ಎಲ್ಲಾ ಕ್ಷೇತ್ರಗಳಿಂದ ಕೆಪಿಜೆಪಿ ಅಭ್ಯರ್ಥಿಗಳು ಸ್ಪರ್ಧಿಸುತ್ತಾರೆಂದ ಉಪೇಂದ್ರ, ಸುಮಲತಾ, ಪ್ರಕಾಶ್​ ರೈ ಬಗ್ಗೆ ಹೇಳಿದ್ದೇನು?

ಬೆಂಗಳೂರು: ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ(ಕೆಪಿಜೆಪಿ)ದಿಂದ 28 ಲೋಕಸಭಾ ಕ್ಷೇತ್ರಗಳಿಂದಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಪಕ್ಷದ ಸಂಸ್ಥಾಪಕ ಹಾಗೂ ನಟ ಉಪೇಂದ್ರ ಅವರು ತಿಳಿಸಿದರು.

ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಕೆಪಿಜೆಪಿ ಪಕ್ಷದಿಂದ ಕಣಕ್ಕಿಳಿದಿರುವ ಅಭ್ಯರ್ಥಿಯೊಬ್ಬರ ನಾಮಪತ್ರ ಸಲ್ಲಿಕೆಗೆ ಜತೆಯಲ್ಲಿ ಆಗಮಿಸಿದ್ದ ಉಪೇಂದ್ರ ಅವರು ನಾಮಪತ್ರ ಸಲ್ಲಿಕೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಸದ್ಯ 14 ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಕೆ ಮಾಡಿದ್ದೇವೆ. ಈ ಬಾರಿ ನಾನು ಸ್ಪರ್ಧಿಸುವುದಿಲ್ಲ, ಬದಲಾಗಿ 28 ಕ್ಷೇತ್ರಗಳಲ್ಲಿಯೂ ಪ್ರಜೆಗಳೇ ಸ್ಪರ್ಧಿಸುತ್ತಾರೆ. ಉಳಿದ ಅಭ್ಯರ್ಥಿಗಳ ಹೆಸರು ಇದೇ 30ಕ್ಕೆ ಬಹಿರಂಗಪಡಿಸುತ್ತೇನೆ ಎಂದು ತಿಳಿಸಿದರು.

ನಾನು ಜನರ ಪರ ಪ್ರಚಾರ ಮಾಡ್ತೀನಿ
ಪ್ರಕಾಶ್ ರೈ, ಸುಮಲತಾ ಅವರ ಪರ ಪ್ರಚಾರಕ್ಕೆ ಹೋಗುತ್ತೀರ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಅವರಿಬ್ಬರೂ ಸ್ಟಾರ್​ಗಳು, ಹಾಗಾಗಿ ಅವರ ಪರ ಅವರೇ ಪ್ರಚಾರ ಮಾಡಿಕೊಳ್ಳುವಷ್ಟು ಸಮರ್ಥರಿದ್ದಾರೆ. ನಾನು ಜನರ ಪರ ಪ್ರಚಾರ ಮಾಡುತ್ತೇನೆ ಎಂದು ಹೇಳಿದರು. (ದಿಗ್ವಿಜಯ ನ್ಯೂಸ್​)