More

    ಏ.1 ಮತ್ತು 2ರಂದು ಕನ್ನಡ ಭಾಷಾ ಪರೀಕ್ಷೆ: ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಹೇಳಿಕೆ

    ಮಂಡ್ಯ: ಕೆಪಿಎಸ್‌ಸಿ ವತಿಯಿಂದ ಏ.1 ಹಾಗೂ 2ರಂದು ಜಿಲ್ಲೆಯಲ್ಲಿ ನಡೆಯಲಿರುವ ಗ್ರೂಪ್ ಸಿ ಹುದ್ದೆಯ ಕನ್ನಡ ಭಾಷಾ ಪರೀಕ್ಷೆ/ಸ್ಪರ್ಧಾತ್ಮಕ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಸೂಚನೆ ನೀಡಿದರು.
    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಧಿಕಾರಿಗಳು ಕರ್ನಾಟಕ ಲೋಕಸೇವಾ ಆಯೋಗದ ಸೂಚನೆಯನ್ನು ಪಾಲನೆ ಮಾಡಿ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಜತೆಗೆ ಯಾವುದೇ ಆಕ್ರಮಗಳು ನಡೆಯದಂತೆ ಕ್ರಮವಹಿಸಿ ಎಂದರು.
    1ರಂದು ಬೆಳಗ್ಗೆ 11ಗಂಟೆಯಿಂದ 12ರವರೆಗೆ ಕನ್ನಡ ಭಾಷಾ ಪರೀಕ್ಷೆ, 2ರಂದು ಬೆಳಗ್ಗೆ 10 ಗಂಟೆಯಿಂದ 11.30 ರವರೆಗೆ ಸಾಮಾನ್ಯ ಜ್ಞಾನ ಪರೀಕ್ಷೆ ಹಾಗೂ ಮಧ್ಯಾಹ್ನ 2ಗಂಟೆಯಿಂದ 4 ರವರೆಗೆ ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲೀಷ್, ಕಂಪ್ಯೂಟರ್ ಜ್ಞಾನ ಪರೀಕ್ಷೆ ನಡೆಯಲಿದೆ. ಪರೀಕ್ಷೆಯನ್ನು ಸುಲಲಿತವಾಗಿ ನಡೆಸಲು ಜಿಲ್ಲೆಯಲ್ಲಿ ತ್ರಿಸದಸ್ಯ ಸಮಿತಿ ನೇಮಕ ಮಾಡಲಾಗಿದೆ. ಜತೆಗೆ ಮಾರ್ಗಾಧಿಕಾರಿ, ನಿರೀಕ್ಷಣಾ ಅಧಿಕಾರಿಗಳನ್ನು ನಿಯೋಜಿಸಿದ್ದು, ಪರೀಕ್ಷಾ ಕಾರ್ಯಗಳು ಸುಗಮವಾಗಿ ನಡೆಯಲು ಎಲ್ಲ ಹಂತದಲ್ಲೂ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದು ವಿವರಿಸಿದರು.
    ಕೊಠಡಿ ಮೇಲ್ವಿಚಾರಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಮೊಬೈಲ್ ೆನ್, ಎಲೆಕ್ಟ್ರಾನಿಕ್ ಸಾಧನಗಳನ್ನು ತರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಪರೀಕ್ಷೆ ನಡೆಯುವ ದಿನಗಳಂದು ಕೇಂದ್ರಗಳ ಸುತ್ತಲೂ 200 ಮೀ ಸುತ್ತಳತೆಯಲ್ಲಿ 144ನೇ ಕಲಂ ಜಾರಿಗೊಳಿಸಿ, ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್, ಕಂಪ್ಯೂಟರ್ ಹಾಗೂ ಸೈಬರ್ ಅಂಗಡಿಗಳನ್ನು ಮುಚ್ಚಿಸಲು ಕ್ರಮ ವಹಿಸಬೇಕು. ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳಿಗೆ ಉತ್ತೇಜನ ನೀಡುವಂತಹ ವ್ಯಕ್ತಿಗಳ ವಿರುದ್ಧ ದಂಡ ಪ್ರಕ್ರಿಯೆ ಸಂಹಿತೆ 1973ರ ಸೆಕ್ಷನ್ 107 ಮತ್ತು 110 ಅಡಿಯಲ್ಲಿ ಕ್ರಮವಹಿಸಲಾಗುವುದು ಎಂದರು.
    ಸಭೆಯಲ್ಲಿ ಡಿಡಿಪಿಐ ಎಸ್.ಟಿ.ಜವರೇಗೌಡ, ಡಿಡಿಪಿಯು ಉಮೇಶ್, ಜಿಲ್ಲಾ ಆಯುಷ್ ವೈದ್ಯಾಧಿಕಾರಿ ಸೀತಾಲಕ್ಷ್ಮೀ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ಎಸ್.ಎಚ್.ನಿರ್ಮಲಾ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts