More

  ಕೋಟತಟ್ಟು ಕೊರಗ ಕಾಲನಿ ದೌರ್ಜನ್ಯ ಪ್ರಕರಣ, ಪೊಲೀಸರ ನಿರೀಕ್ಷಣಾ ಜಾಮೀನು ಅರ್ಜಿ ವಜಾ

  ಕುಂದಾಪುರ: ಕೋಟತಟ್ಟು ಕೊರಗರ ಕಾಲನಿ ನಿವಾಸಿಗಳ ಮೇಲೆ ಪೊಲೀಸ್ ದೌರ್ಜನ್ಯ ಪ್ರಕರಣದ ಆರೋಪಿಗಳಾದ ಎಸ್‌ಐ, ಹೆಡ್‌ಕಾನ್‌ಸ್ಟೇಬಲ್ ಸೇರಿದಂತೆ ಏಳು ಮಂದಿ ಪೊಲೀಸರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕುಂದಾಪುರ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾಗೊಳಿಸಿದೆ. ಕೋಟತಟ್ಟು ಗ್ರಾಮ ಚಿಟ್ಟಿಬೆಟ್ಟುವಿನ ಗಣಪ ಎಂಬುವರ ಮನೆಯಲ್ಲಿ ಡಿ.27ರಂದು ರಾತ್ರಿ ಮೆಹಂದಿ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಆಗಿನ ಕೋಟ ಎಸ್‌ಐ ಸಂತೋಷ್ ಬಿ.ಪಿ., ಹೆಡ್‌ಕಾನ್‌ಸ್ಟೇಬಲ್ ರಾಮಣ್ಣ, ಅಶೋಕ್ ಶೆಟ್ಟಿ, ಮಂಜುನಾಥ್ ಮತ್ತು ಇತರ ಪೊಲೀಸರು ನುಗ್ಗಿ ಲಾಠಿ ಪ್ರಹಾರ ನಡೆಸಿ ದೌರ್ಜನ್ಯ ಎಸಗಿದ್ದರೆಂದು ಮಧುಮಗ ರಾಜೇಶ್ ದೂರು ನೀಡಿದ್ದರು. ಅದರಂತೆ ಕೋಟ ಪೊಲೀಸ್ ಠಾಣೆಯಲ್ಲಿ ಇವರ ವಿರುದ್ಧ ಪ್ರಕರಣ ದಾಖಲಾಗಿತ್ತು.
  ಎಸೈ ಸೇರಿದಂತೆ ಏಳು ಮಂದಿ ಪೊಲೀಸರು, ಜ.3ಕ್ಕೆ ಕುಂದಾಪುರ ಜಿಲ್ಲಾ ಹೆಚ್ಚುವರಿ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶ ರವೀಂದ್ರ ಜೋಷಿ ಅರ್ಜಿ ವಜಾಗೊಳಿಸಿ ಆದೇಶ ನೀಡಿದ್ದಾರೆ.

  See also  ಕೊರಗರ ಸ್ವಾಭಿಮಾನಿ ಬದುಕಿಗೆ ತಣ್ಣೀರು

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts