More

    ವಿದ್ಯಾರ್ಥಿಗಳಿಗೆ ಸ್ಮಾರಕಗಳ ಅರಿವು ಅಗತ್ಯ: ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಹೇಳಿಕೆ

    ಕೊಪ್ಪಳ: ವಿದ್ಯಾರ್ಥಿಗಳಲ್ಲಿ ಐತಿಹಾಸಿಕ ಸ್ಮಾರಕಗಳ ಬಗ್ಗೆ ಅರಿವಿರಬೇಕು ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಹೇಳಿದರು. ತಾಲೂಕಿನ ಬಹದ್ದೂರಬಂಡಿ ಕೋಟೆಯಲ್ಲಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಮಂಗಳವಾರ ಹಮ್ಮಿಕೊಂಡಿದ್ದ ಸ್ವಚ್ಛತಾ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳ ಚಿತ್ರಕಲಾ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದರು.

    ಆಯಾ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿನ ಐತಿಹಾಸಿ ಸ್ಮಾರಕಗಳ ಬಗ್ಗೆ ತಿಳಿವಳಿಕೆ ಮತ್ತು ಸ್ಮಾರಕ ಪ್ರದೇಶದಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಸ್ಮಾರಕಗಳ ಮಹತ್ವ, ಇತಿಹಾಸ ಕುರಿತು ತಿಳಿವಳಿಕೆ ಮೂಡಿಸಬೇಕು ಎಂದರು.

    ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಕಾವ್ಯಾರಾಣಿ ಕೆ.ವಿ. ಮಾತನಾಡಿ, ಸರ್ಕಾರದ ನಿರ್ದೇಶನದಂತೆ ಸೆ.26 ರಿಂದ ಅ.2 ವರೆಗೆ ಸ್ವಚ್ಛತಾ ಕಾರ್ಯಕ್ರಮಗಳ ಅಂಗವಾಗಿ ಸೈಕಲ್ ಜಾಥಾ, ಚಿತ್ರಕಲಾ ಸ್ಪರ್ಧೆ, ಪ್ರಭಾತ್ಪೇರಿ, ಸಹಿ ಅಭಿಯಾನ, ಇತರ ಕಾರ್ಕ್ರಮ ಆಯೋಜಿಸಲಾಗುತ್ತಿದೆ. ಬಹದ್ದೂರ್ ಬಂಡಿ ಗ್ರಾಮದ ಕೋಟೆಯ ಮೇಲ್ಭಾಗ ಮತ್ತು ಕೆಳ ಭಾಗದಲ್ಲಿ ಶುಚಿತ್ವ ಕಾರ್ಯ ಹಮ್ಮಿಕೊಳ್ಳಲಾಗಿದೆ ಎಂದರು.

    ಉಪನ್ಯಾಸಕ ಡಾ.ಸಿದ್ಧಲಿಂಗಪ್ಪ ಕೊಟ್ನೇಕಲ್, ಬಹದ್ದೂರ್ ಬಂಡಿ ಕೋಟೆ ಇತಿಹಾಸದ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು. ತಹಸೀಲ್ದಾರ್ ವಿಠ್ಠಲ ಚೌಗಲಾ, ಆಹಾರ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ, ಪ್ರವಾಸೋದ್ಯ ಇಲಾಖೆ ಸಹಾಯಕ ನಿರ್ದೇಶಕ ನಾಗರಾಜ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts