More

    ಸಮಾನ ವೇತನ ಜಾರಿಗೊಳಿಸದಿದ್ದರೆ ಹೋರಾಟ: ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ಎಚ್ಚರಿಕೆ

    ಕೊಟ್ಟೂರು: ಸರ್ಕಾರ 2022ರೊಳಗೆ ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿಗೊಳಿಸದಿದ್ದರೆ ರಾಜ್ಯಾದ್ಯಂತ ಹೋರಾಟ ಹಮ್ಮಿಕೊಳ್ಳುವುದಾಗಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು.

    ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಪಕ್ಕದ ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡಿನಲ್ಲಿ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಲಾಗುತ್ತದೆ. ಆದರೆ, ಕರ್ನಾಟಕದಲ್ಲಿ ವೇತನ ತಾರತಮ್ಯ ಹೆಚ್ಚಿದ್ದು, ಪರಿಹರಿಸಬೇಕಿದೆ ಎಂದರು. 20 ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಸಂಘದ ಅನೇಕ ಕೆಲಸಗಳನ್ನು ಕೇವಲ ಎರಡೇ ವರ್ಷದಲ್ಲಿ ಮಾಡಿದ್ದೇನೆ. ಇನ್ನೂ ಸಾಕಷ್ಟು ಕೆಲಸಗಳು ಬಾಕಿ ಇದ್ದು, ಆದಷ್ಟು ಶೀಘ್ರ ಪೂರ್ಣಗೊಳಿಸುತ್ತೇನೆ. ಸರ್ಕಾರಿ ನೌಕರರನ್ನು ಸಾರ್ವಜನಿಕವಾಗಿ ನಿಂದಿಸುವ ಪ್ರಕರಣಗಳು ಸಂಘದ ಗಮನಕ್ಕೆ ಬಂದರೆ ಕ್ರಮಕೈಗೊಳ್ಳಲಿದೆ. ಭ್ರಷ್ಟತೆಯಲ್ಲಿ ತೊಡಗಿರುವ ಸಿಬ್ಬಂದಿಯನ್ನು ಸಂಘ ಬೆಂಬಲಿಸುವುದಿಲ್ಲ ಎಂದು ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದರು.

    ರಾಜ್ಯದಲ್ಲಿ ಏಳು ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿದ್ದಾರೆ. 87 ಇಲಾಖೆಗಳಿದ್ದು, ಯಾವುದೇ ನೌಕರರನ್ನು ನಿರ್ಲಕ್ಷೃ ಮಾಡುವುದಿಲ್ಲ ಎಂದರು. ಸಂಘದ ತಾಲೂಕು ಅಧ್ಯಕ್ಷ ಜಗದೀಶ, ರಾಜ್ಯ ಉಪಾಧ್ಯಕ್ಷರಾದ ರುದ್ರಪ್ಪ, ಶ್ರೀನಿವಾಸ, ವಿಜಯನಗರ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ಗೌಡ, ತಾಲೂಕು ಗೌರವಾಧ್ಯಕ್ಷ ಮನೋಹರಸ್ವಾಮಿ, ಕಾರ್ಯದರ್ಶಿ ಜಿ.ಸಿದ್ದಪ್ಪ, ಉಪಾಧ್ಯಕ್ಷ ಎಸ್.ಎಂ.ಗುರುಬಸವರಾಜ್, ಕೆ.ನಾಗರಾಜ್, ಸುಜಾತಾ, ಪೊನ್ನಮ್ಮ ಇತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts