ಕೊಟ್ಟೂರು ಪಟ್ಟಣ ಪಂಚಾಯಿತಿ ಮೇಲ್ದರ್ಜೆಗೆ ಪ್ರಯತ್ನ – ಶಾಸಕ ಎಸ್.ಭೀಮಾನಾಯ್ಕ ಭರವಸೆ

ಕೊಟ್ಟೂರು: ಪಟ್ಟಣದಲ್ಲಿ ಜನಸಂಖ್ಯೆ ಹೆಚ್ಚಾಗಿರುವುದರಿಂದ ಪಟ್ಟಣ ಪಂಚಾಯಿತಿ ಪುರಸಭೆಯಾಗಿ ಮೇಲ್ದರ್ಜೆಗೇರಲು ಎಲ್ಲ ಅರ್ಹತೆ ಹೊಂದಿದೆ. ಹೀಗಾಗಿ ಪುರಸಭೆ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಶಾಸಕ ಎಸ್.ಭೀಮಾನಾಯ್ಕ ಹೇಳಿದರು.

ಪಟ್ಟಣದಲ್ಲಿ ಶನಿವಾರ ಆಟೋ ನಿಲ್ದಾಣ ಉದ್ಘಾಟಿಸಿ ಮಾತನಾಡಿದರು. ಪಟ್ಟಣದ ತೇರುಗಡ್ಡೆ, ಉಜ್ಜಯಿನಿ ಸರ್ಕಲ್, ಸರ್ಕಾರಿ ಆಸ್ಪತ್ರೆ, ಬಸ್ ನಿಲ್ದಾಣ ಬಳಿ ಆಟೋ ನಿಲ್ದಾಣ ನಿರ್ಮಿಸಲಾಗುವುದು. ನ.9ರಂದು ನಟ ಶಂಕರನಾಗ್ ಜನ್ಮ ದಿನಾಚರಣೆ ಅಂಗವಾಗಿ ಪಟ್ಟಣದ ಆಟೋ ಚಾಲಕರಿಗೆ ಖಾಕಿ ಸಮವಸ್ತ್ರ ನೀಡಲಾಗುವುದು ಎಂದು ಭರವಸೆ ನೀಡಿದರು.

ಜಿಪಂ ಸದಸ್ಯ ಹರ್ಷವರ್ಧನ್, ಆಟೋ ಚಾಲಕರ ಸಂಘದ ಅಧ್ಯಕ್ಷ ಶಿವಯ್ಯ ಮಾತನಾಡಿದರು. ಜಿಪಂ ಮಾಜಿ ಉಪಾಧ್ಯಕ್ಷ ದೊಡ್ಡ ರಾಮಣ್ಣ, ನಟ ಸುಧಾಕರ ಗೌಡ, ಪಪಂ ಮಾಜಿ ಸದಸ್ಯ ಪೂಜಾರ್ ನಾಗಪ್ಪ, ಎಪಿಎಂಸಿ ಅಧ್ಯಕ್ಷ ಬೂದಿ ಶಿವಕುಮಾರ್ ಇತರರಿದ್ದರು.

Leave a Reply

Your email address will not be published. Required fields are marked *