More

    ತಿದ್ದುಪಡಿಗೊಂಡ ಕಾಯ್ದೆಗಳು ರೈತರ ಪರ: ಸಚಿವ ಕೋಟ ಶ್ರೀನಿವಾಸ ಪೂಜಾರಿ

    ಪಡುಬಿದ್ರಿ: ರೈತರಿಗೆ ಮೋಸವಾಗಬಾರದೆಂಬ ಚಿಂತನೆಯೊಂದಿಗೆ ಕಂದಾಯ ಕಾಯ್ದೆ ತಿದ್ದುಪಡಿ ಮಾಡಲಾಗಿದೆ. ಕೃಷಿ ಭೂಮಿ ಖರೀದಿಯ ಕಾಯ್ದೆಯಡಿ ಯಾರು ಬೇಕಿದ್ದರೂ ಭೂಮಿ ಖರೀದಿಸಬಹುದಾಗಿದೆ. ನೀರಾವರಿ ಭೂಮಿಯನ್ನು ಕೃಷಿಗೆ ಹೊರತು ಅನ್ಯ ಉದ್ದೇಶಕ್ಕೆ ಬಳಕೆ ಮಾಡುವಂತಿಲ್ಲ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದರು.

    ಕಾಪುವಿನಲ್ಲಿ ಶುಕ್ರವಾರ ಬಿಜೆಪಿ ರೈತ ಮೋರ್ಚಾ ಆಯೋಜಿಸಿದ ನೂತನ ಕೃಷಿ ಮಸೂದೆ ಸತ್ಯ ಮತ್ತು ಮಿಥ್ಯೆ ಪ್ರಚಾರ ಕಾರ್ಯಕ್ರಮದಲ್ಲಿ ಕರಪತ್ರ ಬಿಡುಗಡೆ ಮಾಡಿ ಮಾತನಾಡಿದರು.
    ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರೂ ಕಾಯ್ದೆಗಳು ರೈತರ ಪರವಾಗಿದ್ದು, ವಿಪಕ್ಷಗಳು ಜನರನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿವೆ. ತಳಮಟ್ಟದ ಕಾರ್ಯಕರ್ತರು ಮತ್ತು ಮತದಾರರಿಗೆ ಈ ಬಗ್ಗೆ ಮನವರಿಕೆ ಮಾಡಿಕೊಡುವ ಅಗತ್ಯವಿದೆ. ನಮ್ಮ ಬೆಳೆಯನ್ನು ನಾವೇ ಮಾರಾಟ ಮಾಡುವ ಉದ್ದೇಶವನ್ನು ಇಟ್ಟುಕೊಂಡು ಕಾಯ್ದೆ ಜಾರಿಗೆ ತರಲಾಗಿದೆ. ನೇರ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಅವಕಾಶವಿದೆ ಎಂದರು.
    ಶಾಸಕ ಲಾಲಾಜಿ ಆರ್. ಮೆಂಡನ್, ಜಿಪಂ ಅಧ್ಯಕ್ಷ ದಿನಕರ ಬಾಬು, ಸದಸ್ಯರಾದ ಗೀತಾಂಜಲಿ ಸುವರ್ಣ, ಶಿಲ್ಪಾ ಜಿ. ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts