More

    ಯಡಿಯೂರಪ್ಪ ರಾಜಿನಾಮೆ ನೀಡಿ, ಇಲ್ಲ ಈಶ್ವರಪ್ಪನ್ನ ಸಂಪುಟದಿಂದ ತೆಗೆಯಿರಿ ಎಂದ ಡಿಕೆ ಶಿವಕುಮಾರ್

    ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಸಚಿವ ಕೆಎಸ್ ಈಶ್ವರಪ್ಪ ಅವರು ರಾಜ್ಯಪಾಲರಿಗೆ ದೂರು ನೀಡಿದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಯಡಿಯೂರಪ್ಪ ಅವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

    ಈ ಕುರಿತು ಬುಧವಾರ ಟ್ವೀಟ್ ಮಾಡಿರುವ ಅವರು, ಬಿಜೆಪಿ ಸರ್ಕಾರದ ಹಿರಿಯ ಸಚಿವರು ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ರಾಜ್ಯಪಾಲರಿಗೆ ನೀಡಿದ ದೂರಿನಲ್ಲಿ ಗಂಭೀರ ಆರೋಪ ಮಾಡಿದ್ದಾರೆ. ಈ ಕೂಡಲೇ ಮುಖ್ಯಮಂತ್ರಿ ಅವರು ತಮ್ಮ ರಾಜಿನಾಮೆ ಸಲ್ಲಿಸಬೇಕು ಇಲ್ಲವೇ ಈಶ್ವರಪ್ಪ ಆರೋಪ ಸುಳ್ಳೆಂದು ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

    ಕರ್ನಾಟಕ ಸರ್ಕಾರ ಭ್ರಷ್ಟಾಚಾರದಿಂದ ತುಂಬಿ ತುಳುಕುತ್ತಿದೆ ಎಂದು ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.

    ಬುಧವಾರ ರಾಜ್ಯಪಾಲ ವಜುಬಾಯಿ ವಾಲಾ ಹಾಗೂ ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ಪತ್ರ ಬರೆದಿರುವ ಗ್ರಾಮೀಣಾಭಿವೃದ್ದಿ ಸಚಿವ ಕೆಎಸ್ ಈಶ್ವರಪ್ಪ ಅವರು, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ನನ್ನ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು.

    ಮುಕೇಶ್ ಅಂಬಾನಿ ಮನೆ ಬಳಿ ಸ್ಪೋಟಕ ಇಟ್ಟವ ಅಂತೂ ಸಿಕ್ಕಿಬಿದ್ದ!

    ಇಸ್ರತ್ ಜಹಾನ್ ಎನ್​ಕೌಂಟರ್​ ಪ್ರಕರಣ: ಕೊನೆಯ ಮೂವರು ಆರೋಪಿಗಳನ್ನೂ ಖುಲಾಸೆಗೊಳಿಸಿದ ಸಿಬಿಐ ನ್ಯಾಯಾಲಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts