More

    ವೋಟರ್ ಐಡಿಗೆ ಆಧಾರ್ ಜೋಡಿಸಿ

    ಕೊಪ್ಪಳ: ಮತದರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಜೋಡಿಸುವ ಕಾರ್ಯಕ್ಕೆ ಎಲ್ಲ ಇಲಾಖೆಗಳ ಅಧಿಕಾರಿಗಳು ಸಹಕಾರ ನೀಡಬೇಕು ಎಂದು ಜಿಪಂ ಸಿಇಒ ಫೌಜಿಯಾ ತರನ್ನುಮ್ ಸೂಚಿಸಿದರು.
    ನಗರದ ಜಿಲ್ಲಾಡಳಿತ ಭವನದ ಕೆಎಸ್-1 ಸಭಾಂಗಣದಲ್ಲಿ ಗುರುವಾರ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಮತದಾರ ಚೀಟಿಗೆ ಆಧಾರ್ ಜೋಡಣೆ ಮಾಡಲು ಅವಕಾಶ ಕಲ್ಪಿಸಿ ಕಾಯ್ದೆ ತಿದ್ದುಪಡಿ ಮಾಡಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ ಆಧಾರ್ ಲಿಂಕ್ ಮಾಡಿಸಬೇಕು. ಈ ಬಗ್ಗೆ ಜಾಗೃತಿ ಮೂಡಿಸಬೇಕು. ಎನ್‌ವಿಎಸ್‌ಪಿ., ವಿಎಚ್‌ಎ, ವೋಟರ್ಸ್ ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಆಧಾರ್ ಜೋಡಣೆಗೆ ಅರ್ಜಿ ಸಲ್ಲಿಸಬಹುದು. ಆಧಾರ್ ಸಂಖ್ಯೆ ಇರದ ಮತದಾರರು ನರೇಗಾ ಜಾಬ್ ಕಾರ್ಡ್, ಬ್ಯಾಂಕ್/ಪೋಸ್ಟ್ ಆಫೀಸ್ ನೀಡಿದ ಭಾವಚಿತ್ರವಿರುವ ಪಾಸ್‌ಬುಕ್, ಆರೋಗ್ಯ ವಿಮಾ ಸ್ಮಾರ್ಟ್‌ಕಾರ್ಡ್, ವಾಹನ ಚಾಲನಾ ಪರವಾನಗಿ, ಪಾನ್‌ಕಾರ್ಡ್, ಭಾರತೀಯ ಪಾಸ್ಪೋರ್ಟ್, ಭಾವಚಿತ್ರದೊಂದಿಗೆ ಪಿಂಚಣಿ ದಾಖಲೆ, ಕೇಂದ್ರ/ ರಾಜ್ಯ ಸರ್ಕಾರ/ ಪಿಎಸ್‌ಯು/ ಸಾರ್ವಜನಿಕರಿಂದ ಉದ್ಯೋಗಿಗಳಿಗೆ ನೀಡಿರುವ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿ ಮತ್ತು ಸಂಸದರು, ಶಾಸಕರು, ಎಂಎಲ್‌ಸಿಗಳಿಗೆ ನೀಡಿರುವ ಅಧಿಕೃತ ಗುರುತಿನ ಚೀಟಿ ಬಳಸಿ ಮತದಾರರ ಪಟ್ಟಿಯಲ್ಲಿ ನಮೂದಿಸಿಕೊಳ್ಳಬಹುದು ಎಂದರು.
    ಆಯಾ ಇಲಾಖೆ ಅಧಿಕಾರಿಗಳು ನೌಕರರಿಗೆ ಮಾಹಿತಿ ನೀಡಬೇಕು. ಕಾಲೇಜು ವಿದ್ಯಾರ್ಥಿಗಳು, ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಹಾಗೂ ವಿವಿಧ ಕಾರ್ಯಕ್ರಮ, ಸಭೆ, ಸಮಾರಂಭದಲ್ಲಿ ಭಾಗವಹಿಸುವ ಜನರಿಗೆ ವಿಷಯ ತಿಳಿಸಬೇಕು. ಆರೋಗ್ಯ ಕೇಂದ್ರಗಳಲ್ಲಿ ಬರುವ ಜನರಿಗೂ ಆಧಾರ್ ಜೋಡಿಸಿಕೊಳ್ಳಲು ಹೇಳಬೇಕು. ಎಡಿಸಿ ಸಾವಿತ್ರಿ ಬಿ .ಕಡಿ, ಜಿಪಂ ಉಪಕಾರ್ಯದರ್ಶಿ ಸಮೀರ್ ಮುಲ್ಲಾ, ಯೋಜನಾ ನಿರ್ದೇಶಕ ಟಿ.ಕೃಷ್ಣಮೂರ್ತಿ, ಡಿಎಚ್‌ಒ ಡಾ.ಅಲಕನಂದಾ ಮಳಗಿ, ಡಿಡಿಪಿಐ ಎಂ.ಎ.ರಡ್ಡೇರ, ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ಕೃಷ್ಣಮೂರ್ತಿ ದೇಸಾಯಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ್ ಮರಬನಳ್ಳಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts