More

    ಕೊಪ್ಪಳ ಜಿಲ್ಲೆಯಲ್ಲಿ 2,167 ಕ್ವಿಂಟಾಲ್ ಹೆಸರು ಕಾಳು ಖರೀದಿ

    ಕೊಪ್ಪಳ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯಲ್ಲಿ 2,167 ಕ್ವಿಂಟಾಲ್ ಹೆಸರು ಕಾಳು ಖರೀದಿಸಲಾಗಿದೆ ಎಂದು ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕ ಶ್ಯಾಮ್ ತಿಳಿಸಿದ್ದಾರೆ.

    ಜಿಲ್ಲೆಯಲ್ಲಿ ನಿರಂತರ ಮಳೆ ಸುರಿದ ಕಾರಣ ಖರೀದಿಯಲ್ಲಿ ಸಮಸ್ಯೆಯಾಗಿತ್ತು. ಅ.7ರಂದು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕರು, ಜಂಟಿ ಕೃಷಿ ನಿರ್ದೇಶಕರು, ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಜಿಲ್ಲಾ ವ್ಯವಸ್ಥಾಪಕರು, ರಾಜ್ಯ ಉಗ್ರಾಣ ವ್ಯವಸ್ಥಾಪಕರು ಮತ್ತು 6 ಖರೀದಿ ಕೇಂದ್ರಗಳ ಕಾರ್ಯನಿರ್ವಾಹಕರೊಂದಿಗೆ ಸಭೆ ನೆಡೆಸಲಾಗಿದೆ. ರೈತರಿಗೆ ಅನುಕೂಲವಾಗುವಂತೆ ಬೆಂಬಲ ಬೆಲೆ ಯೋಜನೆಯಡಿ ಹೆಸರು ಖರೀದಿಸುವಂತೆ ಸೂಚಿಸಲಾಗಿದೆ.

    ಜಿಲ್ಲಾದ್ಯಂತ 187ರೈತರಿಂದ 2,167 ಕ್ವಿಂಟಾಲ್ ಹೆಸರು ಕಾಳು ಖರೀದಿಸಲಾಗಿದೆ ಎಂದು ತಿಳಿಸಿದ್ದಾರೆ. ಹೆಸರು ಖರೀದಿ ಕೇಂದ್ರ ತೆರೆದು ಒಂದು ತಿಂಗಳಾದರೂ ರೈತರಿಂದ ಖರೀದಿಸದ ಬಗ್ಗೆ ವಿಜಯವಾಣಿ ಅ.7ರಂದು ‘ಹೆಸರಿಗೆ ಉಳಿದ ಖರೀದಿ ಕೇಂದ್ರ’ ವಿಶೇಷ ವರದಿ ಪ್ರಕಟಿಸಿತ್ತು. ವರದಿಯಿಂದ ಎಚ್ಚೆತ್ತ ಜಿಲ್ಲಾಡಳಿತ ಅಧಿಕಾರಿಗಳ ಸಭೆ ನಡೆಸಿ ಖರೀದಿ ಪ್ರಕ್ರಿಯೆ ಮುಂದುವರಿಸುವಂತೆ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts