More

    ಬಿಜೆಪಿಗೆ ಗುಡ್​ ಬೈ ಹೇಳಿದ ಕರಡಿ ಸಂಗಣ್ಣ! ನಾಳೆ ಕಾಂಗ್ರೆಸ್‌ ಸೇರ್ಪಡೆ ಬಹುತೇಕ…?

    ಕೊಪ್ಪಳ: ಈ ಬಾರಿ ಕೊಪ್ಪಳ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಮುನಿಸಿಕೊಂಡಿದ್ದ ಹಾಲಿ ಕೊಪ್ಪಳ ಸಂಸದ ಸಂಗಣ್ಣ ಕರಡಿ ಅವರು ಮಂಗಳವಾರ ಸಂಜೆ ರಾಜೀನಾಮೆ ಸಲ್ಲಿಸಿದ್ದಾರೆ.

    ಇದನ್ನೂ ಓದಿ: ಛತ್ತೀಸ್‍ಗಢದಲ್ಲಿ ಎನ್‍ಕೌಂಟರ್‌ಗೆ 29 ಮಾವೋವಾದಿಗಳ ಬಲಿ

    ಸಂಸದ ಸ್ಥಾನಕ್ಕೆ ಕೊಪ್ಪಳ ಬಿಜೆಪಿ ಸಂಸದ ಸಂಗಣ್ಣ ಕರಡಿ ರಾಜೀನಾಮೆ ಸಲ್ಲಿಸಿದ್ದಾರೆ. ಲೋಕಸಭೆ ಸ್ಪೀಕರ್​ ಆಗಿದ್ದ ಓಂ ಬಿರ್ಲಾ ಅವರಿಗೆ ಇ ಮೇಲ್ ಮೂಲಕ ರಾಜೀನಾಮೆ ಪತ್ರ ನೀಡಿರುವುದಾಗಿ ಹೇಳಿದ್ದಾರೆ. ಜತೆಗೆ ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೂ ರಾಜೀನಾಮೆ ನೀಡಿದ್ದು, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ಪತ್ರ ರವಾನಿಸಿದ್ದಾರೆ.

    ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಕಳೆದ 10 ವರ್ಷದಿಂದ ಕೊಪ್ಪಳ ಲೋಕಸಭಾ ಕ್ಷೇತ್ರದ ಜನರ ಆಶೀರ್ವಾದದಿಂದ ಸಂಸದನಾಗಿ ಕೆಲಸ ಮಾಡಿದ್ದೇನೆ. ನಾನು ಸಂಸದನಾಗುವ ಮೊದಲು ರೈಲ್ವೆ, ಹೆದ್ದಾರಿ ಹಾಗೂ ಕೇಂದ್ರ ಸರ್ಕಾರ ಯೋಜನೆಗಳು ಜನರಿಗೆ ನಿರೀಕ್ಷಿತ ಮಟ್ಟದಲ್ಲಿ ತಲುಪಿರಲಿಲ್ಲ.
    ನಾನು ಸಂಬಂಧಿಸಿದ ಕೇಂದ್ರ ಸಚಿವರುಗಳಿಗೆ ಪತ್ರದ ಮೂಲಕ ಹಾಗೂ ಮೂಖತಃ ಭೇಟಿಯಾಗಿ ಕೊಪ್ಪಳ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ ಕಾಮಗಾರಿ ತಂದಿರುವ ಹೆಮ್ಮೆ ನನಗಿದೆ. ಆದರೆ, ಇತ್ತೀಚಿನ ರಾಜಕಾರಣ ನನಗೆ ಬೇಸರ ತರಿಸಿದ್ದು, ನನ್ನ ಸಾರ್ವಜನಿಕರ ಸೇವೆ ಗುರುತಿಸುವಲ್ಲಿ ಬಿಜೆಪಿ ಸಂಪೂರ್ಣ ವಿಫಲವಾಗಿದೆ ಎಂದಿದ್ದಾರೆ.

    ಈ ಬಾರಿ ಬಿಜೆಪಿ ಹೊಸಮುಖ ಡಾ. ಬಸವರಾಜ್‌ ಕ್ಯಾವಟರ್‌ ಅವರಿಗೆ ಟಿಕೆಟ್ ನೀಡಿದ್ದು, ಇದರಿಂದ ಆಕ್ರೋಶಗೊಂಡಿದ್ದ ಸಂಗಣ್ಣ ಕರಡಿ ಅವರನ್ನು ಬಿಜೆಪಿಯ ರಾಜ್ಯಮಟ್ಟದ ನಾಯಕರು ಸಮಾಧಾನ ಪಡಿಸುವ ಪ್ರಯತ್ನ ಮಾಡಿದ್ದರು. ಸಂಗಣ್ಣ ಕರಡಿ ಅವರು ಮಂಗಳವಾರ ಕೇಸರಿ ಪಕ್ಷಕ್ಕೆ ಗುಡ್ ಬೈ ಹೇಳಿದ್ದು, ಬುಧವಾರ ಸಂಜೆ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ. ಇದರಿಂದ ರಾಜ್ಯದಲ್ಲಿ ಮತ್ತೆ ಆಪರೇಷನ್​ ಹಸ್ತ ಯಶಸ್ವಿಯಾಗಿದೆ.

    ಮುಂಬೈ: ಹಾರ್ದಿಕ್ ಪಾಂಡ್ಯ ಸಹೋದರನ ಪೊಲೀಸ್​ ಕಸ್ಟಡಿ ವಿಸ್ತರಣೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts