More

    Shakti Yojana Effect: ಆಟೋ ಚಾಲಕರು ಅಕ್ಷರಶಃ ಬೀದಿಗೆ ಬಿದ್ದಿದ್ದಾರೆ…ತಿಂಗಳಿಗೆ 10 ಸಾವಿರ ರೂ. ಪರಿಹಾರ ನೀಡಬೇಕು: ಕೋಟ ಶ್ರೀನಿವಾಸ ಪೂಜಾರಿ

    ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಚುನಾವಣೆ ಸಮಯದಲ್ಲಿ ನೀಡಿದ್ದ 5 ಗ್ಯಾರಂಟಿಗಳ ಪೈಕಿ ಮೊದಲು ಜಾರಿಗೆ ಬಂದಿದ್ದು ‘ಶಕ್ತಿ’ ಯೋಜನೆ. ಸಾಮಾನ್ಯ ಸರ್ಕಾರಿ ಬಸ್‌ಗಳಲ್ಲಿ ಶೂನ್ಯ ದರದ ಟಿಕೆಟ್ ಪಡೆದು ಮಹಿಳೆಯರು ಉಚಿತವಾಗಿ ಸಂಚಾರ ನಡೆಸುವ ಯೋಜನೆ ಇದಾಗಿದೆ. ಈ ಕುರಿತಾಗಿ ಪರ- ವಿರೋಧ ಕಾಮೆಂಟ್​​ಗಳು ಬರುತ್ತಿವೆ. ಇದೀಗ ಈ ವಿಚಾರ ಅಧಿವೇಶನದಲ್ಲೂ ಚರ್ಚೆಯಾಗಿದೆ.

    ಇದನ್ನೂ ಓದಿ: ಜಮೀನು ವಿವಾದ; ತೆಂಗಿನ ತೋಟದಲ್ಲಿ ಮಹಿಳೆಯ ಬಟ್ಟೆ ಹರಿದು ಥಳಿತ

    ರಾಜ್ಯ ವಿಧಾನ ಪರಿಷತ್​ನಲ್ಲಿ ಬಜೆಟ್ ಅಧಿವೇಶನ ಗುರುವಾರದ ಕಾರ್ಯಕಲಾಪಗಳು ಅರಂಭವಾಗಿವೆ. ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಅನುಪಸ್ಥಿತಿಲ್ಲಿ ಉಪ ಸಭಾಪತಿ ಎಂಕೆ ಪ್ರಾಣೇಶ್ ಸ್ಥಾನದಲ್ಲಿ ಆಸೀನರಾಗಿದ್ದಾರೆ.

    ಇದನ್ನೂ ಓದಿ: ಒಂದು ಸೀರೆ ತಯಾರಿಸಲು ಬೇಕಾಯ್ತು 2 ವರ್ಷ; ಇದರ ಬೆಲೆ ಬರೋಬ್ಬರಿ 21.9 ಲಕ್ಷ ರೂ.!

    ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಶೂನ್ಯವೇಳೆಯಲ್ಲಿ ಪ್ರಸ್ತಾಪ ಮಾಡಿದ್ದಾರೆ. ಶಕ್ತಿಯೋಜನೆಯಿಂದ ಆಟೋ ಚಾಲಕರ ಜೀವನದ ಮೇಲೆ ಹೊಡೆತ ಬಿದ್ದಿದೆ. ಈ ಬಗ್ಗೆ ತಮ್ಮ ಸಮಸ್ಯೆಯನ್ನ ಆಟೋಚಾಲಕರು ಹೇಳಿಕೊಂಡಿದ್ದಾರೆ. ಆದರೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಕೂಡಲೇ ಆಟೋ ಚಾಲಕರನ್ನ ಕರೆಸಿ ಅವರ ಜೊತೆ ಮಾತುಕತೆ ನಡೆಸಿ. ತಿಂಗಳಿಗೆ 10 ಸಾವಿರ ರೂ. ಪರಿಹಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.

    ಇದನ್ನೂ ಓದಿ: ಗಂಡನ ಕುಡಿತದ ಚಟಕ್ಕೆ ಬೇಸತ್ತ ಪತ್ನಿ; ತಾನೂ ವಿಷ ಕುಡಿದು ಮಕ್ಕಳಿಗೂ ವಿಷ ಉಣಿಸಿದಳು

    ಮಹಿಳಾ ಪ್ರಯಾಣಿಕರು, ಪ್ರತಿದಿನ ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣಿಸುವ ಮೂಲಕ ಈ ಯೋಜನೆಯ ಪ್ರಯೋಜನಗಳನ್ನು ಪಡೆಯುತ್ತಿದ್ದಾರೆ. ಸರ್ಕಾರಿ ಬಸ್‌ಗಳು ಸಾರ್ವಜನಿಕರ ಜೀವನಾಡಿ ಮಾತ್ರವಲ್ಲದೆ ಮಹಿಳಾ ಪ್ರಯಾಣಿಕರ ಆದ್ಯತೆಯ ಸಾರಿಗೆ ವಿಧಾನವಾಗಿದೆ. ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಮಹಿಳೆಯರಿಗಾಗಿ ಉಚಿತ ಪ್ರಯಾಣ “ಶಕ್ತಿ ಯೋಜನೆ” ಪರಿಣಾಮ ಆಟೋ ಚಾಲಕರು ಅಕ್ಷರಶಃ ಬೀದಿಗೆ ಬೀದಿದ್ದಾರೆ. ಶಕ್ತಿ ಯೋಜನೆಯ ಎಫೆಕ್ಟ್ ನಿಂದ ಆಟೋ ಚಾಲಕರ ಜೀವನ ಬೀದಿಗೆ ಬೀಳುವ ಸ್ಥಿತಿ ನಿರ್ಮಾಣವಾಗಿದೆ.

    ಇದನ್ನೂ ಓದಿ:  ಮಾನ್ಸೂನ್ ಸಮಯದಲ್ಲಿ ಫಿಟ್ ಆಗಿರಲು 5 ಸಲಹೆಗಳು ಇಂತಿವೆ…

    ವಿಧಾನಸಭೆ ಚುನಾವಣೆ ಮುಗಿದ ಬಳಿಕ ಸರ್ವಪಕ್ಷಗಳು ಮುಂಬರುವ ಲೋಕಸಭೆ, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಸಿದ್ಧತೆಯಲ್ಲಿದ್ದರೆ ಆಡಳಿತ ಪಕ್ಷ ಕಾಂಗ್ರೆಸ್‌ ಮುಂದಿನ ವರ್ಷ ನಡೆಯಲಿರುವ ವಿಧಾನ ಪರಿಷತ್‌ ಚುನಾವಣೆಗೂ ಸಿದ್ಧತೆ ನಡೆಸಿದೆ.

    ಒಂದು ಸೀರೆ ತಯಾರಿಸಲು ಬೇಕಾಯ್ತು 2 ವರ್ಷ; ಇದರ ಬೆಲೆ ಬರೋಬ್ಬರಿ 21.9 ಲಕ್ಷ ರೂ.!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts