More

    ಚುನಾವಣೆಗೋಸ್ಕರ ಕಾಂಗ್ರೆಸ್​​ ಗ್ಯಾರಂಟಿ ಯೋಜನೆ ಘೋಷಿಸಿದ್ದು: ಕೋಟ ಶ್ರೀನಿವಾಸ್ ಪೂಜಾರಿ

    ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ (Kota Srinivas Poojari) ಆಕ್ರೋಶ ವ್ಯಕ್ತಪಡಿಸಿದ್ದು, ಕಾಂಗ್ರೆಸ್​​​ನ ಗ್ಯಾರಂಟಿ ಯೋಜನೆ ಕೇವಲ ಚುನಾವಣೆಗಾಗಿ ಮಾಡಿದ್ದು ಅಷ್ಟೇ ಎಂದು ಹೇಳಿದ್ದಾರೆ.

    ಇದನ್ನೂ ಓದಿ:  ಹೆಂಡತಿಯ ಮೃತದೇಹ ಫ್ರೀಜ್​ನಲ್ಲಿಟ್ಟ ಗಂಡ: ಬಾವನ ಮೇಲೆ ಹತ್ಯೆ ಆರೋಪ ಹೊರಿಸಿದ ಬಾಮೈದ

    ಅಕ್ಕಿ ವಿಚಾರ ಸೇರಿದಂತೆ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ ಕೋಟ ಶ್ರೀನಿವಾಸ ಪೂಜಾರಿ, “ಸತ್ಯಕ್ಕೆ ದೂರವಾದ ಭಾಷಣವನ್ನು ರಾಜ್ಯಪಾಲರಿಂದ ಮಾಡಿಸಿದ್ದಾರೆ. ಅಕ್ಕಿ ವಿಚಾರದಲ್ಲಿ ಕೂಡ ಸುಳ್ಳು ಹೇಳುತ್ತಿದ್ದಾರೆ. ಕಾಂಗ್ರೆಸ್ ಆಹಾರ ಭದ್ರತಾ ಕಾಯ್ದೆ ಮಾಡಿದ್ದು ನಿಜ. ಆದ್ರೆ, ಅದಕ್ಕೆ ಆಗ ಯಾವುದೇ ಕಾಯ್ದೆ ಇರಲಿಲ್ಲ. ಈಗ ಪ್ರಧಾನಿ ಮೋದಿ ಅವರು ಕಾಯ್ದೆ ಹಾಕಿದ್ದಾರೆ” ಎಂದು ಹೇಳಿದರು.

    “2.5 ಲಕ್ಷ ಟನ್ ಅಕ್ಕಿಯನ್ನು ಕೇಂದ್ರ ಸರ್ಕಾರ ರಾಜ್ಯಕ್ಕೆ ಕಳುಹಿಸುತ್ತದೆ. ಈ ಅಕ್ಕಿಗೆ ರಾಜ್ಯ ಸರ್ಕಾರ ಏನಾದರೂ ಹಣ ಪಾವತಿ ಮಾಡುತ್ತಿದೆಯಾ? 5 ಕೆಜಿ ಅಕ್ಕಿ ಕೇಂದ್ರ ಸರ್ಕಾರ ಉಚಿತವಾಗಿ ಕೊಡುತ್ತಿದೆ. ಕಾಂಗ್ರೆಸ್​ ಘೋಷಿಸಿರುವ ಗ್ಯಾರಂಟಿ ಯೋಜನೆಗಳಲ್ಲಿ ಯುವ ನಿಧಿ ಯೋಜನೆ ಬಗ್ಗೆ ಕೂಡ ತಪ್ಪು ಮಾಹಿತಿ ನೀಡುತ್ತಿದೆ. ಹಲವೆಡೆ ಜನರಿಗೆ ಬಸ್ ಗಳು ಸರಿಯಾದ ಸಮಯಕ್ಕೆ ಸಿಗುತ್ತಿಲ್ಲ. ಇದರಿಂದ ಪ್ರಯಾಣಿಕರು ಪರದಾಡುವಂತ ಪರಿಸ್ಥಿತಿ ಎದುರಾಗಿದೆ” ಎಂದು ಹೇಳಿದರು.

    ಇದನ್ನೂ ಓದಿ: ಗ್ಯಾರಂಟಿ ಪರಿಣಾಮ ಆರು ತಿಂಗಳಲ್ಲಿ ತಿಳಿಯುತ್ತೆ: ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಹೇಳಿಕೆ

    “ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಕುರಿತು ನಾವು ಹೋರಾಟ ಮಾಡಲಿದ್ದೇವೆ. ನಾಳೆ ಮಂಗಳವಾರ ಸದನದ ಒಳಗೆ ಮತ್ತು ಹೊರಗೆ ಹೋರಾಟ ಮಾಡಲು ಸಜ್ಜಾಗಿದ್ದೇವೆ” ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts