More

    ಮಳೆ ಹಾನಿ ಪರಿಹಾರ ಶೀಘ್ರ ವಿತರಿಸಿ: ಅಧಿಕಾರಿಗಳಿಗೆ ಡಿಸಿ ಸುಂದರೇಶ ಬಾಬು ಸೂಚನೆ

    ಕೊಪ್ಪಳ: ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಹಾನಿಗೊಳಗಾದವರಿಗೆ ತ್ವರಿತವಾಗಿ ಪರಿಹಾರ ವಿತರಿಸುವಂತೆ ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು, ಅಧಿಕಾರಿಗಳಿಗೆ ಸೂಚಿಸಿದರು. ನಗರದ ಡಿಸಿ ಕಚೇರಿ ಕೆಎಸ್-1 ಸಭಾಂಗಣದಲ್ಲಿ ಶುಕ್ರವಾರ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದರು.

    ಹಾನಿಯಾದ ಪ್ರದೇಶಕ್ಕೆ ಭೇಟಿ ನೀಡಿ ಸಮೀಕ್ಷೆ ಕೈಗೊಂಡು ವರದಿ ಸಲ್ಲಿಸಬೇಕು. ಅರ್ಹ ಲಾನುಭವಿಗಳಿಗೆ ಪರಿಹಾರ ಕಲ್ಪಿಸಬೇಕು. ಯಾರೊಬ್ಬರಿಗೂ ಪರಿಹಾರ ತಪ್ಪದಂತೆ ನೋಡಿಕೊಳ್ಳಬೇಕು. ಸೇತುವೆ, ರಸ್ತೆಗಳಲ್ಲಿ ಅಧಿಕ ಗುಂಡಿಗಳು ಬಿದ್ದಲ್ಲಿ ಜನರು ಓಡಾಡದಂತೆ ಎಚ್ಚರಿಕೆ ನೀಡಬೇಕು. ಆಯಾ ನಗರ, ಸ್ಥಳೀಯ ಸಂಸ್ಥೆಗಳು ನಿಮ್ಮ ನಿಮ್ಮ ವ್ಯಾಪ್ತಿಯಲ್ಲಿ ಪರಿಹಾರ ಕ್ರಮ ಕೈಗೊಳ್ಳಬೇಕು ಕುಡಿವ ನೀರು, ತುರ್ತು ಕೆಲಸಗಳಿಗೆ ವಿದ್ಯುತ್ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಮಳೆಯಿಂದ ವಿದ್ಯುತ್ ಸಂಪರ್ಕ ಹಾಳಾಗಿದ್ದಲ್ಲಿ ತಕ್ಷಣ ಸರಿಪಡಿಸಬೇಕು. ಚರಂಡಿ, ರಾಜಕಾಲುವೆ ಸ್ವಚ್ಛಗೊಳಿಸಿ ನೀರು ಸರಾಗವಾಗಿ ಹರಿಯುವಂತೆ ನೋಡಿಕೊಳ್ಳಬೇಕು. ಶಿಥಿಲಾವಸ್ಥೆಯಲ್ಲಿರುವ ಮನೆಗಳ ಸರ್ವೇ ಮಾಡಿ ಜನರನ್ನು ಸುರಕ್ಷಿತವಾಗಿರುವಂತೆ ತಿಳಿಸುವಂತೆ ಸೂಚಿಸಿದರು.

    ಉಪವಿಭಾಗಾಧಿಕಾರಿ ಬಸವಣ್ಣೆಪ್ಪ ಕಲಶೆಟ್ಟಿ ಮಾತನಾಡಿ, ಜಿಲ್ಲೆಯಲ್ಲಿ ಜೂನ್‌ನಿಂದ ಸೆಪ್ಟೆಂಬರ್‌ವರೆಗೆ 383 ಮಿಮೀ ವಾಡಿಕೆ ಮಳೆ ಪೈಕಿ 448 ಮಿಮೀ ಮಳೆಯಾಗಿದ್ದು, ಶೇ.17 ಹೆಚ್ಚಾಗಿದೆ. ಈ ತಿಂಗಳಲ್ಲಿ ಈವರೆಗೆ ಶೇ.3 ಹೆಚ್ಚು ಮಳೆಯಾಗಿದೆ. 9 ಜೀವ ಹಾನಿಯಾಗಿದ್ದು, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ವಿತರಿಸಲಾಗಿದೆ. ಸೆಪ್ಟೆಂಬರ್ ಅಂತ್ಯದವರೆಗೆ 833 ಮನೆಗಳು ಭಾಗಶಃ ಹಾನಿಯಾಗಿದ್ದು, 4.5 ಕೋಟಿ ರೂ. ಪರಿಹಾರ ನೀಡಲಾಗಿದೆ. 720 ಹೆಕ್ಟೇರ್ ಬೆಳೆ ನಾಶವಾಗಿದ್ದು, 1430 ರೈತರಿಗೆ 1.28 ಕೋಟಿ ರೂ. ಪರಿಹಾರ ನೀಡಲಾಗಿದೆ. ಕಳೆದ ಹತ್ತು ದಿನಗಳಲ್ಲಿ 400 ಮನೆಗಳು, 280 ಹೆಕ್ಟೇರ್ ಬೆಳೆ ಹಾನಿಯಾಗಿದೆ ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts