More

    ಕಲ್ಯಾಣ ಕರ್ನಾಟಕ ಉತ್ಸವ ಶಿಷ್ಟಾಚಾರ ಪಾಲನೆ ಆಗಲಿ: ಡಿಸಿ ಎಂ.ಸುಂದರೇಶ ಬಾಬು ಸೂಚನೆ

    ಕೊಪ್ಪಳ: ಜಿಲ್ಲಾದ್ಯಂತ ಕಲ್ಯಾಣ ಕರ್ನಾಟಕ ಉತ್ಸವವನ್ನು ಅಚ್ಚುಕಟ್ಟಾಗಿ ಆಚರಿಸಬೇಕು. ಮಳೆ ಹಾನಿ ಪರಿಹಾರ ಕ್ರಮ ತ್ವರಿತವಾಗಿ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು, ಅಧಿಕಾರಿಗಳಿಗೆ ಸೂಚಿಸಿದರು.

    ನಗರದ ಜಿಲ್ಲಾಡಳಿತ ಭವನದ ಕೆ-ಸ್ವಾನ್ ಸಭಾಂಗಣದಲ್ಲಿ ಕಕ ಉತ್ಸವ, ಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಣೆ, ಮಳೆಹಾನಿ ಕ್ರಮಗಳ ಕುರಿತು ಗುರುವಾರ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದರು. ಸೆ.17ರಂದು ಕಲ್ಯಾಣ ಕರ್ನಾಟಕ ಉತ್ಸವವನ್ನು ಯಾವುದೇ ನಿಯಮ ಉಲ್ಲಂಘನೆಯಾಗದಂತೆ ಆಚರಿಸಬೇಕು. ಶಿಷ್ಟಾಚಾರ ಪಾಲಿಸಬೇಕು. ಹೈಕ ವಿಮೋಚನೆಗೆ ಹೋರಾಡಿದವರಿಗೆ ಸನ್ಮಾನ ಮಾಡುವಂತೆ ತಿಳಿಸಿದರು.

    ಬೂತ್ ಮಟ್ಟದ ಅಧಿಕಾರಿಗಳು ಮತದಾರರ ಮನೆ ಮನೆಗೆ ತೆರಳಿ ವೋಟರ್ ಐಡಿಗೆ ಆಧಾರ್ ಲಿಂಕ್ ಮಾಡಿಸಬೇಕು. ಸೆ.18ರಂದು ಎಲ್ಲ ಮತಗಟ್ಟೆಗಳ ವ್ಯಾಪ್ತಿಯಲ್ಲಿ ವಿಶೇಷ ಅಭಿಯಾನ ಹಮ್ಮಿಕೊಳ್ಳಬೇಕು. ನಿಗದಿತ ಅವಧಿಯಲ್ಲಿ ಪ್ರಗತಿ ಸಾಧಿಸಬೇಕು. ಮಳೆ ಹಾನಿ ಕುರಿತ ಮಾಹಿತಿಯನ್ನು ಪರಿಹಾರ ತಂತ್ರಾಂಶದಲ್ಲಿ ದಾಖಲಿಸಬೇಕು. ಬಾಕಿ ಪ್ರಕರಣಗಳನ್ನು ತ್ವರಿತವಾಗಿ ದಾಖಲಿಸಬೇಕು. ಮಾನವ ಮತ್ತು ಜಾನುವಾರು ಪ್ರಾಣ ಹಾನಿಯಾದರೆ 48 ಗಂಟೆಯೊಳಗೆ ಪರಿಹಾರ ನೀಡಿ ಎಂದು ತಾಕೀತು ಮಾಡಿದರು.

    ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ.ಕಡಿ ಮಾತನಾಡಿ, ಜಿಲ್ಲೆಯಲ್ಲಿ ಜೂನ್‌ನಿಂದ ಈವರೆಗೆ ಮಳೆಗೆ 4 ಜನರು ಸಿಡಿಲು ಬಡಿದು ಮೃತಪಟ್ಟಿದ್ದು, ತಲಾ 5 ಲಕ್ಷ ರೂ. ಪರಿಹಾರ ವಿತರಿಸಲಾಗಿದೆ. ಒಂದು ಆಕಳು ಮೃತಪಟ್ಟಿದ್ದು, ಫಲಾನುಭವಿಗೆ 30ಸಾವಿರ ರೂ. ಪರಿಹಾರ ನೀಡಲಾಗಿದೆ. 732 ಮನೆಗಳು ಹಾನಿಯಾಗಿದ್ದು, 570 ಮನೆಗಳಿಗೆ ಪರಿಹಾರ ವಿತರಿಸಲಾಗಿದೆ. 590 ಹೆಕ್ಟೇರ್ ಬೆಳೆ ಹಾನಿಯಾಗಿದ್ದು, ಪರಿಹಾರ ತಂತ್ರಾಂಶದಲ್ಲಿ ದಾಖಲಿಸಲಾಗಿದೆ. ಪಿಆರ್‌ಇಡಿಗೆ ಸೇರಿದ 21 ಕಿಮೀ ರಸ್ತೆ, 11 ಸೇತುವೆಗಳು, ಲೋಕೋಪಯೋಗಿ ಇಲಾಖೆಗೆ ಸೇರಿದ 104 ಕಿಮೀ ರಸ್ತೆ, 32 ಸೇತುವೆಗಳು ಹಾನಿಯಾಗಿದ್ದು, ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುವುದಾಗಿ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts