ಲೋಕಸಭೆ ಚುನಾವಣೆಗೂ ಮುನ್ನ ಕೆಪಿಸಿಸಿಗೆ ಮೇಜರ್​ ಸರ್ಜರಿ?

ಬೆಂಗಳೂರು: ಲೋಕಸಭೆ ಚುನಾವಣೆಗೂ ಮುನ್ನ ಕರ್ನಾಟಕ ಪ್ರದೇಶ ಕಾಂಗ್ರೆಸ್​ ಸಮಿತಿ (ಕೆಪಿಸಿಸಿ)ಯಲ್ಲಿ ಭಾರಿ ಬದಲಾವಣೆಗಳನ್ನು ಮಾಡಲು ನೂತನ ಅಧ್ಯಕ್ಷ ದಿನೇಶ್​ ಗುಂಡೂರಾವ್​ ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

ಅಧಿಕಾರಕ್ಕೆ ಬಂದ ನಂತರ ಪಕ್ಷ ಸಂಘಟನೆಗೆ ಕೆಲಸಗಳನ್ನು ಚುರುಕುಗೊಳಿಸಲು ದಿನೇಶ್​ ಗುಂಡೂರಾವ್​ ಮುಂದಾಗಿದ್ದು, ಜಿಲ್ಲಾ ಘಟಕ, ತಾಲೂಕು ಘಟಕದ ಪದಾಧಿಕಾರಿಗಳ ಬದಲಾವಣೆಗೆ ನಿರ್ಧಾರ ತೆಗೆದುಕೊಂಡಿದ್ದಾರೆ.

ಪಕ್ಷದ ವಿರುದ್ಧ ಕೆಲಸ ಮಾಡಿದವರ ಮೇಲೆ ಕ್ರಮ ತೆಗೆದುಕೊಳ್ಳುವುದಕ್ಕೆ ನೂತನ ಅಧ್ಯಕ್ಷರು ಮುಂದಾಗಿದ್ದು, ಅವರ ವಿರುದ್ಧ ಮಾಹಿತಿ ಕಲೆ ಹಾಕುತ್ತಿದ್ದಾರೆ. ಮಾಹಿತಿ ಬಂದ ನಂತರ ಅವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.