More

    ಮಹಿಳಾ ಸಬಲೀಕರಣ ಅಭಿಯಾನ ಯಶಸ್ವಿಗೊಳಿಸಿ

    ಕೊಪ್ಪಳ: ನರೇಗಾ ಯೋಜನೆಯಡಿ ಮಹಿಳೆಯರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿ ಮಹಿಳಾ ಉದ್ಯೋಗ ಸಬಲೀಕರಣ ಅಭಿಯಾನ ಯಶಸ್ವಿಗೊಳಿಸಿ ಎಂದು ತಾಪಂ ಇಒ ದುಂಡಪ್ಪ ತುರಾದಿ ಹೇಳಿದರು.

    ತಾಲೂಕಿನ ಅಳವಂಡಿ ಗ್ರಾಮದ ನಾಲಾ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮಹಿಳಾ ಸಬಲೀಕರಣ ಅಭಿಯಾನ, ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಆರೋಗ್ಯ ತಪಾಸಣೆ ಶಿಬಿರದಲ್ಲಿ ಮಾತನಾಡಿದರು.

    ನರೇಗಾದಡಿ ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚಳಕ್ಕೆ ಮಹಿಳಾ ಉದ್ಯೋಗ ಸಬಲೀಕರಣ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಸಮುದಾಯ ಹಾಗೂ ವೈಯಕ್ತಿಕ ಕಾಮಗಾರಿಗಳಲ್ಲಿ ತೊಡಗಿಸಿಕೊಳ್ಳಬೇಕು. ಮತದಾರರ ಪಟ್ಟಿ ಪರಿಷ್ಕರಣೆ ಹಮ್ಮಿಕೊಂಡಿದ್ದು, ಎಲ್ಲರೂ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿರುವ ಬಗ್ಗೆ ಖಚಿತಪಡಿಸಿಕೊಳ್ಳಿ. 18 ವರ್ಷ ತುಂಬಿದವರು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಿಕೊಂಡು ಗುರುತಿನ ಚೀಟಿ ಪಡೆಯಿರಿ ಎಂದರು.

    ತಾಪಂ ಸಹಾಯಕ ನಿರ್ದೇಶಕಿ ಸೌಮ್ಯಾ ಮಾತನಾಡಿ, ಕೂಲಿಕಾರರಿಗೆ ಕೆಲಸ ನೀಡುವುದರ ಜತೆಗೆ ಅವರ ಆರೋಗ್ಯ ರಕ್ಷಣೆಗೂ ಆದ್ಯತೆ ನೀಡಲಾಗಿದೆ. ಕಾಮಗಾರಿ ಸ್ಥಳದಲ್ಲಿ ಆರೋಗ್ಯ ಶಿಬಿರ ಹಮ್ಮಿಕೊಂಡಿದ್ದು, ಅಗತ್ಯ ಪರೀಕ್ಷೆ ಮಾಡಿಸಿಕೊಳ್ಳಬೇಕು. ನರೇಗಾದಡಿ ಲಭ್ಯ ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ ಎಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ಕೂಲಿಕಾರರ ಆರೋಗ್ಯ ತಪಾಸಣೆ ನಡೆಸಲಾಯಿತು. ವೈದ್ಯರು ರಕ್ತದೊತ್ತಡ, ಸಕ್ಕರೆ ಕಾಯಿಲೆ ಸೇರಿ ಸಣ್ಣಪುಟ್ಟ ರೋಗಗಳಿಗೆ ಚಿಕಿತ್ಸೆ ಹಾಗೂ ವೈದ್ಯಕೀಯ ಸಲಹೆ ನೀಡಿದರು. ಸಹಾಯಕ ನಿರ್ದೇಶಕ ಮಹೇಶ ಹಡಪದ, ಗ್ರಾಪಂ ಪಿಡಿಒ ಬಸವರಾಜ ಕಿರ್ದಿ, ಗ್ರಾಪಂ ಅಧ್ಯಕ್ಷೆ ಭಾರತಿ ಬೆಣಕಲ್, ಸದಸ್ಯರಾದ ಗುರುಬಸವರಾಜ ಹಳ್ಳಿಕೇರಿ, ಹನುಮಂತಪ್ಪ ಮೂಲಿಮನಿ, ರೇಣುಕಪ್ಪ ಹಳ್ಳಿಕೇರಿ, ವಿಶ್ವನಾಥ, ತೋಟಯ್ಯ ಅರಳಹಳ್ಳಿ ಮಠ, ಮಲ್ಲಪ್ಪ ಬೆಣಕಲ್, ಐಇಸಿ ಸಂಯೋಜಕ ಶಿವಕುಮಾರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts