More

    ಇದೆಲ್ಲವೂ ಬಿಜೆಪಿಯ ವೈಫಲ್ಯವೋ, ಷಡ್ಯಂತ್ರವೋ: ರಾಜ್ಯ ಕಾಂಗ್ರೆಸ್​

    ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಪಕ್ಷದ ಅಭ್ಯರ್ಥಿಗಳು ಬಿರುಸಿನ ಮತಬೇಟೆಯಲ್ಲಿ ತೊಡಗಿದ್ದು ವಿಭಿನ್ನವಾದ ತಂತ್ರಗಾರಿಕೆಯನ್ನು ಹೂಡುತ್ತಿದ್ದಾರೆ.

    ಇನ್ನು ಗುರುವಾರ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣ ಮಾಸುವ ಮುನ್ನವೇ ಇದೀಗ ಮತ್ತೊಂದು ಘಟನೆ ವರದಿಯಾಗಿದ್ದು ಕಾಂಗ್ರೆಸ್ಸಿಗರ ಕಣ್ಣು ಕೆಂಪಾಗಿಸಿದೆ.

    ಕಾಂಗ್ರೆಸ್​ ಪಕ್ಷದ ಹಿರಿಯ ನಾಯಕ ಮಾಜಿ ಡಿಸಿಎಂ ಪರಮೇಶ್ವರ್​ ಮೇಲೆ ಕಲ್ಲು ತೂರಾಟ ನಡೆದಿದೆ. ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಕೈಗೊಂಡ ವೇಳೆ ಘಟನೆ ಸಂಭವಿಸಿದ್ದು ಹೊಸ ವಿಚಾದಕ್ಕೆ ಎಡೆ ಮಾಡಿಕೊಟ್ಟಿದೆ.

    ವ್ಯವಸ್ಥಿತವಾಗಿ ದಾಳಿ ನಡೆಸಲಾಗುತ್ತಿದೆ

    ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ಕರ್ನಾಟಕ ಕಾಂಗ್ರೆಸ್​​ ಡಾ.ಜಿ. ಪರಮೇಶ್ವರ್ ಅವರ ಮೇಲೆ ಷಡ್ಯಂತ್ರ ರೂಪಿಸಿ ಕಲ್ಲು ತೂರಿದ ಘಟನೆಯು ಕರ್ನಾಟಕವೇ ತಲೆತಗ್ಗಿಸುವಂತಹದ್ದು. ವಿರೋಧ ಪಕ್ಷಗಳ ನಾಯಕರ ಮೇಲೆ ಮೊದಲಿಂದಲೂ ವ್ಯವಸ್ಥಿತವಾಗಿ ದಾಳಿ ನಡೆಸಲಾಗುತ್ತಿದೆ ಎಂದು ಕಿಡಿಕಾರಿದೆ.

    ಇದು ಅಮಿತ್ ಶಾ ಅವರ ಗಲಭೆ ನಡೆಯುತ್ತದೆ ಎಂಬ ಎಚ್ಚರಿಕೆಯ ಹಿಂದಿನ ಪೂರ್ವಭಾವಿ ತಯಾರಿಗಳೇ ದಲಿತ ನಾಯಕರ ಮೇಲೆ ಬಿಜೆಪಿಗೆ ಏಕಿಷ್ಟು ದ್ವೇಷ ಎಂದು ಪ್ರಶ್ನಿಸಿದೆ.

    ಇದನ್ನೂ ಒದಿ: ರಾಜ್ಯದಲ್ಲಿ ಇರುವುದು ಕಳ್ಳ ಸರ್ಕಾರ, ಪ್ರತಿ ಕೆಲಸದಲ್ಲೂ 40% ಕಮಿಷನ್​ ಪಡೆದಿದೆ: ರಾಹುಲ್​ ಗಾಂಧಿ

    ಯಾವ ಹಂತಕ್ಕೆ ತಂದಿಟ್ಟಿದ್ದೀರಿ

    ರಾಜ್ಯದ ಕಾನೂನು ಸುವ್ಯವಸ್ಥೆಯನ್ನ ಯಾವ ಹಂತಕ್ಕೆ ತಂದಿಟ್ಟಿದ್ದೀರಿ ಆರಗ ಜ್ಞಾನೇಂದ್ರ ಅವರೇ, ಸಿದ್ದರಾಮಯ್ಯ ಅವರ ಮೇಲೆ ಮೊಟ್ಟೆ ದಾಳಿ ಮಾಡಿದವರ ಮೇಲೆ ಕ್ರಮವಿಲ್ಲ, ಪರಮೇಶ್ವರ್​ ಅವರಿಗೆ ಸೂಕ್ತ ರಕ್ಷಣೆ ಇಲ್ಲ ಎಂದು ಹೌಹಾರಿದೆ.

    ಇದೆಲ್ಲವೂ ಬಿಜೆಪಿಯ ವೈಫಲ್ಯವೋ, ಷಡ್ಯಂತ್ರವೋ ಅಮಿತ್ ಶಾ ಅವರ ನಿರ್ದೇಶನದಂತೆ ಗಲಭೆಯುಕ್ತ ಕರ್ನಾಟಕ ಮಾಡಲು ತಯಾರಿಯೇ ಎಂದು ಸರಣಿ ಟ್ವೀಟ್​ ಮಾಡಿ ಪರಮೇಶ್ವರ್​ ಅವರ ಮೇಲಿನ ದಾಳಿಯನ್ನು ರಾಜ್ಯ ಕಾಂಗ್ರೆಸ್​ ಖಂಡಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts