ಅಮಾಯಕರ ವಿರುದ್ಧ ಸುಳ್ಳು ಕೇಸ್ ದಾಖಲಿಸುತ್ತಿದ್ದು, ಹೋರಾಟಗಾರರನ್ನು ಬಂಧಿಸಲಾಗಿದೆ. ಗ್ರಾಮದಲ್ಲಿ ಶಾಂತಿ ನೆಲೆಸಲು ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು. ಮೃತಪಟ್ಟ ಮತ್ತು ಗಾಯಗೊಂಡವರ ಕುಟುಂಬಕ್ಕೆ ಸೂಕ್ತ ಪರಿಹಾರ ವಿತರಿಸಬೇಕು. ಅಮಾಯಕರ ಮೇಲಿನ ಕೇಸ್ ಹಿಂಪಡೆಯುವಂತೆ ಒತ್ತಾಯಿಸಿದರು. ವಿವಿಧ ಸಂಘಟನೆ ಪದಾಧಿಕಾರಿಗಳಾದ ಚಂದ್ರಪ್ಪ ಹೊಸ್ಕೇರಾ, ಬಸವರಾಜ ಮರಕುಂಬಿ, ಹುಸೇನಪ್ಪ, ಮರಿನಾಗಪ್ಪ, ಶಿವಕುಮಾರ ಈಚನಾಳ್, ಸೋಮನಾಥ, ಮುಖೇಶ, ಹನುಮಂತ ಹೊಸ್ಕೇರಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts