More

    ಪರೀಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ

    ಕೊಪ್ಪಳ: ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಮಾ.31ರಿಂದ ಏ.15ವರೆಗೆ ನಡೆಯಲಿವೆ. ಯಾವುದೇ ಅಕ್ರಮಗಳಿಗೆ ಅವಕಾಶ ನೀಡದೆ ಪರೀಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅಧಿಕಾರಿಗಳಿಗೆ ಡಿಸಿ ಎಂ.ಸುಂದರೇಶ ಬಾಬು ಸೂಚನೆ ನೀಡಿದರು.

    ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷಾ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. ಪರೀಕ್ಷೆಗಳನ್ನು ಯಾವುದೇ ಅಕ್ರಮ ಚಟುವಟಿಕೆಗೆ ಅವಕಾಶ ನೀಡದೆ ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಸಬೇಕು. ಪ್ರಶ್ನೆಪತ್ರಿಕೆಗಳನು ್ನಖಜಾನೆಯಲ್ಲಿ ಠೇವಣಿ ಮಾಡಿ. ಪರೀಕ್ಷಾ ದಿನದಂದು ನಿಗದಿತ ಅವಧಿಯೊಳಗೆ ಪರೀಕ್ಷಾ ಕೇಂದ್ರಗಳಿಗೆ ತಲುಪಿಸುವ ಹೊಣೆ ಆಯಾ ಮಾರ್ಗಾಧಿಕಾರಿಗಳದ್ದು. ವಿಳಂಬಕ್ಕೆ ಅವಕಾಶವಿಲ್ಲದಂತೆ ಪ್ರಶ್ನೆಪತ್ರಿಕೆಯನ್ನು ಕೇಂದ್ರಗಳಿಗೆ ತಲುಪಿಸಬೇಕು. ವಿದ್ಯಾರ್ಥಿಗಳಿಗೆ ಸೂಕ್ತ ಆಸನ ವ್ಯವಸ್ಥೆ ಕಲ್ಪಿಸುವುದು ಪರೀಕ್ಷಾ ಕೇಂದ್ರದ ಮುಖ್ಯಸ್ಥರ ಜವಾಬ್ದಾರಿ. ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಅಗತ್ಯ ಬಸ್ ವ್ಯವಸ್ಥೆ ಕಲ್ಪಿಸಬೇಕು. ಕೇಂದ್ರಗಳಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಬೇಕು. ವಿದ್ಯಾರ್ಥಿಗಳು ಹಾಗೂ ಪರೀಕ್ಷಾ ಕಾರ್ಯಕ್ಕೆ ನಿಯೋಜನೆಗೊಂಡ ಶಿಕ್ಷಕರು, ಅಧಿಕಾರಿ, ಸಿಬ್ಬಂದಿ ಹೊರತುಪಡಿಸಿ, ಇನ್ನುಳಿದವರ ಪ್ರವೇಶಕ್ಕೆ ಅವಕಾಶ ನೀಡಬಾರದು. ಕುಡಿವ ನೀರು ಪೂರೈಕೆಯಲ್ಲಿ ತೊಂದರೆ ಇದ್ದಲ್ಲಿ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು, ಸಂಬಂಧಿಸಿದ ನಗರಸಭೆ ಅಥವಾ ಗ್ರಾಪಂ ಅಧಿಕಾರಿಗಳನ್ನು ಸಂಪರ್ಕಿಸಿ ಕ್ರಮ ಕೈಗೊಳ್ಳಬೇಕು ಎಂದರು.

    ಡಿಡಿಪಿಐ ಎಂ.ಎ.ರಡ್ಡೇರ ಮಾತನಾಡಿ, ಜಿಲ್ಲೆಯ ಒಟ್ಟು 25,104 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 12,802 ಗಂಡು ಮತ್ತು 12,302 ಹೆಣ್ಣು ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ. ಮೂರು ಸೂಕ್ಷ್ಮ ಕೇಂದ್ರಗಳು ಒಳಗೊಂಡು 79 ಪರೀಕ್ಷಾ ಕೇಂದ್ರಗಳಿವೆ. ಗಂಗಾವತಿ ತಾಲೂಕಿನಲ್ಲಿ 24, ಕೊಪ್ಪಳ 26, ಕುಷ್ಟಗಿ 15 ಹಾಗೂ ಯಲಬುರ್ಗಾದಲ್ಲಿ 14 ಪರೀಕ್ಷಾ ಕೇಂದ್ರಗಳನ್ನು ರಚಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬ ಮುಖ್ಯಅಧೀಕ್ಷಕರು ಹಾಗೂ ಪ್ರಶ್ನೆಪತ್ರಿಕೆ ಅಧೀಕ್ಷಕರನ್ನು ನೇಮಿಸಲಾಗಿದೆ ಎಂದು ಮಾಹಿತಿ ನೀಡಿದರು. ಎಡಿಸಿ ಸಾವಿತ್ರಿ ಕಡಿ, ಬಿಇಒಗಳು, ವಿಷಯ ನಿರ್ವಾಹಕರು, ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು, ನೋಡಲ್ ಅಧಿಕಾರಿಗಳಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts