ಬೆಂಗಳೂರು: ದೇಶದಲ್ಲಿ ಕರೊನಾ ಎರಡನೇ ಅಲೆ ವ್ಯಾಪಿಸುತ್ತಿರುವ ಈ ಸಂಕಷ್ಟದ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೇಶವನ್ನುದ್ದೇಶಿಸಿ ಜನತೆಗೆ ದೈರ್ಯ ತುಂಬಿದ್ದಾರೆ.
ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಪ್ರಧಾನಿ ಮೋದಿ ಅವರ ಭಾಷಣವನ್ನು ಟೀಕಿಸಿದ್ದಾರೆ. ಪ್ರಸ್ತುತ ಬಿಕ್ಕಟ್ಟಿನ ಈ ಸಂದರ್ಭಕ್ಕೆ ಪ್ರಧಾನಿಯವರು ಯಾವುದೇ ಗಣನೀಯ ಪರಿಹಾರ ನೀಡಿಲ್ಲ ಎಂದು ಆರೋಪಿಸಿದ್ದಾರೆ.
ಆಕ್ಸಿಜನ್ ಕೊರತೆ, ಐಸಿಯು ಹಾಗೂ ಔಷಧಿ ಕೊರತೆ ಬಗ್ಗೆ ಪ್ರಧಾನಿಯವರು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸದಿರುವುದು ಆಶ್ಚರ್ಯ ಮೂಡಿಸಿದೆ. ದೇಶಕ್ಕೆ ಎದುರಾಗಿರುವ ಆಪತ್ತನ್ನು ಈ ಮೂಲಕ ಪ್ರಧಾನಿಯವರು ನಿರಾಕರಿಸುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
There is nothing substantial in the PM's address. No solutions offered regarding the shortages of Oxygen, ICU Beds & life saving drugs.
Is the PM denying or unaware of the emergency situation the nation is facing?
It's like there is no govt & people have to fend for themselves.
— DK Shivakumar (@DKShivakumar) April 20, 2021
ಪ್ರಧಾನಿ ಅವರು ತಮ್ಮ ಭಾಷಣದಲ್ಲಿ ಮತ್ತೊಮ್ಮೆ ಲಾಕ್ಡೌನ್ ಮಾಡುವುದಿಲ್ಲ ಎಂದು ಘೋಷಣೆ ಮಾಡಿದ್ದಾರೆ. ಕೋವಿಡ್ ತಡೆ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದನ್ನು ಮರೆಯದಿರೋಣ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
ದೇಶ ಮತ್ತೊಂದು ದೊಡ್ಡ ಸಂಕಷ್ಟಕ್ಕೆ ತೆರೆದುಕೊಂಡಿದೆ. ಹಲವಾರು ಜನ ಜೀವ ಕಳೆದುಕೊಂಡಿದ್ದಾರೆ. ಈ ಸಂಕಷ್ಟದ ಸಮಯದಲ್ಲಿ ನಾನು ನಿಮ್ಮೊಂದಿಗೆ ಇದ್ದೇನೆ ಎಂದು ಹೇಳಿದ್ದಾರೆ.
ಮತ್ತೊಮ್ಮೆ ಲಾಕ್ಡೌನ್ ಮಾಡುವುದಿಲ್ಲ ಎಂದು ಘೋಷಣೆ ಮಾಡಿದ ಪ್ರಧಾನಿ ಮೋದಿ