ಸುರೇಶ್​ ಅಂಗಡಿಯವರ ಮನೆಗೆ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​

D.K.Shivakumar 01
Published on

ಬೆಳಗಾವಿ: ಇತ್ತೀಚೆಗೆ ನಿಧನರಾದ ಕೇಂದ್ರ ಸಚಿವ ಸುರೇಶ್​ ಅಂಗಡಿಯವರ ಮನೆಗೆ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರು ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದರು.

ಬೆಳಗಾವಿಯ ವಿಶ್ವೇಶ್ವರಯ್ಯ ನಗರದ ಸಂಪಿಗೆ ರಸ್ತೆಯಲ್ಲಿರುವ ಮನೆಗೆ ಭೇಟಿ ನೀಡಿ, ಸುರೇಶ್​ ಅಂಗಡಿಯವರ ಪತ್ನಿ, ತಾಯಿ ಮತ್ತು ಮಕ್ಕಳೊಂದಿಗೆ ಮಾತನಾಡಿ, ಸಮಾಧಾನ ಮಾಡಿದರು.

ಅದಕ್ಕೂ ಮೊದಲು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಸುರೇಶ್​ ಅಂಗಡಿಯವರ ಅಂತ್ಯಕ್ರಿಯೆಯನ್ನು ಇಲ್ಲಿಯೇ ಮಾಡಬಹುದಿತ್ತು. ದೆಹಲಿಯಿಂದ ಪಾರ್ಥಿವ ಶರೀರ ತರಬಹುದಿತ್ತು ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net