More

    ಗ್ರಾಮ ಸ್ವಚ್ಛತೆಗೆ ಪ್ರತಿಯೊಬ್ಬರೂ ಕೈಜೋಡಿಸಿ: ಕೊಪ್ಪಳ ತಾಪಂ ಇಒ ದುಂಡಪ್ಪ ತುರಾದಿ ಹೇಳಿಕೆ

    ಕೊಪ್ಪಳ: ಗ್ರಾಮದ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ತಾಪಂ ಇಒ ದುಂಡಪ್ಪ ತುರಾದಿ ಹೇಳಿದರು.

    ತಾಲೂಕಿನ ಮುನಿರಾಬಾದ್ ಗ್ರಾಮದಲ್ಲಿ ತಾಪಂ ಹಾಗೂ ಗ್ರಾಪಂ ಶುಕ್ರವಾರ ಹಮ್ಮಿಕೊಂಡಿದ್ದ ಸ್ವಚ್ಛತಾ ಹೀ ಸೇವಾ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದರು. ಅಕ್ಟೋಬರ್‌ಗೆ 2ರ ವರೆಗೆ ದೇಶಾದ್ಯಂತ ಸ್ವಚ್ಛತಾ ಆಂದೋಲನ ನಡೆಯಲಿದೆ. ಗ್ರಾಮ ಮಟ್ಟದಲ್ಲಿ ಪ್ರತಿಯ್ಬರೂ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಈ ಬಗ್ಗೆ ನಿರಂತರ ಅರಿವು ಮೂಡಿಸುತ್ತಿದ್ದು, ಎಲ್ಲರೂ ಕೈ ಜೋಡಿಸಬೇಕು. ಎಲ್ಲೆಂದರಲ್ಲಿ ಕಸ ಬಿಸಾಡದೆ, ಸಂಗ್ರಹಿಸಿ ವಿಲೇವಾರಿ ಮಾಡಬೇಕೆಂದು ತಿಳಿಸಿದರು.

    ಗ್ರಾಮದ ಬಸ್ ನಿಲ್ದಾಣದಲ್ಲಿ ಶ್ರಮದಾನ ಮಾಡಲಾಯಿತು. ಶಾಲಾ ವಿದ್ಯಾರ್ಥಿಗಳ ಮೂಲಕ ಜಾಗೃತಿ ಜಾಥಾ ಹಮ್ಮಿಕೊಂಡು ಸ್ವಚ್ಛತೆ ಬಗ್ಗೆ ಅರಿವು ಮೂಡಿಸಲಾಯಿತು. ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಅಂಗಡಿಗಳಿಗೆ ಕಸ ಸಂಗ್ರಹ ಬುಟ್ಟಿ ವಿತರಿಸಿ, ಒಣ ಮತ್ತು ಹಸಿ ಕಸ ಪ್ರತ್ಯೇಕವಾಗಿ ಸಂಗ್ರಹಿಸುವಂತೆ ತಿಳಿಸಲಾಯಿತು. ಸಹಾಯಕ ನಿರ್ದೇಶಕ ಮಹೇಶ ಹಡಪದ, ಎಸ್‌ಬಿಎಂ ನೋಡಲ್ ಅಧಿಕಾರಿ ಪ್ರಕಾಶ ಸಜ್ಜನ, ಪಿಡಿಒ ಜಯಲಕ್ಷ್ಮೀ, ಗ್ರಾಪಂ ಅಧ್ಯಕ್ಷೆ ಕಮಲಾ ಇಸ್ರೇಲ್, ಉಪಾಧ್ಯಕ್ಷ ಗಾಳೆಪ್ಪ, ಐಇಸಿ ಸಂಯೋಜಕ ಶಿವಕುಮಾರ್ ಕೆ. ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts