More

    ಕೊಟ್ಟೂರೇಶ್ವರಸ್ವಾಮಿ ದೇವಸ್ಥಾನಕ್ಕೆ ಒಂದು ಕೋಟಿ ರೂ.ವೆಚ್ಚದಲ್ಲಿ ಬೆಳ್ಳಿಬಾಗಿಲು ನಿರ್ಮಾಣ

    ಕೊಟ್ಟೂರು: ಪಟ್ಟಣದ ಕೊಟ್ಟೂರೇಶ್ವರ ಸ್ವಾಮಿ ದೇವಸ್ಥಾನದ ಮುಖ್ಯದ್ವಾರಕ್ಕೆ ಒಂದು ಕೋಟಿ ರೂ.ವೆಚ್ಚದಲ್ಲಿ ಬೆಳ್ಳಿ ಬಾಗಿಲು ನಿರ್ಮಿಸಲಾಗುತ್ತಿದ್ದು, ಜನವರಿ ಮೊದಲ ವಾರದಲ್ಲಿ ಅಳವಡಿಕೆ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಎಂದು ಧಾರ್ಮಿಕ ದತ್ತಿ ಇಲಾಖೆ ಸಹಾಯಕ ಆಯುಕ್ತ ಪ್ರಕಾಶ್ ರಾವ್ ಹೇಳಿದರು.

    ಕೊಟ್ಟೂರೇಶ್ವರ ಸ್ವಾಮಿ ಕಾರ್ತಿಕೋತ್ಸವದ ನಿಮಿತ್ತ ಸೋಮವಾರ ದೇವಸ್ಥಾನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1 ಕೋಟಿ ರೂ. ವೆಚ್ಚದಲ್ಲಿ ಬೆಳ್ಳಿಬಾಗಿಲು ನಿರ್ಮಾಣ ಮಾಡಲಾಗುವುದು. ಅದಕ್ಕೆ ಅಂದಾಜು 150 ಕೆಜಿ ಬೆಳ್ಳಿ ವಿನಿಯೋಗವಾಗಲಿದೆ. ದೇವಸ್ಥಾನದಲ್ಲಿ ಭಕ್ತರು ಅರ್ಪಿಸಿದ 50 ಕೆ.ಜಿ. ಬೆಳ್ಳಿ ಇದೆ. ಉಳಿದ 100 ಕೆಜಿ ಬೆಳ್ಳಿಯ ಅಗತ್ಯವಿದೆ. ಬೇಕಿರುವ ಬೆಳ್ಳಿಯನ್ನು ಭಕ್ತರಿಂದ ಸಂಗ್ರಹಿಸಬೇಕಾ ಇಲ್ಲವೆ ಧಾರ್ಮಿಕ ದತ್ತಿ ಇಲಾಖೆಯಿಂದ ಹಾಕಬೇಕು ಎಂಬುದನ್ನು ಕೊಟ್ಟೂರೇಶ್ವರ ದೇವಸ್ಥಾನದ ಪ್ರಧಾನ ಧರ್ಮಕರ್ತ ಗಂಗಾಧರಯ್ಯ ಅವರೊಂದಿಗೆ ಚರ್ಚಿಸಿ ಮುಂದಿನ ಯೋಜನೆ ರೂಪಿಸಲಾಗುವುದು ಎಂದರು.

    ಈ ಮೊದಲು ಬೆಳ್ಳಿಬಾಗಿಲು ನಿರ್ಮಾಣಕ್ಕೆ ಟೆಂಡರ್ ಕರೆಯಲಾಗಿತ್ತು. ಕರೊನಾದಿಂದಾಗಿ ಯೋಜಿತ ಕಾರ್ಯ ಆರಂಭವಾಗಲಿಲ್ಲ. ಈಗ ಮತ್ತೊಮ್ಮೆ ಟೆಂಡರ್ ಕರೆದು ಬೆಳ್ಳಿಬಾಗಿಲು ನಿರ್ಮಾಣ ಕಾರ್ಯ ಆರಂಭಿಸಲಾಗುವುದು ಎಂದು ಮಾಹಿತಿ ನೀಡಿದರು ದೇವಸ್ಥಾನದ ಧಾರ್ಮಿಕ ದತ್ತಿ ಇಲಾಖೆ ಇಒ ಗಂಗಾಧರಪ್ಪ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts