ದೇವರ ದರ್ಶನಕ್ಕೆ ಬರುತ್ತಿದ್ದ ಪಾದಯಾತ್ರಿಗಳ ಮೇಲೆ ಹರಿದ ಲಾರಿ! ಓರ್ವ ಸ್ಥಳದಲ್ಲೇ ದುರ್ಮರಣ

Untitled-design
Published on

ಕೊಪ್ಪಳ: ಇಂದು ಕೊಪ್ಪಳದ ಹುಲಿಗಿ ಗ್ರಾಮದ ಹುಲಿಗೆಮ್ಮ ದೇವಿ ರಥೋತ್ಸವ ಹಿನ್ನೆಲೆ ಸಾವಿರಾರು ಭಕ್ತರು ಸ್ಥಳದಲ್ಲಿ ಜಮಾಯಿಸಿದ್ದರು. ಈ ವೇಳೆ ದೇವಿ ದರ್ಶನಕ್ಕಾಗಿ ಗ್ರಾಮಕ್ಕೆ ಪಾದಯಾತ್ರೆಗಳಿಗೆ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಉಳಿದವರ ಸ್ಥಿತಿ ಗಂಭೀರವಾಗಿದೆ.


ಘಟನೆ ಇಂದು ಬೆಳಗ್ಗೆ 6 ಗಂಟೆಯ ಸುಮಾರಿಗೆ ಕೊಪ್ಪಳ ತಾಲೂಕಿನ ಕೆರೆಹಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಹಿಂಬದಿಯಿಂದ ವೇಗವಾಗಿ ಬಂದ ಲಾರಿ ಭಕ್ತರಿಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ಈ ವೇಳೆ ಯಮನೂರಪ್ಪ ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದು, ಮಹಾಂತೇಶ ಎನ್ನುವವರಿಗೆ ಕಾಲು ಮುರಿದಿದೆ. ಸದ್ಯದ ಮಾಹಿತಿಯ ಪ್ರಕಾರ, ಮಹಾಂತೇಶ್ ಸ್ಥಿತಿ ಚಿಂತಾಜನಕವಾಗಿದೆ. ಹೆಚ್ಚಿನ ಚಿಕಿತ್ಸೆಗೆ ಇದೀಗ ಅವರನ್ನು ಹುಬ್ಬಳ್ಳಿಗೆ ರವಾನಿಸಲಾಗಿದೆ.

ಅಪಘಾತದಲ್ಲಿ ತುತ್ತಾದವರು ಹುನಗುಂದ ತಾಲೂಕಿನ ರಕ್ಕಸಗಿ ಗ್ರಾಮದ ನಿವಾಸಿಗಳೆಂದು ಮಾಹಿತಿ ಸಿಕ್ಕಿದ್ದು, ಮುನಿರಾಬಾದ್ ಪೋಲಿಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net