More

    40 ವರ್ಷದ ಬಳಿಕ ಗ್ರಹಣ ದಿನದಂದು ಕಾವೇರಿ ನದಿಯಲ್ಲಿ ಡಿಕೆಶಿ ಮಾಡಿದ್ದೇನು?

    ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬರೋಬ್ಬರಿ 40 ವರ್ಷಗಳ ಬಳಿಕ ಭಾನುವಾರ ಕಾವೇರಿ ನದಿಯಲ್ಲಿ ಈಜಾಡಿ ಕೆಲ ಸಮಯ ಕಳೆದಿದ್ದಾರೆ.

    ಭಾನುವಾರ ‪ಸೂರ್ಯ ಗ್ರಹಣ ಇತ್ತು. ಅಂದು ಸಂಜೆ ಕಾವೇರಿ ನದಿಯಲ್ಲಿ ಡಿಕೆಶಿ ಈಜಾಡುತ್ತ ಕಾಲ ಕಳೆದಿದ್ದಾರೆ. ಗ್ರಹಣ ಮುಗಿದ ನಂತರ ಕುಟುಂಬಸ್ಥರೊಂದಿಗೆ ಅಲ್ಲಿನ ಈಶ್ವರ ದೇವಸ್ಥಾನದಲ್ಲಿ ಪೂಜೆಯನ್ನೂ ಸಲ್ಲಿಸಿದ್ದಾರೆ. ನದಿಯಲ್ಲಿ ಈಜುತ್ತಿರುವ ಮತ್ತು ಕುಟುಂಬಸ್ಥರೊಂದಿಗೆ ಕ್ಲಿಕ್ಕಿಸಿದ ಫೋಟೋಗಳನ್ನು ಫೇಸ್​ಬುಕ್​ನಲ್ಲಿ ಶೇರ್ ಮಾಡಿಕೊಂಡಿದ್ದು, ಈ ವೇಳೆ ಶಾಲಾ- ಕಾಲೇಜು ದಿನ ಮತ್ತು ತಂದೆಯೊಂದಿಗೆ ಕಾಲ ಕಳೆದಿದ್ದ ಕ್ಷಣಗಳನ್ನೂ ಮೆಲುಕು ಹಾಕಿದ್ದಾರೆ. ಅವರೇ ಬರೆದುಕೊಂಡ ನೆನಪುಗಳು ಇಲ್ಲಿದೆ ನೋಡಿ.

    ಇದನ್ನೂ ಓದಿರಿ ರಾಜವಂಶಸ್ಥ ಯದುವೀರ್ ವಿರುದ್ಧವೇ ತಿರುಗಿಬಿದ್ದ ಸಂಘಟನೆಗಳು!

    40 ವರ್ಷದ ಬಳಿಕ ಗ್ರಹಣ ದಿನದಂದು ಕಾವೇರಿ ನದಿಯಲ್ಲಿ ಡಿಕೆಶಿ ಮಾಡಿದ್ದೇನು?“40 ವರ್ಷಗಳ ನಂತರ ಭಾನುವಾರ ಸಂಜೆ 4:30ಕ್ಕೆ ನಮ್ಮ ಹಳ್ಳಿಯ ಬಳಿ ಕಾವೇರಿ ನದಿಯಲ್ಲಿ ಈಜಾಡಿ ನಾನು ಕೆಲ ಸಮಯ ಕಳೆದದ್ದು ನಿಜಕ್ಕೂ ಸಂತಸ ನೀಡಿದೆ. ನನ್ನ ಶಾಲಾ ಹಾಗೂ ಕಾಲೇಜು ದಿನಗಳಲ್ಲಿ ನಾನು ಮತ್ತು ನನ್ನ ತಂದೆಯೊಂದಿಗೆ ಇದೇ ಸ್ಥಳದಲ್ಲಿ ಮೀನು ಹಿಡಿಯುತ್ತಿದ್ದೆ. ನದಿಯಲ್ಲಿ ಈಜಾಡುತ್ತಿದ್ದ ಕ್ಷಣಗಳು ಮತ್ತೊಮ್ಮೆ ಕಣ್ಣ ಮುಂದೆ ಹಾದುಹೋದವು” ಎಂದು ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದಾರೆ.

    40 ವರ್ಷಗಳ ನಂತರ ಭಾನುವಾರ ಸಂಜೆ 4:30ಕ್ಕೆ ನಮ್ಮ ಹಳ್ಳಿಯ ಬಳಿ ಕಾವೇರಿ ನದಿಯಲ್ಲಿ ಈಜಾಡಿ ನಾನು ಕೆಲ‌ ಸಮಯ ಕಳೆದದ್ದು ನಿಜಕ್ಕೂ ಸಂತಸ ನೀಡಿದೆ….

    DK Shivakumar ಅವರಿಂದ ಈ ದಿನದಂದು ಪೋಸ್ಟ್ ಮಾಡಲಾಗಿದೆ ಭಾನುವಾರ, ಜೂನ್ 21, 2020

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts