More

    ಕಿತ್ತುಹೋದ ಮಾದಿನೂರು-ಕಿನ್ನಾಳ ರಸ್ತೆ: ಹಳ್ಳ ದಾಟಿಕೊಂಡೇ ಶಾಲೆಗೆ ತೆರಳುವ ವಿದ್ಯಾರ್ಥಿಗಳು

    ಕೊಪ್ಪಳ: ತಾಲೂಕಿನ ಮಾದಿನೂರು ಗ್ರಾಮದಲ್ಲಿ ಶಾಲೆಗೆ ತೆರಳಲು ಸೂಕ್ತ ರಸ್ತೆ ಇಲ್ಲದೆ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದು, ಮಂಗಳವಾರ ಗ್ರಾಪಂ ಕಚೇರಿಗೆ ತೆರಳಿ ಸಮಸ್ಯೆ ಹೇಳಿಕೊಂಡರು.

    ಗ್ರಾಮದಿಂದ ಕಿನ್ನಾಳಕ್ಕೆ ಪ್ರೌಢಶಾಲೆ ಹಾಗೂ ಪಿಯುಸಿ ವಿದ್ಯಾರ್ಥಿಗಳು ತೆರಳುತ್ತಾರೆ. ಮಧ್ಯದಲ್ಲಿ ಹಿರೇಹಳ್ಳ ಹರಿಯುತ್ತಿದೆ. ವಿದ್ಯಾರ್ಥಿಗಳ ಅನುಕೂಲಕ್ಕೆಂದು ಗ್ರಾಪಂನಿಂದ ತಾತ್ಕಾಲಿಕ ರಸ್ತೆ ನಿರ್ಮಿಸಲಾಗಿತ್ತು. ಇತ್ತೀಚೆಗೆ ಸುರಿದ ಅಧಿಕ ಮಳೆಯಿಂದ ಹಿರೇಹಳ್ಳಕ್ಕೆ ನೀರು ಹರಿದು ಬಂದ ಕಾರಣ ರಸ್ತೆ ಕೊಚ್ಚಿಕೊಂಡು ಹೋಗಿದೆ. ಅಲ್ಲದೆ ಮರಳು ದಂಧೆಕೋರರು ಮನಬಂದಂತೆ ಅಗೆದಿದ್ದು, ದೊಡ್ಡ ದೊಡ್ಡ ಗುಂಡಿಗಳು ಬಿದ್ದಿವೆ. ಇದರಿಂದ ಹಳ್ಳ ದಾಟಲು ಸಮಸ್ಯೆಯಾಗುತ್ತಿದೆ. ಪ್ರಶ್ನಿಸಿದರೆ ವಿದ್ಯಾರ್ಥಿಗಳಿಗೆ ಧಮ್ಕಿ ಹಾಕುತ್ತಿದ್ದಾರೆ. ಬಸ್ ಸೌಲಭ್ಯವೂ ಇಲ್ಲದಂತಾಗಿದೆ. ಹೀಗಾಗಿ ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ ತೆರಳುತ್ತಿಲ್ಲ. ಇದರಿಂದ ಪಾಲಕರು ಹಾಗೂ ವಿದ್ಯಾರ್ಥಿಗಳು ಹಳ್ಳದಲ್ಲಿ ಇಳಿದು ಆಕ್ರೋಶ ವ್ಯಕ್ತಪಡಿಸಿದರು. ತಕ್ಷಣ ಸಮಸ್ಯೆ ಸರಿಪಡಿಸಲು ಆಗ್ರಹಿಸಿದರು. ಗ್ರಾಪಂ ಸಿಬ್ಬಂದಿ ತಾತ್ಕಾಲಿಕವಾಗಿ ರಸ್ತೆ ದುರಸ್ತಿಗೆ ಮುಂದಾಗಿದ್ದಾರೆ. ಆದರೆ, ಶಾಸ್ವತ ಪರಿಹಾರ ಕಲ್ಪಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts