blank

KPSC EXAME ಜ.19 ಹಾಗೂ 25 ರಂದು ಜಿಲ್ಲೆಯ 3 ಕೇಂದ್ರಗಳಲ್ಲಿ ಪರೀಕ್ಷೆ

KPSC EXAME

ಕಾರವಾರ KPSC EXAME : ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ಇಲಾಖೆಗಳ ಗ್ರೂಪ್ ‘ಬಿ’ ವೃಂದದ ಹುದ್ದೆಗಳ ನೇಮಕಾತಿ ಸಂಬಂಧ ಜ.19 ಮತ್ತು 25 ರಂದು ಪರೀಕ್ಷೆಗಳನ್ನು ನಡೆಸಲಿದ್ದು, ಈ ಪರೀಕ್ಷೆಗಳು ಅತ್ಯಂತ ಪಾರದರ್ಶಕವಾಗಿ, ಶಾಂತಿಯುತವಾಗಿ ಮತ್ತು ಯಶಸ್ವಿಯಾಗಿ ನಡೆಯಲು ಅಗತ್ಯವಿರುವ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಸೂಚನೆ ನೀಡಿದರು.
ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೆಪಿಎಸ್‌ಸಿ ವತಿಯಿಂದ ವಿವಿಧ ಇಲಾಖೆಗಳ ಗ್ರೂಪ್ ಬಿ ವೃಂದದ ಹುದ್ದೆಗಳ ನೇಮಕಾತಿ ಸಂಬಂಧ ನಡೆಸಲಾಗುತ್ತಿರುವ ಪರೀಕ್ಷೆಗಳ ಕುರಿತು, ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿತರಾಗಿರುವ ಅಧಿಕಾರಿಗಳೊಂದಿಗೆ
ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜನವರಿ 19 ರಂದು ಬೆಳಗ್ಗೆ 10 ರಿಂದ 11.30 ರವರೆಗೆ ಸಾಮಾನ್ಯ ಪತ್ರಿಕೆ ಪರೀಕ್ಷೆಯು ಕಾರವಾರ ನಗರದ 3 ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ಜನವರಿ 25 ರಂದು ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆವರೆಗೆ ನಿರ್ದಿಷ್ಟ ಪತ್ರಿಕೆ ಪರೀಕ್ಷೆಯು ನಗರದ 3 ಪರೀಕ್ಷಾ
ಕೇಂದ್ರಗಳಲ್ಲಿ ನಡೆಯಲಿದ್ದು, ಸಾಮಾನ್ಯ ಪತ್ರಿಕೆ ಪರೀಕ್ಷೆಗೆ 1112 ಅಭ್ಯರ್ಥಿಗಳು ಹಾಗೂ ನಿರ್ದಿಷ್ಟ ಪತ್ರಿಕೆಗೆ 1056 ಅಭ್ಯರ್ಥಿಗಳು
ಹಾಜರಾಗಲಿದ್ದಾರೆ ಎಂದರು.
KPSC EXAME ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ. ವ್ಯಾಪ್ತಿಯಲ್ಲಿ ಸಾರ್ವಜನಿಕ ಪ್ರವೇಶ ನಿಷೇಧಿಸಲಾಗುವುದು ಎಂದ ಅವರು ಪರೀಕ್ಷಾ ಕೇಂದ್ರಗಳಲ್ಲಿ ಪೀಠೋಪಕರಣ ವ್ಯವಸ್ಥೆ, ಕುಡಿಯುವ ನೀರು ಮತ್ತು ಮೂಲಭೂತ ಸೌಕರ್ಯಗಳನ್ನು
ವ್ಯವಸ್ಥಿತವಾಗಿ ಮಾಡಬೇಕು. ಬಸ್ ಸಂಚಾರ ವ್ಯವಸ್ಥೆಯಲ್ಲಿ ಮತ್ತು ವಿದ್ಯುತ್ ಸರಬರಾಜು ವ್ಯವಸ್ಥೆಯಲ್ಲಿ ಅಡಚಣೆಯಾಗದಂತೆ ಎಚ್ಚರಿಕೆ ವಹಿಸಬೇಕು.

KPSC EXAME ನಿಗಧಿತ ಸಮಯಕ್ಕೆ ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ತಲುಪಿಸಬೇಕು. ವಿಕಲಚೇತನ ಅಭ್ಯರ್ಥಿಗಳಿಗೆ ಯಾವುದೇ ಅನಾನುಕೂಲವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ನಿಯೋಜಿತ ಅಧಿಕಾರಿಗಳು ಪರೀಕ್ಷಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಪರೀಕ್ಷೆಗಳನ್ನು ಶಾಂತಿಯುತವಾಗಿ, ಯಾವುದೇ ಅವ್ಯವಹಾರ, ಗೊಂದಲಗಳಿಗೆ ಆಸ್ಪದವಾಗದಂತೆ ಯಶಸ್ವಿಯಾಗಿ ನಡೆಸಬೇಕೆಂದು ಸೂಚನೆ ನೀಡಿದರು.

KPSC EXAME ಸಭೆಯಲ್ಲಿ ಡಿವೈಎಸ್ಪಿ ಗಿರೀಶ್, ಜಿಲ್ಲಾ ಖಜಾನಾಧಿಕಾರಿ ಸೇರಿದಂತೆ ಪರೀಕ್ಷೆಗೆ ನಿಯೋಜಿಸಲಾದ ಅಧಿಕಾರಿಗಳು, ಸಿಬ್ಬಂದಿಗಳು ಪಾಲ್ಗೊಂಡಿದ್ದರು.

KPSC EXAME ನಿಷೇಧಾಜ್ಞೆ ಜಾರಿ: 

ಜಿಲ್ಲೆಯಲ್ಲಿ ಜ19 ಮತ್ತು ಜ.25 ರಂದು ನಡೆಯುವ ಪ್ರಸಕ್ತ ಸಾಲಿನ ವಿವಿಧ
ಇಲಾಖೆಗಳ ಗ್ರೂಪ್ ಬಿ ವೃಂದದ ಹುದ್ದೆಗಳಿಗೆ ಕನ್ನಡ ಭಾಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ.
ಸದರಿ ಪರೀಕ್ಷೆಗಳನ್ನು ಪಾರದರ್ಶಕವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಯಬೇಕಾಗಿರುವುದರಿಂದ, ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ಯಾವುದೇ ತರಹದ ಅವ್ಯವಹಾರ ,ಕಾನೂನು ಬಾಹಿರ ಚಟುವಟಿಕೆಗಳು ಅಥವಾ ಶಾಂತತಾ ಭಂಗ ಆಗದಂತೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಸಭೆ ಸಮಾರಂಭಗಳನ್ನು ನಡೆಯುತ್ತಿದ್ದಲ್ಲಿ ಧ್ವನಿವರ್ಧಕಗಳನ್ನು ತಡೆಯುವ ನಿಟ್ಟಿನಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ಪರೀಕ್ಷಾ ಸಮಯದಿಂದ ಪರೀಕ್ಷಾ ಅವಧಿ ಮುಗಿಯುವವರೆಗೆ ಭಾರತೀಯ ಸುರಕ್ಷಾ ಸಂಹಿತೆ ಕಾಯ್ದೆ 2023 ಕಲಂ 163 ರಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ನಿಷೇಧಾಜ್ಞೆಯನ್ನು ಹೊರಡಿಸಿರುತ್ತಾರೆ.
ಸದರಿ ಅವಧಿಯಲ್ಲಿ KPSC EXAME ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿರುವ ಝೆರಾಕ್ಸ್ ಅಂಗಡಿ ಹಾಗೂ ಸೈಬರ್ ಕೆಫೆಗಳನ್ನು ಮುಚ್ಚುವಂತೆ ಮತ್ತು ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳು ಇಲೆಕ್ಟ್ರಾನಿಕ್ಸ್ ಅಂದರೆ, ಮೊಬೈಲ್ ಫೋನಗಳು, ಸ್ಮಾರ್ಟ್
ವಾಚ್, ವೈರ್ ಲೆಸ್/ ಬ್ಲೂಟೂತ್, ಇಯರ್ ಹೆಡ್ ಫೋನ್‌ಗಳನ್ನು ತರಲು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ
ತಿಳಿಸಿದೆ.

Share This Article

ಮಗು ಜನಿಸಿದ ಎಷ್ಟು ತಿಂಗಳ ಬಳಿಕ ಉಪ್ಪಿನ ಆಹಾರ ನೀಡಬೇಕು?; ತಜ್ಞರು ಹೇಳೊದೇನು? | Salty Food

Salty Food : ಹುಟ್ಟಿದ ಮಗುವನ್ನು ದೊಡ್ಡದಾಗಿ ಬೆಳೆಯುವವರಿಗೂ ನೋಡಿಕೊಳ್ಳುವುದು ಅಷ್ಟು ಸುಲಭದ ಮಾತಲ್ಲ. ಬಟ್ಟೆ…

ಸನ್‌ಸ್ಕ್ರೀನ್, ಸೀರಮ್‌ಗಳನ್ನು ಬಳಸುತ್ತೀರಾ? ಹಾಗಿದ್ರೆ ಕ್ಯಾನ್ಸರ್​​ ಬರಬಹುದು ಎಚ್ಚರ! Glow Skin

Glow Skin | ನಮ್ಮ ಸ್ಕಿನ್​ ಗ್ಲೋ ಆಗಿ ಕಾಣಬೇಕೆಂದು ಮಹಿಳೆಯರು ಮಾಡುವ ಪ್ರಯತ್ನ ಒಂದೆರಡಲ್ಲ.…

ಅಪ್ಪಿತಪ್ಪಿಯೂ ಈ ವಸ್ತುಗಳನ್ನು ಕಾಲಿನಿಂದ ತುಳಿಯಬೇಡಿ!  ನೀವು ಖಂಡಿತವಾಗಿಯೂ ಆರ್ಥಿಕ ತೊಂದರೆಗೆ ಸಿಲುಕುವಿರಿ.. Vasthu Tips

Vasthu Tips: ಹಿರಿಯರು ಹೇಳಿದ್ದನ್ನು  ಅನೇಕ ಜನರು ಕಟ್ಟುನಿಟ್ಟಾಗಿ ಪಾಲಿಸುತ್ತಾರೆ. ನಾವು ಕೆಲವು ವಸ್ತುಗಳನ್ನು ದೇವರು…