More

    ಟೀಕಿಸುವವರು ಗ್ಯಾರಂಟಿ ಭಾಗ್ಯ ತ್ಯಜಿಸಲಿ

    ಕಳಸ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಬಿಟ್ಟಿ ಭಾಗ್ಯ ಎಂದು ಟೀಕಿಸುವವರು ಆ ಭಾಗ್ಯಗಳನ್ನು ತ್ಯಜಿಸಲಿ ಎಂದು ಕೆಪಿಸಿಸಿ ಸದಸ್ಯ ಕೆ.ಆರ್.ಪ್ರಭಾಕರ್ ಸವಾಲೆಸೆದರು.
    ಪಕ್ಷದ ಕಚೆೇರಿಯಲ್ಲಿ ಶುಕ್ರವಾರ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಬಿಡುಗಡೆ ಮಾಡಿ ಮಾತನಾಡಿದ ಅವರು, ಯಾರು ಬಿಟ್ಟಿ ಭಾಗ್ಯ ಅನ್ನುತ್ತಾರೋ ಅವರೇ ಆ ಯೋಜನೆಯ ಲಾನುಭವಿಗಳಾಗಿದ್ದಾರೆ. ಗ್ಯಾರಂಟಿ ಯೋಜನೆಯಿಂದ ಸಾಕಷ್ಟು ಕುಟುಂಬಗಳು ಜೀವನ ನಿರ್ವಹಿಸುತ್ತಿವೆ. ಯಾರಿಗೂ ತಾರತಮ್ಯ ಮಾಡದೆ ಎಲ್ಲರಿಗೂ ಸಮಾನವಾಗಿ ಯೋಜನೆ ಜಾರಿಗೊಳಿಸಲಾಗಿದೆ ಎಂದರು.
    ಯೋಜನೆ ಮೂಲಕ ಒಂದು ಕುಟುಂಬಕ್ಕೆ ವಾರ್ಷಿಕ 50 ಸಾವಿರ ರೂ. ಸಿಗುತ್ತಿದೆ. ಬಿಜೆಪಿ ಅಭ್ಯರ್ಥಿಗೆ ಮತ ಕೇಳುತ್ತಿಲ್ಲ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮತ ಕೇಳುತ್ತಿದ್ದಾರೆ. ನಾವು ರಾಜ್ಯ ಸರ್ಕಾರ ಕೊಟ್ಟ ಗ್ಯಾರಂಟಿಯ ಸಾಫಲ್ಯದ ಮೇಲೆ ಮತ್ತು ನಮ್ಮ ಅಭ್ಯರ್ಥಿಯನ್ನು ಮುಂದಿಟ್ಟುಕೊಂಡು ಮತ ಕೇಳುತ್ತಿದ್ದೇವೆ ಎಂದು ಹೇಳಿದರು.
    ತಾಪಂ ಮಾಜಿ ಸದಸ್ಯ ರಾಜೇಂದ್ರ ಹಿತ್ಲುಮಕ್ಕಿ ಮಾತನಾಡಿ, ಲೋಕಸಭಾ ಚುನಾವಣೆಗೂ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ನೀಡುತ್ತಿದೆ. ಇದರಲ್ಲಿ ಪ್ರತಿ ವಿದ್ಯಾವಂತ ಯುವಜನರಿಗೆ ಉದ್ಯೋಗದ ಗ್ಯಾರಂಟಿ, 1 ಲಕ್ಷ ರೂ. ವೇತನ, ಬಡ ಕುಟುಂಬದ ಮಹಿಳೆಗೆ ಪ್ರತಿ ವರ್ಷ 1 ಲಕ್ಷ ರೂ. ನೀಡಲಾಗುತ್ತದೆ ಎಂದು ತಿಳಿಸಿದರು.
    ತಾಪಂ ಮಾಜಿ ಸದಸ್ಯ ಮಹಮ್ಮದ್ ರಫೀಕ್ ಮಾತನಾಡಿ, ಹಿಂದಿನ ಬಾರಿ ಚುನಾವಣಾ ಬಹಿಷ್ಕಾರದ ಘೋಷಣೆ ಆಗಿದ್ದ ಹೇರಡಿಕೆ, ಅಳಗೋಡು, ಮುಜೆಕಾನು, ಹಂದಿಹಡ್ಡು, ಕಂಚಿನಕೆರೆ, ಬಲಿಗೆ ಪ್ರದೇಶದ ಬಹುತೇಕ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
    ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೇಣಿಕ್, ಪಕ್ಷದ ಪ್ರಧಾನ ಕಾರ್ಯದರ್ಶಿ ವಿಶ್ವನಾಥ್, ಪಂಚಾಯಿತಿ ಸದಸ್ಯ ವೀರೇಂದ್ರ, ಗಣೇಶ್ ಭಟ್, ಸಂಶುದ್ದೀನ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts