More

    6 ತಿಂಗಳಲ್ಲಿ ಪಂಚಮಸಾಲಿಗೆ 2ಎ ಮೀಸಲಾತಿ – ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿಶ್ವಾಸ

    ಕೊಪ್ಪಳ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆಯಂತೆ ಆರು ತಿಂಗಳಲ್ಲಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಸಿಗಲಿದೆ. ಇಲ್ಲದಿದ್ದರೆ ಮೀಸಲಾತಿ ಹೋರಾಟ ಮುಂದುವರಿಯಲಿದೆ ಎಂದು ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

    ಆರು ತಿಂಗಳಲ್ಲಿ ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಸದನದಲ್ಲಿ ಭರವಸೆ ನೀಡಿದ್ದಾರೆ. ಆದರೆ, ಸಚಿವ ಮುರುಗೇಶ ನಿರಾಣಿ ಯಾವುದೋ ಒತ್ತಡಕ್ಕೆ ಸಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸಮುದಾಯದ ಹೋರಾಟಕ್ಕೆ ಅವರು ವಾಹನ ವ್ಯವಸ್ಥೆ ಮಾಡಿರಬಹುದು. ಆದರೆ, ಧನ ಸಹಾಯ ಮಾಡಿಲ್ಲ. ಸಚಿವ ಸ್ಥಾನ ನೀಡಿದ ಬಳಿಕ ಪಾದಯಾತ್ರೆ ನಿಲ್ಲಿಸುವುದಾಗಿ ನಿರಾಣಿ ಮುಖ್ಯಮಂತ್ರಿಗೆ ಹೇಳಿದ್ದರು. ಆದರೆ, ಪಂಚಮಸಾಲಿ ಸಮುದಾಯಕ್ಕೆ 35 ಸಚಿವ ಸ್ಥಾನ ನೀಡಿದರೂ ಮೀಸಲಾತಿ ಹೋರಾಟದಿಂದ ಹಿಂದೆ ಸರಿಯುವುದಿಲ್ಲ. ರಾಜಕೀಯ ಹಾಗೂ ಮೀಸಲಾತಿ ಹೋರಾಟ ಬೇರೆ ಎಂದು ಗುರುವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

    ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಯಾವುದೇ ಸಮುದಾಯಕ್ಕೆ ನೋವುಂಟು ಮಾಡುವಂತೆ ಮಾತನಾಡಿಲ್ಲ. ಲಿಂಗಾಯತರಲ್ಲಿ ಪಂಚಮಸಾಲಿ ಸಮುದಾಯದಿಂದ ಮೊದಲು ಮೀಸಲಾತಿ ಹೋರಾಟ ಆರಂಭವಾಯಿತು. ಬಳಿಕ ಉಳಿದ ಸಮುದಾಯದವರು ಹೋರಾಟ ಆರಂಭಿಸಿದರು. ರಾಜ್ಯದಲ್ಲಿ ಪಂಚಮಸಾಲಿ ಸಮುದಾಯಕ್ಕೆ 2ಎ ಹಾಗೂ ಕೇಂದ್ರದಲ್ಲಿ ಲಿಂಗಾಯತ ಸಮುದಾಯಕ್ಕೆ ಹಿಂದುಳಿದ ವರ್ಗಗಳ ಮೀಸಲು ನೀಡಬೇಕೆಂಬುದು ನಮ್ಮ ನಿಲುವಾಗಿದೆ ಎಂದರು. ಸಮುದಾಯದ ಮುಖಂಡರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts