More

    ದೈಹಿಕ, ಮಾನಸಿಕ ಬೆಳವಣಿಗೆಗೆ ಉಪ್ಪು ಅವಶ್ಯ: ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಂದಕುಮಾರ ಹೇಳಿಕೆ

    ಕೊಪ್ಪಳ: ಮನುಷ್ಯನ ದೈಹಿಕ, ಮಾನಸಿಕ ಬೆಳವಣಿಗೆಗೆ ಉಪ್ಪು ಅತಿ ಅವಶ್ಯಕ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಂದಕುಮಾರ ಎಚ್. ಹೇಳಿದರು.

    ನಗರದ ಕಾಳಿದಾಸ ಪ್ರೌಢ ಶಾಲೆಯಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಇಲಾಖೆ ಹಾಗೂ ಜಿಲ್ಲಾ ಸರ್ವೇಕ್ಷಣಾ ಘಟಕದಿಂದ ರಾಷ್ಟ್ರೀಯ ಅಯೋಡಿನ್ ಕೊರತೆಯ ನ್ಯೂನತೆ ನಿಯಂತ್ರಣ ಸಪ್ತಾಹ ಅಂಗವಾಗಿ ಏರ್ಪಡಿಸಿದ್ದ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಶುಕ್ರವಾರ ಮಾತನಾಡಿದರು. ಪ್ರತಿ ವರ್ಷ ಅ.21 ರಿಂದ 27ರ ವರಗೆ ಅಯೋಡಿನ್ ಕೊರತೆ ನಿಯಂತ್ರಣ ಸಪ್ತಾಹ ಆಚರಿಸಲಾಗುತ್ತದೆ. ಮನುಷ್ಯನಿಗೆ ಬದುಕಲು ಮುಖ್ಯವಾಗಿ ನೀರು, ಗಾಳಿ ಹಾಗೂ ಆಹಾರ ಬೇಕಾಗುತ್ತದೆ. ಅದರಂತೆ ಪೌಷ್ಟಿಕ ಆಹಾರ ಸೇವಿಸುವುದರ ಜತೆಗೆ ಅಯೋಡಿನ್ ಅಂಶವಿರುವ ಉಪ್ಪನ್ನೇ ಬಳಸಬೇಕು. ಇದು ಮನುಷ್ಯನ ದೈಹಿಕ, ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ. ಬುದ್ಧಿ ಮಟ್ಟ ಹೆಚ್ಚಿಸಲು ಪ್ರಮುಖ ಪಾತ್ರ ವಹಿಸುತ್ತದೆ. ವಿಶೇಷವಾಗಿ ಗರ್ಭಿಣಿಯರು, ಬಾಣಂತಿಯರು, ಮಕ್ಕಳು ಹಾಗೂ ಹದಿ-ಹರೆಯದವರು ಕಡ್ಡಾಯವಾಗಿ ಅಯೋಡಿನ್ ಉಪ್ಪನ್ನೇ ಬಳಸಬೇಕು ಎಂದರು.

    ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ಪಿ., ಡಾ.ಗುರುಪ್ರಸಾದ, ಜಿಲ್ಲಾ ಸರ್ವೇಕ್ಷಣಾ ಘಟಕದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎಲ್.ವಿ.ಸಜ್ಜನರ್, ಜಿಲ್ಲಾ ಪ್ರಯೋಗಾಲಯ ತಾಂತ್ರಿಕ ಅಧಿಕಾರಿಗಳಾದ ಸುಧೀರ, ರಾಜಕುಮಾರ, ಹರ್ಷವರ್ಧನ, ಮುಖ್ಯಶಿಕ್ಷಕ ರಾಮಣ್ಣ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts