ಕೊಟ್ಟೂರು: ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಜ್ಞಾನ ತೀರ ಅಗತ್ಯವಿದೆ. ಶೈಕ್ಷಣಿಕ ಪ್ರಗತಿ ಸಾಧಿಸಲು ಅನುಕೂಲವಾಗಲಿದೆ ಎಂದು ಜಿಪಂ ಮಾಜಿ ಸದಸ್ಯ ಎಂ.ಎಂ.ಜೆ.ಹರ್ಷವರ್ಧನ ಹೇಳಿದರು.
ಪಟ್ಟಣದ ಗೊರ್ಲಿ ಶರಣಪ್ಪ ಸರ್ಕಾರಿ ಪಪೂ ಕಾಲೇಜಿನಲ್ಲಿ ಬುಧವಾರ ಗಣಕಯಂತ್ರ ಪ್ರಯೋಗಾಲಯ ಉದ್ಘಾಟಿಸಿ ಮಾತನಾಡಿದರು. ಆದರ್ಶ ಯೋಜನೆಯಡಿ ಸ್ಮಾರ್ಟ್‌ಕ್ಲಾಸ್ ಮತ್ತು ಕಂಪ್ಯೂಟರ್ ಲ್ಯಾಬ್ ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿದರು.
ವಿಜಯನಗರ ಜಿಲ್ಲೆಯ ಪಪೂ ಶಿಕ್ಷಣ ಇಲಾಖೆ ನೋಡಲ್ ಅಧಿಕಾರಿ ಎನ್.ಸಿ.ಹವಾಲ್ದಾರ್ ಮಾತನಾಡಿ, ಕೊಟ್ಟೂರು ಶೈಕ್ಷಣಿಕವಾಗಿ ರಾಜ್ಯದಲ್ಲಿ ಗುರುತಿಸಿಕೊಂಡಿದ್ದು, ಇಲ್ಲಿನ ವಿದ್ಯಾರ್ಥಿಗಳು ವ್ಯಾಸಂಗದಲ್ಲಿ ಮುಂದಿದ್ದಾರೆ. ಕಂಪ್ಯೂಟರ್ ಲ್ಯಾಬ್, ಸ್ಮಾರ್ಟ್ ಕ್ಲಾಸ್‌ಗಳನ್ನು ಸದುಪಯೋಗ ಪಡಿಸಿಕೊಂಡು ಕಾಲೇಜಿಗೆ ಕೀರ್ತಿ ತರಬೇಕು ಎಂದರು.
ಪ್ರಾಚಾರ್ಯ ಗೌಡರ್ ಸೋಮಶೇಖರಪ್ಪ, ಕಂಪ್ಯೂಟರ್ ಉಪನ್ಯಾಸಕಿ ಹರ್ಷಿತಾ ಇತರರಿದ್ದರು.