ಬ್ಲೂಟೂತ್ ಬಳಸಿ KPSC ಪರೀಕ್ಷೆ ಬರೆಯುತ್ತಿದ್ದವ ಅರೆಸ್ಟ್

yadgiri exam
Published on

ಯಾದಗಿರಿ: ಇಂದು ರಾಜ್ಯಾದ್ಯಂತ ಕೆಪಿಎಸ್ಸಿಯ ವಿವಿಧ ಇಲಾಖೆಗಳ ಪರೀಕ್ಷೆ ನಡೆಯುತ್ತಿವೆ. ಬ್ಲೂಟೂತ್ ಬಳಸಿಕೊಂಡು ಸ್ಪರ್ಧಾತ್ಮಕ ಪರೀಕ್ಷೆ ಬರೆಯುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.

ಪಿಎಸ್‌ಐ ಪರೀಕ್ಷಾ ಹಗರಣ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿತ್ತು. ಇಂದು ರಾಜ್ಯಾದ್ಯಂತ ಕೆಪಿಎಸ್​ಸಿಯ ವಿವಿಧ ಇಲಾಖೆಗಳ ಪರೀಕ್ಷೆ ನಡೆಯುತ್ತಿದೆ. ಯಾದಗಿರಿಯಲ್ಲಿ ನಡೆದ ಪರೀಕ್ಷೆಯಲ್ಲಿ ಓರ್ವ ಅಭ್ಯರ್ಥಿ ಬ್ಲೂಟೂತ್ ಬಳಕೆ ಮಾಡಿ ಪರೀಕ್ಷೆ ಬರೆದಿದ್ದು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪುಟ್ಟಪ್ಪ ಬ್ಲೂಟೂತ್ ಬಳಕೆ ಮಾಡಿದ ಆರೋಪಿಯಾಗಿದ್ದು, ಪುಟ್ಟು ಮೂಲತಃ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗ್ರಾಮದ ಸೊನ್ನಾ ಗ್ರಾಮದವನಾಗಿದ್ದಾನೆ. ಪಿಎಸ್ ಐ ಹಗರಣದ ಕಿಂಗ್‌ಪಿನ್ ಆರ್‌ಡಿ ಪಾಟೀಲ್ ಇದೇ ಗ್ರಾಮದವನಾಗಿದ್ದಾನೆ ಎನ್ನಲಾಗಿದೆ. ಆರೋಪಿ ಪುಟ್ಟಪ್ಪ, ಆರೋಪಿ ತಂದೆ ರಾಜಕುಮಾರ ಸೇರಿದಂತೆ ಒಟ್ಟು ಮೂವರು ಆರೋಪಿಗಳನ್ನ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆಗೆ ಆಜ್ಞಾತ ಸ್ಥಳಕ್ಕೆ ಪೊಲೀಸರು ಕರೆದೊಯ್ದರು.

ಕಿವಿಯಲ್ಲಿ ಬ್ಲೂಟೂತ್ ಇಟ್ಟುಕೊಂಡು ಬರೆಯುತ್ತಿರುವುದನ್ನು ಪತ್ತೆ ಹಚ್ಚಿ ತದನಂತರ ಕಿವಿ ತಜ್ಞರ ಬಳಿ ಕರೆದೊಯ್ದು ಬ್ಲೂಟೂತ್ ಹೊರ ತೆಗೆದು ವಶಕ್ಕೆ ಪಡೆದು ಅಭ್ಯರ್ಥಿ ತ್ರಿಮೂರ್ತಿಯನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ. ಈ ಕುರಿತು ರಾಘವೇಂದ್ರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಕಲು ಅಭ್ಯರ್ಥಿಯೇ ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯಲು ಬಂದಿದ್ದಾಗಿ ಮಾಹಿತಿ ಸಿಕ್ಕಿದೆ. ಪೊಲೀಸರು ಅಭ್ಯರ್ಥಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಸೀನಿಯರ್ ಅಸಿಸ್ಟೆಂಟ್ ಹುದ್ದೆ, ಫುಡ್ ಕ್ಯಾಟಗೇರಿಜೇಷನ್ ಸಿಸ್ಟಮ್ ನ ಸೀನಿಯರ್ ಅಸಿಸ್ಟೆಂಟ್ ಸೇರಿ ವಿವಿಧ ನಿಗಮ ಮಂಡಳಿಗಳಲ್ಲಿ ಖಾಲಿ ಹುದ್ದೆ ಭರ್ತಿಗಾಗಿ ಪರೀಕ್ಷೆ ನಡೆಯುತ್ತಿದ್ದು ಯಾದಗಿರಿ ಜಿಲ್ಲೆಯ 17 ಪರೀಕ್ಷಾ ಕೇಂದ್ರಗಳಲ್ಲಿ 7,884 ಅಭ್ಯರ್ಥಿಗಳು ಕೆಪಿಎಸ್​ಸಿ ಪರೀಕ್ಷೆ ಬರೆಯುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net