19ರಂದು ಕೋಟಿ-ಚೆನ್ನಯ ಕ್ರೀಡೋತ್ಸವ

Published on

ಬಂಟ್ವಾಳ: ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ, ಯುವವಾಹಿನಿ ಬಂಟ್ವಾಳ ಹಾಗೂ ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿಯ ಸಹಕಾರದೊಂದಿಗೆ ಬಂಟ್ವಾಳ ತಾಲೂಕುಮಟ್ಟದ ಕೋಟಿ-ಚೆನ್ನಯ ಕ್ರೀಡೋತ್ಸವ ಜನವರಿ 19ರಂದು ಬಂಟ್ವಾಳ ಭಂಡಾರಿಬೆಟ್ಟು ಎಸ್.ವಿ.ಎಸ್. ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಬಂಟ್ವಾಳ ತಾಲೂಕು ಬಿಲ್ಲವ ಸೇವಾ ಸಮಿತಿ ಅಧ್ಯಕ್ಷ ಸಂಜೀವ ಪೂಜಾರಿ ಗುರುಕೃಪಾ ಹೇಳಿದರು.

ಬಿ.ಸಿ.ರೋಡ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತಾಲೂಕಿನ 24 ಬಿಲ್ಲವ ಗ್ರಾಮ ಸಮಿತಿಗಳ ತಂಡಗಳು ವಿವಿಧ ಗುಂಪು ಸ್ಪರ್ಧೆಯಲ್ಲಿ ಭಾಗವಹಿಸಲಿವೆ. ಮಕ್ಕಳು, ಹಿರಿಯರು, ಮಹಿಳೆಯರು ಸೇರಿದಂತೆ ಎಲ್ಲ ವಿಭಾಗಗಳಲ್ಲಿ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದರು.

ಕ್ರೀಡೋತ್ಸವ ಸಮಿತಿ ಸಂಚಾಲಕ ಬೇಬಿ ಕುಂದರ್ ಮಾಹಿತಿ ನೀಡಿ, ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಕ್ರೀಡೋತ್ಸವ ಉದ್ಘಾಟಿಸಲಿದ್ದಾರೆ. ಸಂಘದ ಅಧ್ಯಕ್ಷ ಬಿ.ಸಂಜೀವ ಪೂಜಾರಿ ಗುರುಕೃಪಾ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಗೌರವ ರಕ್ಷೆ ಸ್ವೀಕರಿಸಲಿದ್ದಾರೆ. ಡಿವೈಎಸ್‌ಪಿ ಎಸ್.ವಿಜಯ ಪ್ರಸಾದ್ ಧ್ವಜಾರೋಹಣ ಮಾಡಲಿದ್ದಾರೆ. ಪಡುಮಲೆ ಕೋಟಿ-ಚೆನ್ನಯ ಜನ್ಮಸ್ಥಾನ ಸಂಚಲನಾ ಸಮಿತಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಕ್ರೀಡಾ ಜ್ಯೋತಿ ಹಸ್ತಾಂತರಿಸಲಿದ್ದಾರೆ. ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಎಚ್.ಎಸ್.ಸಾಯಿರಾಮ್, ಕೋಶಾಧಿಕಾರಿ ಆರ್.ಪದ್ಮರಾಜ್, ಭಾರತ್ ಕೋ-ಅಪರೇಟಿವ್ ಬ್ಯಾಂಕ್ ಮುಂಬೈ ಅಧ್ಯಕ್ಷ ಸೂರ್ಯಕಾಂತ್ ಜೆ.ಸುವರ್ಣ, ಬೆಂಗಳೂರು ಬಿಲ್ಲವರ ಅಸೋಸಿಯೇಷನ್ ಅಧ್ಯಕ್ಷ ವೇದಕುಮಾರ್, ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್‌ಚಂದ್ರ ಡಿ.ಸುವರ್ಣ, ಬಂಟ್ವಾಳ ಪುರಸಭೆಯ ಅಧ್ಯಕ್ಷ ವಾಸು ಪೂಜಾರಿ ಲೊರೆಟ್ಟೋ, ಮಾಜಿ ಶಾಸಕ ರುಕ್ಮಯ ಪೂಜಾರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

ಸಮಾರೋಪ ಸಮಾರಂಭದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಬಹುಮಾನ ವಿತರಣೆ ಮಾಡಲಿದ್ದಾರೆ. ಕೋಟಿ-ಚೆನ್ನಯ ಕ್ರೀಡೋತ್ಸವ ಸಮಿತಿ ಸಂಚಾಲಕ ಬೇಬಿ ಕುಂದರ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ಕ್ರೀಡೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಪೂಜಾರಿ ಮೆಲ್ಕಾರ್, ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿ ಅಧ್ಯಕ್ಷೆ ಶೈಲಜಾ ರಾಜೇಶ್, ಯುವವಾಹಿನಿ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ, ಬಿಲ್ಲವ ಸಂಘದ ಕಾರ್ಯದರ್ಶಿ ರಮೇಶ್ ಎಂ.ತುಂಬೆ, ಕ್ರೀಡೋತ್ಸವ ಸಮಿತಿ ಜತೆ ಕಾರ್ಯದರ್ಶಿ ಹರೀಶ್ ಕೋಟ್ಯಾನ್ ಕುದನೆ, ಸುಂದರ ಪೂಜಾರಿ ಬೋಳಂಗೋಡಿ, ನಾಗೇಶ್ ನೈಬೇಲು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net