18 C
Bangalore
Friday, December 6, 2019

ಕೆಪಿಎಸ್​ಸಿ ​ಸಂದರ್ಶನದ ವೇಳೆ ನಡೆಯುವ ಅವ್ಯವಹಾರ ತಪ್ಪಿಸಲು ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಣಯ

Latest News

ನೀರಿದೆ, ಪೂರೈಕೆ ವ್ಯವಸ್ಥೆ ಇಲ್ಲ

ಚಿಕ್ಕಮಗಳೂರು: ಈ ವರ್ಷ ಮಳೆ ಚೆನ್ನಾಗಿಯೇ ಆಗಿದೆ. ಎಲ್ಲ ನೀರಿನ ಮೂಲಗಳೂ ಭರ್ತಿಯಾಗಿವೆ. ನೀರು ಕೊಡಲು ಇನ್ನೇನು ಸಮಸ್ಯೆ? ನಾಗರಿಕರ ಇಂತಹ ಮಾತು,...

ಕುಕ್ಕರಹಳ್ಳಿ ಕೆರೆಯಲ್ಲಿ ಎರಡು ದ್ವೀಪ ನಿರ್ಮಿಸಿ

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಹೊಸದಾಗಿ ಎರಡು ದ್ವೀಪಗಳನ್ನು ನಿರ್ಮಾಣ ಮಾಡುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ಮೈಸೂರು...

ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು ಮಾಡಿರುವುದರ ಜತೆಗೆ ಹೆಂಡದ ಘಾಟು ಹೆಚ್ಚು ವಿಜೃಂಭಿಸಿದೆ! ಮತದಾರರನ್ನು ಸೆಳೆಯಲು ಇಲ್ಲಿ...

ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಸೆರೆ

ಮೈಸೂರು: ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಮಂಚೇಗೌಡನಕೊಪ್ಪಲು ನಿವಾಸಿ, ಖಾಸಗಿ ಕಂಪನಿಯ ಉದ್ಯೋಗಿ ಅಮೃತ್...

ಹುಣಸೂರು ಉಪಕದನ ಬಹುತೇಕ ಶಾಂತಿಯುತ

ಮೈಸೂರು: ಜಿದ್ದಾಜಿದ್ದಿನ ಕಣವಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ಶೇ.76ರಷ್ಟು ಮತದಾನವಾಗಿದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.82.54ರಷ್ಟು ಮತ್ತು ಆರು ತಿಂಗಳ...

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್​ಸಿ) ಸಂದರ್ಶನ ವೇಳೆ ಆಗಬಹುದಾದ ಅವ್ಯವಹಾರ ನಿಯಂತ್ರಿಸಿ ನೇಮಕಾತಿಯಲ್ಲಿ ಬಿಗಿ ತರುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ.

ಬುಧವಾರ ನಡೆದ ಸಂಪುಟ ಸಭೆಯಲ್ಲಿ ಕರ್ನಾಟಕ ಗೆಜೆಟೆಡ್ ಪ್ರೊಬೆಷನರ್ಸ್ (ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕಾತಿ) (ತಿದ್ದುಪಡಿ) ನಿಯಮಗಳು 2019ಕ್ಕೆ ಅನುಮೋದನೆ ದೊರೆತಿದೆ. ಇದರಿಂದಾಗಿ ಸರ್ಕಾರದ ‘ಎ’ ಮತ್ತು ‘ಬಿ’ ಗ್ರೂಪ್ ಹುದ್ದೆಗಳಿಗೆ (ಕೆಎಎಸ್) ಲಿಖಿತ ಪರೀಕ್ಷೆ ನಡೆಸಿದ ಬಳಿಕ ಅರ್ಹ ಅಭ್ಯರ್ಥಿಗಳ ಪೈಕಿ ಒಂದು ಹುದ್ದೆಗೆ 3 ಅರ್ಹ ಅಭ್ಯರ್ಥಿಗಳನ್ನು (1:3) ಸಂದರ್ಶನಕ್ಕೆ ಕರೆಯಬೇಕೆಂದು ಹೋಟಾ ಸಮಿತಿ ಮಾಡಿದ್ದ ಶಿಫಾರಸಿಗೆ ಆದ್ಯತೆ ದೊರೆತಂತಾಗಿದೆ.

ಹಿಂದಿನ ಸರ್ಕಾರ 1:3 ಬದಲಿಗೆ 1:5 ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯುವ ನಿರ್ಧಾರ ಕೈಗೊಂಡಿತ್ತು. ಆದರೆ ಈ ನಿಯಮದಿಂದ ಆಗುತ್ತಿರುವ ವಿಳಂಬ ಮನಗಂಡು ಇದೀಗ 1:3 ಪ್ರಮಾಣದಲ್ಲಿಯೇ ಸಂದರ್ಶನಕ್ಕೆ ಅರ್ಹ ಅಭ್ಯರ್ಥಿಗಳನ್ನು ಕರೆಯುವ ನಿರ್ಧಾರಕ್ಕೆ ಸಂಪುಟ ಅನುಮೋದನೆ ನೀಡಿದೆ. ಮುಂದಿನ ಅಧಿವೇಶನದಲ್ಲಿ ಈ ತಿದ್ದುಪಡಿ ವಿಧೇಯಕ ಮಂಡನೆಯಾಗಲಿದೆ.

ಕ್ರೀಡಾ ವಸತಿ ನಿಲಯಗಳಲ್ಲಿನ ಕ್ರೀಡಾಪಟುಗಳ ಪೋಷಣಾ ಭತ್ಯೆಯನ್ನು ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿನ ಭತ್ಯೆಗೆ ಸಮಾನವಾಗಿ ಹೆಚ್ಚಿಸಲು ತೀರ್ವನಿಸಲಾಗಿದೆ.

ನೇಮಕಾತಿಗೆ ತಿದ್ದುಪಡಿ
 1. ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ (ನೇಮಕಾತಿ) (ತಿದ್ದುಪಡಿ) ನಿಯಮ
 2. ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ (ಹಿರಿಯ ವೈದ್ಯಾಧಿ ಕಾರಿಗಳು ಮತ್ತು ದಂತ ವೈದ್ಯಾಧಿಕಾರಿಗಳ ನೇಮಕಾತಿ) (ವಿಶೇಷ) ನಿಯಮ 2019
 3. ರಾಜ್ಯ ಆರೋಗ್ಯ ಸಾರಿಗೆ ಸಂಸ್ಥೆ ತಾಂತ್ರಿಕ ಹುದ್ದೆಗಳ ನೇಮಕಕ್ಕೆ ಸಂಬಂಧಿಸಿದಂತೆ ತಿದ್ದುಪಡಿ ನಿಯಮ
 4. ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆ ಸೇವೆಗಳು (ನೇಮಕಾತಿ)ನಿಯಮಗಳು 2019ಕ್ಕೆ ಅನುಮೋದನೆ ನೀಡಲಾಗಿದೆ.

1) ಗ್ರಾಮೀಣ ಭಾಗದವರಿಗೆ ಅನುಕೂಲವಾಗಲಿ ಎಂದು ಈ ಹಿಂದೆ ಸರ್ಕಾರ 1:5 ಅನುಪಾತ ತಂದಿತ್ತು., 2) 1:5 ಅನುಪಾತದಿಂದ ಅವ್ಯವಹಾರಕ್ಕೆ ಅವಕಾಶ ಮಾಡಿಕೊಟ್ಟಂತಾಗಿತ್ತು, ಪ್ರತಿ ಹುದ್ದೆಗೆ ಪೈಪೋಟಿ ಹೆಚ್ಚಾಯಿತು. 3) ಗುಣಮಟ್ಟದ ಆಯ್ಕೆಗಿಂತ ಆರ್ಥಿಕ ಬಲಾಢ್ಯರಿಗೆ ಹೆಚ್ಚಿನ ಅವಕಾಶ ಸಿಗುತ್ತಿದೆ ಎಂಬ ಕೂಗು ಕೇಳಿಬಂತು. 4) ಕೆಪಿಎಸ್ಸಿ ವ್ಯವಸ್ಥೆ ಸುಧಾರಿಸಲು ರಚನೆಗೊಂಡ ಹೋಟಾ ಸಮಿತಿ ಕೂಡ ವಿಳಂಬ, ಅವ್ಯವಹಾರ ಗಮನಿಸಿ 1:3 ಅನುಪಾತಕ್ಕೆ ಶಿಫಾರಸು ಮಾಡಿತ್ತು.

ಕೈಗಾರಿಕೆಗೆ ನೀರು ತುಟ್ಟಿ

ಜಲಸಂಪನ್ಮೂಲ ಇಲಾಖೆ ಹಾಗೂ ಅದರ ವ್ಯಾಪ್ತಿಯಲ್ಲಿನ ನಿಗಮಗಳಡಿ ಬರುವ ಕಾಲುವೆ, ಕೆರೆ, ಜಲಾಶಯ, ಅಣೆಕಟ್ಟು, ಬಾಂದಾರ, ಕುಂಟೆ, ಮಡಗು ಇತ್ಯಾದಿ ಮೂಲಗಳಿಂದ ಕೈಗಾರಿಕೆಗಳು ಬಳಸುವ ನೀರಿಗೆ ನಿಗದಿಪಡಿಸಿರುವ ದರ ಪರಿಷ್ಕರಣೆಗೆ ಅನುಮತಿ ನೀಡಲಾಗಿದೆ. ಹೀಗಾಗಿ ಕೈಗಾರಿಕೆಗಳು ಬಳಸಿಕೊಳ್ಳುವ ನೀರಿನ ದರ ಹೆಚ್ಚಾಗಲಿದೆ.

ಸರ್ಕಾರಿ ಆಸ್ಪತ್ರೆಗೂ ರೋಬಾಟಿಕ್ ಸ್ಪರ್ಶ

ಸರ್ಕಾರಿ ಆಸ್ಪತ್ರೆಗಳಲ್ಲಿ ಇದೇ ಮೊದಲ ಬಾರಿಗೆ ರೋಬಾಟಿಕ್ ಶಸ್ತ್ರ ಚಿಕಿತ್ಸೆ ವಿಭಾಗ ತೆರೆಯಲಾಗುತ್ತಿದೆ. ಈ ಮೂಲಕ ಬಡ ರೋಗಿಗಳಿಗೂ ದುಬಾರಿ ಬೆಲೆಯ ಚಿಕಿತ್ಸೆ ಕಡಿಮೆ ಖರ್ಚಲ್ಲಿ ಸಿಗುವಂತಾಗಲಿದೆ. ಬೆಂಗಳೂರಿನ ಸಂಜಯಗಾಂಧಿ ಟ್ರಾಮ ಮತ್ತು ಅಸ್ಥಿಚಿಕಿತ್ಸಾ ಸಂಸ್ಥೆಯಲ್ಲಿ 40 ಕೋಟಿ ವೆಚ್ಚದಲ್ಲಿ ಈ ವ್ಯವಸ್ಥೆ ಜಾರಿಗೆ ಸಂಪುಟ ಒಪ್ಪಿಗೆ ನೀಡಿದೆ.

ಇತರ ನಿರ್ಣಯಗಳು
 1.  ಕರ್ನಾಟಕ ಪುರಸಭೆಗಳು (ತಿದ್ದುಪಡಿ) ವಿಧೇಯಕ 2019ಕ್ಕೆ ಅನುಮೋದನೆ.
 2. ಕರ್ನಾಟಕ ಇಂಧನ ಸಂರಕ್ಷಣಾ ಕಟ್ಟಡ ಸಂಹಿತೆ 2018ಕ್ಕೆ ಅನುಮೋದನೆ.
 3. ವಿಜಯಪುರ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ 100 ಹಾಸಿಗೆಗಳ ಸೌಲಭ್ಯವುಳ್ಳ ಸಂಜಯಗಾಂಧಿ ಟ್ರಾಮ ಮತ್ತು ಅಸ್ಥಿ ಚಿಕಿತ್ಸಾ ಸಂಸ್ಥೆಯ ನೂತನ ಶಾಖೆಗೆ 55.56 ಕೋಟಿ ರೂ. ಈ ಕೇಂದ್ರಕ್ಕೆ ಶ್ರೀ ಪುಟ್ಟರಾಜ ಗವಾಯಿ ಹೆಸರು.
 4. ಬೆಂಗಳೂರಿನ ಸಂಜಯಗಾಂಧಿ ಟ್ರಾಮ ಅಸ್ಥಿ ಚಿಕಿತ್ಸಾ ಸಂಸ್ಥೆಯಲ್ಲಿ ಕ್ರೀಡಾ ರೋಗಿಗಳ ವಿಭಾಗ ಮತ್ತು ರೋಬೋಟಿಕ್ ಶಸ್ತ್ರಚಿಕಿತ್ಸಾ ಸೌಲಭ್ಯಕ್ಕೆ 39.30 ಕೋಟಿ ರೂ.
 5. ಯಾದಗಿರಿ ಜಿಲ್ಲಾ ನ್ಯಾಯಾಲಯ ಸಂಕೀರ್ಣ ಕಟ್ಟಡಕ್ಕೆ 15 ಕೋಟಿ ರೂ.
 6. ಪುತ್ತೂರು ತಾಲೂಕಿನ ಶಾಂತಿ ಮೊಗೇರದಲ್ಲಿ ಕುಮಾರಧಾರಾ ನದಿಗೆ ಸೇತುವೆ ಮತ್ತು ಸಂಪರ್ಕ ರಸ್ತೆಗೆ 15.54 ಕೋಟಿ ರೂ.
 7. ಕೆಎಚ್​ಬಿ ಮೂಲಕ ವಿಜಯಪುರ ಜಿಲ್ಲಾ ಕಚೇರಿ ಸಂಕೀರ್ಣ ಕಟ್ಟಡ ಕಾಮಗಾರಿಗೆ 25 ಕೋಟಿ.
 8. ಎಂಬಸ್ಸಿ ಎನರ್ಜಿಗೆ ಸೌರ ವಿದ್ಯುತ್ ಘಟಕ ಸ್ಥಾಪಿಸಲು ಹಡಗಲಿ, ಹಗರಿಬೊಮ್ಮನಹಳ್ಳಿಯಲ್ಲಿ 177.34 ಎಕರೆ ಭೂಮಿ ಖರೀದಿಗೆ ಒಪ್ಪಿಗೆ.
 9. ಹೆಸರಘಟ್ಟ ಹೋಬಳಿ ಇಟಗಲ್ ಪುರ ಗ್ರಾಮದಲ್ಲಿ ರಾಜ್ಯಪಾಲರ ಸಚಿವಾಲಯ ನೌಕರರ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ 4 ಎಕರೆ.
 10. ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳ ಕಟ್ಟಡ ಸಂಕೀರ್ಣಕ್ಕೆ 215 ಕೋಟಿ ರೂ.
 11. ಶಿಕಾರಿಪುರದಲ್ಲಿ 15 ಕೋಟಿ ರೂ. ವೆಚ್ಚದಲ್ಲಿ 60 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡಕ್ಕೆ ಕೆಎಚ್​ಬಿಯ ಮೂರು ಎಕರೆ ಜಾಗ.
 12. ಶಿವಮೊಗ್ಗ ರೈಲ್ವೆ ನಿಲ್ದಾಣದ ಬಳಿ 100 ಅಡಿ ವರ್ತಲ ರಸ್ತೆ ಅಭಿವೃದ್ಧಿಗೆ 20 ಕೋಟಿ ರೂ.
 13. ಆಡಳಿತದಲ್ಲಿ ದತ್ತಾಂಶ ವಿಜ್ಞಾನ ಅನ್ವಯಿಕ ಮುಕ್ತ ದತ್ತಾಂಶ ಸಂಶೋಧನಾ ಕೇಂದ್ರದೊಂದಿಗೆ ಜ್ಞಾನ ಸಹಭಾಗಿತ್ವ.
 14. ಬೆಳಗಾವಿ ಜಿಲ್ಲೆ ಯಳ್ಳೂರ ಸಣ್ಣ ನೀರಾವರಿ ಕೆರೆಯ ಏರಿ ಬಲವರ್ಧನೆ ಸುಧಾರಣೆ ಕಾಮಗಾರಿಗೆ 15 ಕೋಟಿ ರೂ.

Stay connected

278,730FansLike
580FollowersFollow
619,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...