ಜುಲೈ 27ರಂದು ಶಾಸಕ ವಿನಯ್ ಕುಲಕರ್ಣಿ ಹೆಸರಿನಲ್ಲಿ ಕೊರಗಜ್ಜ ಹರಕೆ ಕೋಲ

Koragajja
ಹರಕೆ ಕೋಲದ ಕರಪತ್ರ
Published on

ಉಳ್ಳಾಲ: ಧಾರವಾಡ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ವಿನಯ್ ಕುಲಕರ್ಣಿ ಹೆಸರಿನಲ್ಲಿ ಜುಲೈ 27ರಂದು ತೊಕ್ಕೊಟ್ಟು ಜಂಕ್ಷನ್‌ನಲ್ಲಿರುವ ಕೊರಗಜ್ಜನ ಕಟ್ಟೆಯಲ್ಲಿ ಹರಕೆ ಕೋಲ ಸೇವೆ ನಡೆಯಲಿದೆ. ಶಾಸಕ ಮತ್ತು ಕುಟುಂಬಸ್ಥರು ಭಾಗವಹಿಸಲಿದ್ದು ಇಷ್ಟಾರ್ಥ ಸಿದ್ಧಿಗಾಗಿ ಹರಕೆ ಸೇವೆ ಸಲ್ಲಿಸಲಿರುವುದಾಗಿ ತಿಳಿದು ಬಂದಿದೆ.

ತೊಕ್ಕೊಟ್ಟು ಹಳೇ ಚೆಕ್‌ಪೋಸ್ಟ್ ಬಳಿ ಇರುವ ಕೊರಗಜ್ಜನ ಕಟ್ಟೆಯಲ್ಲಿ ಕೋಲ ಸೇವೆ ನಡೆಯಲಿದ್ದು, ಸಕಲ ಸಿದ್ಧತೆ ನಡೆಸಲಾಗಿದೆ. ಬಿಜೆಪಿ ಜಿಪಂ ಸದಸ್ಯ ಯೋಗೇಶ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ನ್ಯಾಯಾಲಯ ವಿನಯ್ ಕುಲಕರ್ಣಿ ಅವರನ್ನು ಧಾರವಾಡ ಕ್ಷೇತ್ರ ಪ್ರವೇಶಿಸದಂತೆ ನಿರ್ಬಂಧ ಹೇರಲಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಕ್ಷೇತ್ರಕ್ಕೆ ಭೇಟಿ ನೀಡದೆಯೇ ಬಿಜೆಪಿ ಅಭ್ಯರ್ಥಿ ವಿರುದ್ಧ ಗೆದ್ದಿದ್ದರು. ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದು, ಕ್ಷೇತ್ರ ಪ್ರವೇಶಕ್ಕೆ ನಿರ್ಬಂಧ ಮುಂದುವರಿದಿದೆ. ಮುಂದಿನ ತಿಂಗಳು ಇದೇ ವಿಚಾರದಲ್ಲಿ ಕೋರ್ಟ್ ವಿಚಾರಣೆ ಇದೆ ಎನ್ನಲಾಗುತ್ತಿದೆ.

ಈ ಎಲ್ಲ ಬೆಳವಣಿಗೆಗಳ ನಡುವೆ ಕೋಲ ಸೇವೆ ನಡೆಯಲಿದ್ದು, ಕುತೂಹಲಕ್ಕೆ ಕಾರಣವಾಗಿದೆ. ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಹೆಸರಲ್ಲಿ ಕರಪತ್ರ ಸಿದ್ಧವಾಗಿದ್ದು ವಿನಯ್ ಕುಲಕರ್ಣಿ ಅವರ ಭಾವಚಿತ್ರ ಅಳವಡಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net