ಕೆಪಿಎಸ್ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

adarsha supreetha
ಆದರ್ಶ, ಸುಪ್ರೀತಾ
Published on

ಕೊಕ್ಕರ್ಣೆ: ಜಿಲ್ಲಾ ಮಟ್ಟದ ಕ್ರೀಡಾಕೂಟದ 600 ಮೀ. ಓಟದಲ್ಲಿ ಪ್ರಥಮ ಸ್ಥಾನ ಪಡೆದ ಸುಪ್ರೀತಾ ಹಾಗೂ ಉದ್ದಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದ ಆದರ್ಶ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಕೊಕ್ಕರ್ಣೆಯ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಾಗಿದ್ದು, ಪ್ರಾಂಶುಪಾಲ, ಉಪಪ್ರಾಂಶುಪಾಲ ಸಹಿತ ಹಲವರು ಸಾಧಕರನ್ನು ಅಭಿನಂದಿಸಿದ್ದಾರೆ. ರಾಜ್ಯಮಟ್ಟದ ಕ್ರೀಡಾಕೂಟ ಶಿವಮೊಗ್ಗ ಹಾಗೂ ಕೋಲಾರದಲ್ಲಿ ನಡೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net