More

    ಲೋಗ ಅದಾಲತ್ ಸದುಪಯೋಗ ಪಡೆಯಿರಿ, ಜಿಲ್ಲಾ ನ್ಯಾಯಾಧೀಶೆ ಬಿ.ಎಸ್.ರೇಖಾ ಮನವಿ

    ಕೊಪ್ಪಳ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಫೆ.11ರಂದು ಜಿಲ್ಲಾದ್ಯಂತ ಮೇಗಾ ಲೋಕ ಅದಾಲತ್ ಹಮ್ಮಿಕೊಂಡಿದ್ದು, ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾ ನ್ಯಾಯಾಧೀಶೆ ಬಿ.ಎಸ್.ರೇಖಾ ತಿಳಿಸಿದರು.’

    ನಗರದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿದ ಅವರು, ಪ್ರಕರಣಗಳ ಶೀಘ್ರ ವಿಲೇವಾರಿಗಾಗಿ ಲೋಕ ಅದಾಲತ್ ಸಹಕಾರಿಯಾಗಿದೆ. ಈಗಾಗಲೇ ಹಲವು ಅದಾಲತ್‌ಗಳನ್ನು ಹಮ್ಮಿಕೊಂಡು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲಾಗಿದೆ. ಇದೀಗ ಮತ್ತೊಮ್ಮೆ ಮೇಗಾ ಲೋಕ ಅದಾಲತ್ ಆಯೋಜಿಸಲಾಗಿದೆ. ಸಾರ್ವಜನಿಕರು ತಮ್ಮ ವಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ತಕ್ಷಣ ಪರಿಹರಿಸಿಕೊಳ್ಳಲು ಇದೊಂದು ಸುವರ್ಣವಕಾಶ. ಅದಾಲತ್‌ನಲ್ಲಿ ಭಾಗವಹಿಸಲು ಇಚ್ಛಿಸುವವರು 08539-220233ಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದರು.

    ರಾಜಿಯಾಗಬಲ್ಲ ಅಪರಾಧ ಪ್ರಕರಣಗಳು, ಚೆಕ್ ಅಮಾನ್ಯ, ಬ್ಯಾಂಕ್ ವಸೂಲಾತಿ, ಮೋಟಾರ್ ಅಪಘಾತ ಪರಿಹಾರ, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣ, ಕೈಗಾರಿಕಾ ಕಾರ್ಮಿಕರ ವಿವಾದ, ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಭೂಸ್ವಾಧೀನ, ವೇತನ ಮತ್ತು ಭತ್ಯೆಗೆ ಸಂಬಂಧಿಸಿದ ಸೇವಾ ಪ್ರಕರಣ, ಪಿಂಚಣಿ, ಜಿಲ್ಲಾ ಹಾಗೂ ಉಚ್ಛ ನ್ಯಾಯಾಲಯದಲ್ಲಿ ಬಾಕಿ ಇರುವ ಕಂದಾಯ ಪ್ರಕರಣ, ರಾಜಿಯಾಗಬಲ್ಲ ಬಾಡಿಗೆ, ಅನುಭೋಗದ ಹಕ್ಕುಗಳು, ನಿರ್ಬಂಧಾಜ್ಞೆ, ಪಾಲುವಿಭಾಗ, ನಿರ್ದಿಷ್ಟ ಪರಿಹಾರ ದಾವೆಗಳು ಹಾಗೂ ಸಿವಿಲ್ ಪ್ರಕರಣಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಕೇಸ್‌ಗಳನ್ನು ಲೋಕ ಅದಾಲತ್‌ನಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದು ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ದೇವೇಂದ್ರ ಪಂಡಿತ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts