ಕಿಶೋರ್‌ಕುಮಾರ್‌ಗೆ ಭಾರಿ ಅಂತರದ ಗೆಲುವು -ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿಶ್ವಾಸ

sssssss
Published on


ಮಂಗಳೂರು : ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಅ.21ರಂದು ನಡೆಯಲಿರುವ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್‌ಕುಮಾರ್ ಪುತ್ತೂರು ಭಾರಿ ಅಂತರದಿಂದ ಗೆದ್ದು ವಿಧಾನ ಪರಿಷತ್ತು ಪ್ರವೇಶಿಸಲಿದ್ದಾರೆ ಎಂದು ಉಡುಪಿ-ಚಿಕ್ಕಮಗಳೂರು ಸಂಸತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ದ.ಕ.ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ ಸಣ್ಣ ಸಮುದಾಯದ ಹಿಂದುಳಿದ ವರ್ಗಕ್ಕೆ ಸೇರಿದ ಕಿಶೋರ್‌ಕುಮಾರ್ ಅವರಿಗೆ ರಾಜ್ಯ ಮತ್ತು ರಾಷ್ಟ್ರದ ಬಿಜೆಪಿ ನಾಯಕರು ಸ್ಪರ್ಧಿಸಲು ಅವಕಾಶ ಕಲ್ಪಿಸಿದ್ದಾರೆ. ತನ್ಮೂಲಕ ಬಿಜೆಪಿ ಕಾರ್ಯಕರ್ತರ ಪಕ್ಷ ಎಂಬುದನ್ನು ಮತ್ತೊಮ್ಮೆ ಸಾಬೀತು ಪಡಿಸಿದೆ ಎಂದರು
ಕಿಶೋರ್‌ಕುಮಾರ್ ಪಕ್ಷದ ನಿಷ್ಟಾವಂತ ಕಾರ್ಯಕರ್ತರು. ಅವರು ಸ್ಥಳೀಯ ಸಂಸ್ಥೆಗಳಲ್ಲಿ ಜನತೆಗಿರುವ ಸಮಸ್ಯೆಗಳ ಪರಿಹಾರಕ್ಕೆ ಪರಿಣಾಮಕಾರಿಯಾಗಿ ಕೆಲಸ ಮಾಡುವ ಸಾಮರ್ಥ್ಯ ಹೊಂದಿದ್ದಾರೆ. ಗ್ರಾಮೀಣ ಭಾಗದವರಾಗಿ ಸ್ಥಳೀಯ ಸಂಸ್ಥೆಗಳ ಮೂಲಭೂತ ಸಮಸ್ಯೆಗಳ ಅರಿವಿದೆ. ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ 6,037 ಮತದಾರರಿದ್ದಾರೆ. ಈ ಪೈಕಿ ಬಿಜೆಪಿ ಬೆಂಬಲಿತ ಮತದಾರರು 3,500ಕ್ಕಿಂತ ಅಧಿಕ ಇದ್ದಾರೆ. ಹಾಗಾಗಿ ಬಿಜೆಪಿ ಅಭ್ಯರ್ಥಿಗೆ ನಿರಾಯಾಸ ಗೆಲುವು ಖಚಿತ ಎಂದು ಅವರು ಹೇಳಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರಿಗೆ ಗೌರವ ಧನ ಪ್ರಾಪ್ತಿಗೆ ಬಿಜೆಪಿ ಕಾರಣವಾಗಿದೆ.ವಿಧಾನ ಪರಿಷತ್ತಿನಲ್ಲಿ ನಾನು ಧ್ವನಿ ಎತ್ತಿದ ಪರಿಣಾವಾಗಿ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮುಂಗಡ ಪತ್ರದಲ್ಲಿ ಗೌರವ ಧನವನ್ನು ಘೋಷಿಸಿದರು. ಅದು ನಮ್ಮ ಮತದಾರರಿಗೆ ತಿಳಿದಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಬಿ.ಎಸ್.ಯಡಿಯೂರಪ್ಪ ತಮ್ಮ ಪುತ್ರನ ಹೆಸರಿಗೆ ಮಂಜೂರಾದ ನಿವೇಶನವನ್ನು ಹಿಂತಿರುಗಿಸಿರುವುದು ತಪ್ಪು. ಅವರು ರಾಜೀನಾಮೆ ನೀಡಬೇಕು ಎಂದು ಅಂದಿನ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಆಗ್ರಹಿಸಿದ್ದರು. ಅದೇ ನ್ಯಾಯ ಈಗ ಸಿದ್ಧರಾಮಯ್ಯ ಅವರಿಗೂ ಅನ್ವಯ ಆಗಬೇಕಿದೆ ಎಂದು ಸುದ್ದಿಗಾರರ ಪ್ರಶ್ನೆಗೆ ಕೋಟ ಉತ್ತರಿಸಿದರು.
ಶಾಸಕ ಡಿ.ವೇದವ್ಯಾಸ ಕಾಮತ್, ವಿಧಾನ ಪರಿಷತ್ ಅಭ್ಯರ್ಥಿ ಕಿಶೋರ್‌ಕುಮಾರ್ ಪುತ್ತೂರು, ಜಿಲ್ಲಾ ಬಿಜೆಪಿಯ ಪ್ರಧಾನ
ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ನಿತಿನ್‌ಕುಮಾರ್ , ಸಂಜಯ ಪ್ರಭು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net