More

    ಕರಾವಳಿ ಜನತೆ ಬಿಜೆಪಿ ಬೆಂಬಲಿಸುತ್ತಿರುವುದೇ ಆಶ್ಚರ್ಯಕರ: ಧ್ರುವನಾರಾಯಣ

    ಕರಾವಳಿ ಜನತೆ ಬಿಜೆಪಿ ಬೆಂಬಲಿಸುತ್ತಿರುವುದೇ ಆಶ್ಚರ್ಯಕರ: ಧ್ರುವನಾರಾಯಣ

    ಉಡುಪಿ: ದಕ್ಷಿಣ ಭಾರತದಲ್ಲಿ ಬಿಜೆಪಿ ಪ್ರಬಲವಾಗಿರುವ ಏಕೈಕ ರಾಜ್ಯ ಕರ್ನಾಟಕ. 2008ರಲ್ಲಿ ಅಧಿಕಾರಕ್ಕೆ ಬಂದ ಸರ್ಕಾರ 3 ಮುಖ್ಯಮಂತ್ರಿಗಳನ್ನು ಕಂಡಿತು. 2ನೇ ಬಾರಿ ಜಾರಕಿಹೊಳಿ ಪ್ರಕರಣದಿಂದ ರಾಜ್ಯದ ಜನರು ತಲೆತಗ್ಗಿಸುವಂತಾಗಿದೆ. ಆದರೂ ಪ್ರಗತಿಪರ ಕರಾವಳಿ ಜಿಲ್ಲೆಗಳಲ್ಲಿ ಜನರು ಸತತವಾಗಿ ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ ಎಂಬುದೇ ಆಶ್ಚರ್ಯಕರ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವ ನಾರಾಯಣ ಹೇಳಿದರು.
    ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನಪ್ರತಿನಿಧಿಗಳ ನಡವಳಿಕೆ ಮಾದರಿಯಾಗಿರಬೇಕು. ಆದರೆ ಜವಾಬ್ದಾರಿಯುತ 6 ಜನ ಮಂತ್ರಿಗಳು ತಮ್ಮ ವಿರುದ್ಧ ಸುದ್ದಿ ಪ್ರಸಾರ ತಡೆಗೆ ಕೋರ್ಟ್‌ಗೆ ಹೋಗಿರುವುದು. ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿಕೊಂಡಂತಾಗಿದೆ. ಬಿಜೆಪಿಗರು ನಮ್ಮದು ರಾಮಭಕ್ತ, ದೇಶಭಕ್ತರ ಪಕ್ಷವೆಂದು ಹೇಳಿಕೊಳ್ಳುತ್ತಾರೆ. ಇದೆಲ್ಲಾ ರಾಮ ಭಕ್ತರು ಮಾಡುವ ಕೆಲಸವೇ ಎಂದು ಪ್ರಶ್ನಿಸಿದರು.
    ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷವಾಗುತ್ತಿದೆ. ಈವರೆಗೆ ಯಾವುದೇ ಜನಪರ ಕಾರ್ಯಕ್ರಮ ಜಾರಿಗೊಳಿಸಿಲ್ಲ. ಮಂತ್ರಿಗಳಲ್ಲಿ ಸಮನ್ವಯತೆ ಇಲ್ಲ. ಇತಿಹಾಸದಲ್ಲೇ ಮೊದಲ ಬಾರಿ ಒಂದೇ ದಿನ 4 ಇಲಾಖೆ ಬದಲಾವಣೆ ಮಾಡಿದ್ದಾರೆ ಎಂದು ಹೇಳಿದರು.
    ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಕೆಪಿಸಿಸಿ ಕಾರ್ಯದರ್ಶಿ ಎಂ.ಎ. ಗಫೂರ್, ಮಂಗಳೂರು ಕಾರ್ಪೊರೇಟರ್ ನವೀನ್ ಡಿಸೋಜಾ, ಎನ್‌ಎಸ್‌ಯುಐ ಅಧ್ಯಕ್ಷ ಸೌರಭ್ ಬಲ್ಲಾಳ್, ಯುವಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್ ಉಪಸ್ಥಿತರಿದ್ದರು.

    Array

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts