More

    ಕಂದಗಲ್ಲು ಗ್ರಾಮದ ಮುರಾರ್ಜಿ ಶಾಲೆಯ 31 ವಿದ್ಯಾರ್ಥಿಗಳಿಗೆ ಕರೊನಾ

    ಕೊಟ್ಟೂರು: ತಾಲೂಕಿನ ಕಂದಗಲ್ಲು ಗ್ರಾಮದ ಮುರಾರ್ಜಿ ದೇಸಾಯಿ ವಸತಿ ವಿದ್ಯಾಲಯದ 31 ವಿದ್ಯಾರ್ಥಿಗಳಿಗೆ ಕರೊನಾ ಸೋಂಕು ಇರುವುದು ದೃಢಪಟ್ಟಿದೆ ಎಂದು ತಾಲೂಕು ವೈದ್ಯಾಧಿಕಾರಿ ಷಣ್ಮುಖನಾಯ್ಕ ತಿಳಿಸಿದರು.

    ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಶಯಗೊಂಡು ಎಲ್ಲ ವಿದ್ಯಾರ್ಥಿಗಳನ್ನು ಬುಧವಾರ ಮತ್ತು ಗುರುವಾರ ಪರೀಕ್ಷೆಗೆ ಒಳಪಡಿಸಿದಾಗ ವಿದ್ಯಾಲಯದ ಲ್ಯಾಬ್‌ಟೆಕ್ನಿಶಿಯನ್ ಹಾಗೂ 22 ಪಿಯುಸಿ ಹಾಗೂ 9 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಲ್ಲಿ ಕರೊನಾ ಸೋಂಕು ಪತ್ತೆಯಾಗಿದೆ ಎಂದು ತಿಳಿಸಿದರು.

    ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ವಿದ್ಯಾಲಯದ ಪ್ರಾಚಾರ್ಯ ರಸೂಲ್, ಶಾಲೆಯನ್ನು ಮುಚ್ಚಿಲ್ಲ. ಸೋಂಕು ಇರುವ ವಿದ್ಯಾರ್ಥಿಗಳನ್ನು ಪ್ರತ್ಯೇಕ ಕಟ್ಟಡದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

    ಒಂದು ಡೆಸ್ಕಿನಲ್ಲಿ ಇಬ್ಬರು ವಿದ್ಯಾರ್ಥಿಗಳನ್ನು ಕೂಡಿಸಿ ಪಾಠ ಮಾಡಲಾಗುತ್ತಿದೆ. ಉಳಿದ 210 ವಿದ್ಯಾರ್ಥಿಗಳ ಕರೊನಾ ಪರೀಕ್ಷೆ ನಡೆಸಲಾಗುತ್ತಿದೆ. ಅಲ್ಲಿಯೇ ತಾತ್ಕಾಲಿಕ ಆರೋಗ್ಯ ಶಿಬಿರ ಏರ್ಪಡಿಸಿ ಆರೋಗ್ಯ ಸಿಬ್ಬಂದಿಯಿಂದ ಚಿಕಿತ್ಸೆ ಕೊಡಿಸಲಾಗುವುದು ಎಂದು ತಿಳಿಸಿದರು.

    ವಿಷಯ ತಿಳಿಯುತ್ತಿದ್ದಂತೆ ತಹಸೀಲ್ದಾರ್ ಜಿ. ಅನಿಲ್‌ಕುಮಾರ್, ಹರಪನಹಳ್ಳಿ ಸಹಾಯಕ ಆಯುಕ್ತ ಚಂದ್ರಶೇಖರಯ್ಯ ವಿದ್ಯಾಲಯಕ್ಕೆ ಭೇಟಿ ನೀಡಿ ತಾಲೂಕು ಆರೋಗ್ಯಾಧಿಕಾರಿ ಡಾ. ಷಣ್ಮುಖನಾಯ್ಕ ಮತ್ತು ಸಿಬ್ಬಂದಿಗೆ ವಿದ್ಯಾರ್ಥಿಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದರು. 32 ವಿದ್ಯಾರ್ಥಿಗಳಿಗೆ ಕರೊನಾ ಸೋಂಕು ತಗುಲಿರುವುದಕ್ಕೆ ಪಾಲಕರು ತಮ್ಮ ಮಕ್ಕಳ ಯೋಗಕ್ಷೇಮ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts