More

    ತಿಂಗಳೊಳಗೆ ಕಾಮಗಾರಿ ಮುಗಿಸದಿದ್ದರೆ ಕ್ರಮ: ಜಿಪಂ ಸಿಇಒ ಫೌಜಿಯಾ ತರನ್ನುಮ್ ಎಚ್ಚರಿಕೆ

    ಕೊಪ್ಪಳ: ಕುಷ್ಟಗಿ ಹಾಗೂ ಯಲಬುರ್ಗಾ ತಾಲೂಕು ಬಹುಗ್ರಾಮ ಕುಡಿವ ನೀರು ಹಾಗೂ ಇತರ ಯೋಜನೆ ಕಾಮಗಾರಿಗಳು ಸೆ.30ರೊಳಗೆ ಪೂರ್ಣಗೊಳ್ಳದಿದ್ದರೆ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಜಿಪಂ ಸಿಇಒ ಫೌಜಿಯಾ ತರನ್ನುಮ್ ಎಚ್ಚರಿಕೆ ನೀಡಿದರು.

    ನಗರದ ಕೃಷಿ ಇಲಾಖೆ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕುಷ್ಟಗಿ ಹಾಗೂ ಯಲಬುರ್ಗಾ ತಾಲೂಕಿನ ಕುಡಿವ ನೀರು ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು. ಡಿಬಿಒಟಿ ಆಧಾರಿತ ಕುಷ್ಟಗಿ ಹಾಗೂ ಯಲಬುರ್ಗಾ ತಾಲೂಕುಗಳ 331 ಗ್ರಾಮಗಳಿಗೆ ಕುಡಿವ ನೀರು ಪೂರೈಸುವ ಯೋಜನೆ ಹಾಕಿಕೊಳ್ಳಲಾಗಿದೆ. ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಎಲ್ ಆ್ಯಂಡ್ ಟಿ ಕಂಪನಿಗೆ ಸಾಕಷ್ಟು ಬಾರಿ ಸೂಚಿಸಲಾಗಿದೆ. ಹಲವು ಸಲ ಕಾಲಾವಕಾಶ ನೀಡಿದ್ದರೂ ಕಾಮಗಾರಿಗಳು ಪೂರ್ಣಗೊಂಡಿಲ್ಲ.

    ಅ.2ರೊಳಗೆ ಜನರಿಗೆ ನೀರು ಪೂರೈಸಬೇಕು. ಸೆ.30ರೊಳಗೆ ಕಾಮಗಾರಿಗಳು ಮುಗಿಯದಿದ್ದರೆ ಎಲ್ ಆ್ಯಂಡ್ ಟಿ ಸಂಸ್ಥೆಯನ್ನು ಬ್ಲಾಕ್ ಲಿಸ್ಟ್‌ಗೆ ಸೇರಿಸಲು ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು. ಈಗಾಗಲೇ ಕಾಮಗಾರಿ ಮುಗಿದಿರುವ ಗ್ರಾಮಗಳಲ್ಲಿ ನೀರು ಪೂರೈಕೆಯಾಗುತ್ತಿರುವ ಬಗ್ಗೆ ಗ್ರಾಪಂ ಪಿಡಿಒಗಳು ಖಾತ್ರಿಪಡಿಸಿಕೊಳ್ಳಿ ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ತಾಕೀತು ಮಾಡಿದರು. ಜಿಪಂ ಉಪಕಾರ್ಯದರ್ಶಿ ಸಮೀರ್ ಮುಲ್ಲಾ, ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts