More

    ಕೆಪಿಎಸ್ಸಿ ಅನುಮಾನ ನಡೆ: ಕೆಪಿಎಸ್ಸಿ ಕಾರ್ಯದರ್ಶಿಗೆ ಸಿಎಸ್ ತರಾಟೆ?

    ಬೆಂಗಳೂರು: 2011ನೇ ಸಾಲಿನ ಗೆಜೆಟೆಡ್ ಪ್ರೊಬೆಷನರ್ಸ್​ನ 362 ಹುದ್ದೆಗಳ ರದ್ದತಿ ಬಳಿಕ ರಾಜ್ಯ ಸರ್ಕಾರ ಹೊಸದಾಗಿ ಅಧಿಸೂಚನೆ ಹೊರಡಿಸುವ ಮೊದಲೇ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್​ಸಿ) 2017-18ನೇ ಸಾಲಿನ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

    ಗೆಜೆಟೆಡ್ ಪ್ರೊಬೆಷನರ್ಸ್ ಹುದ್ದೆಯಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದ ನಂತರ 2011ರಲ್ಲಿ ಆಯ್ಕೆಯಾಗಿದ್ದ ಅಭ್ಯರ್ಥಿಗಳ ಪಟ್ಟಿಯನ್ನು ಕೈ ಬಿಟ್ಟಿತ್ತು. ರದ್ದಾದ ಹುದ್ದೆಗಳಿಗೆ ಮರು ಅಧಿಸೂಚನೆ ಹೊರಡಿಸಲು ಸರ್ಕಾರದ ಹಂತದಲ್ಲಿ ಇನ್ನೂ ಚರ್ಚೆ ನಡೆಯುತ್ತಿದೆ. ಈ ಮಧ್ಯೆ ಕೆಪಿಎಸ್​ಸಿ ಜ.31ರಂದು ಹೊಸದಾಗಿ 106 ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನಿಸಿದೆ. ರದ್ದಾದ ಹುದ್ದೆಗಳಿಗೆ ಹೊಸ ಅಧಿಸೂಚನೆ ಹೊರಡಿಸುವ ಸರ್ಕಾರದ ತೀರ್ಮಾನ ಹೊರಬಿದ್ದರೆ ತನ್ನ ತಪ್ಪುಗಳನ್ನು ಬಚ್ಚಿಡಲು ಸಾಧ್ಯವಿಲ್ಲವೆಂದು ಕೆಪಿಎಸ್​ಸಿ ಹೊಸ ನೇಮಕಕ್ಕೆ ಅಧಿಸೂಚನೆ ಹೊರಡಿಸಿದೆ ಎನ್ನಲಾಗಿದೆ.

    ಕೆಪಿಎಸ್​ಸಿ ಎಡವಟ್ಟು ಬಹಿರಂಗಗೊಳ್ಳುತ್ತಿದ್ದಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆಪಿಎಸ್​ಸಿ ಕಾರ್ಯದರ್ಶಿ ಅವರನ್ನು ಕರೆಸಿ ತರಾಟೆಗೆ ತೆಗೆದುಕೊಂಡಿದ್ದಾರೆಂದು ತಿಳಿದು ಬಂದಿದೆ. ಅಲ್ಲದೆ, ಕೆಪಿಎಸ್​ಸಿ ತಪ್ಪನ್ನು ಸರಿ ಮಾಡಿಕೊಳ್ಳಲು ಹಲವು ಮಾರ್ಗ ಹುಡುಕುತ್ತಿದೆ ಎನ್ನಲಾಗುತ್ತಿದೆ.

    ಸಚಿವ ಸಂಪುಟ ಸಭೆ: ಮಂಗಳವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ವಿಚಾರ ಚರ್ಚೆಗೆ ಬರಲಿದೆ. ಇಲ್ಲಿ ಹಳೇ ಅಧಿಸೂಚನೆ ವಿಚಾರ ಮತ್ತು ಅರ್ಜಿ ಸಲ್ಲಿಕೆಗೆ ಇರುವ ವಯೋಮಿತಿ ಸಡಿಲಗೊಳಿಸುವುದನ್ನು ರ್ಚಚಿಸಿ ಸಭೆಯ ಅಂತಿಮ ನಿರ್ಧಾರದ ತೆಗೆದುಕೊಳ್ಳಲಿದೆ ಎನ್ನಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts