ಕೆಪಿಎಸ್ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

select
ಉಡುಪಿ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಪ್ರಶಸ್ತಿ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾದ ಕೊಕ್ಕರ್ಣೆ ಕೆಪಿಎಸ್ ಶಾಲೆಯ ವಿದ್ಯಾರ್ಥಿಗಳ ತಂಡ.
Published on

ಕೊಕ್ಕರ್ಣೆ: ಉಡುಪಿ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಕೊಕ್ಕರ್ಣೆಯ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ನಾಲ್ವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪದವಿ ಪೂರ್ವ ವಿಭಾಗದ 3000 ಮೀ. ಓಟದಲ್ಲಿ ಮತ್ತು 5000 ಮೀ. ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಕೌಶಿಕ್ ಚಿನ್ನದ ಪದಕ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರೌಢಶಾಲಾ ವಿಭಾಗದ 600 ಮೀ. ಓಟದಲ್ಲಿ ಸುಪ್ರೀತಾ ಚಿನ್ನದ ಪದಕ, ಉದ್ದ ಜಿಗಿತದಲ್ಲಿ ಆದರ್ಶ ಚಿನ್ನದ ಪದಕ ಪಡೆದಿದ್ದಾರೆ. ಪ್ರಾಥಮಿಕ ವಿಭಾಗದ ಎತ್ತರ ಜಿಗಿತದಲ್ಲಿ ಸುಮಂತ್ ಬೆಳ್ಳಿ ಪದಕ ಪಡೆದಿದ್ದಾರೆ. ಶಾಲೆಯ ಪ್ರಾಂಶುಪಾಲ, ಉಪಪ್ರಾಂಶುಪಾಲ, ಮುಖ್ಯ ಶಿಕ್ಷಕ, ಶಿಕ್ಷಕ ವೃಂದ ಸಹಿತ ಅನೇಕರು ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net