More

    ಭೂಮಾಪಕರ ಹುದ್ದೆ ಭರ್ತಿಗೆ ಅರ್ಜಿ; ಕೆಪಿಎಸ್‌ಸಿಯಿಂದ ಅಧಿಸೂಚನೆ ಪ್ರಕಟ

    ಬೆಂಗಳೂರು: ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯು ಕರ್ನಾಟಕ ಸರ್ಕಾರದಡಿ ಕಾರ್ಯನಿರ್ವಹಿಸುತ್ತಿದ್ದು, ಇಲಾಖೆಯಲ್ಲಿರುವ ಉಳಿಕೆ ವೃಂದದ ಸಮೂಹ ಸಿ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಪ್ರತ್ಯೇಕ ಎರಡು ಅಧಿಸೂಚನೆಗಳನ್ನು ಹೊರಡಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

    ಒಟ್ಟು ಹುದ್ದೆಗಳು-364

    ಹುದ್ದೆಯ ವಿವರ
    ಭೂಮಾಪಕರು (ಎಚ್‌ಕೆ)-100
    ಭೂಮಾಪಕರು (ಆರ್‌ಪಿಎಸ್)-264

    ವಿದ್ಯಾರ್ಹತೆ
    ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಬಿಇ (ಸಿವಿಲ್), ಬಿ.ಟೆಕ್, ಸಿವಿಲ್ ಇಂಜಿನಿಯರಿಂಗ್ ಡಿಪ್ಲೊಮಾದಲ್ಲಿ ಉತ್ತೀರ್ಣರಾಗಿರಬೇಕು. ಪದವಿ ಪೂರ್ವ ಶಿಕ್ಷಣ ಅಥವಾ ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ ಜರುಗಿಸುವ 12ನೇ ತರಗತಿಯಲ್ಲಿ ಸೈನ್ಸ್ ಕೋರ್ಸ್‌ನಲ್ಲಿ ಗಣಿತ ವಿಷಯದಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕ ಗಳಿಸಿರಬೇಕು. ವೃತ್ತಿ ಶಿಕ್ಷಣ ಇಲಾಖೆ ನಡೆಸುವ ‘ಲ್ಯಾಂಡ್ ಆ್ಯಂಡ್ ಸಿಟಿ ಸರ್ವೆ’ಯ ಪದವಿ ಪೂರ್ವ ಡಿಪ್ಲೊಮಾ ಅಥವಾ ಉದ್ಯೋಗ ಹಾಗೂ ತರಬೇತಿ ಇಲಾಖೆ ನಡೆಸುವ ‘ಐಟಿಐ ಇನ್ ಸರ್ವೆ ಟ್ರೇಡ್’ನಲ್ಲಿ ಉತ್ತೀರ್ಣರಾಗಿರಬೇಕು.

    ವೇತನ
    ಆಯ್ಕೆಯಾದ ಅಭ್ಯರ್ಥಿಗಳಿಗೆ, ಹುದ್ದೆಗಳಿಗೆ ಅನುಗುಣವಾಗಿ 23,500 ರೂ. ನಿಂದ 47,650 ರೂ. ಮಾಸಿಕ ವೇತನ ಪಾವತಿಸಲಾಗುತ್ತದೆ.

    ವಯೋಮಿತಿ
    ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35, ಒಬಿಸಿ ಅಭ್ಯರ್ಥಿಗಳಿಗೆ 38, ಎಸ್‌ಸಿ-ಎಸ್‌ಟಿಗಳಿಗೆ 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

    ಅರ್ಜಿ ಸಲ್ಲಿಸುವ ವಿಧಾನ
    ಕೆಪಿಎಸ್‌ಸಿಯಲ್ಲಿ ಒನ್ ಟೈಮ್ ರಿಜಿಸ್ಟ್ರೇಷನ್ (ಒಟಿಆರ್) ಪ್ರಕ್ರಿಯೆ ಇದ್ದು, ಅಭ್ಯರ್ಥಿಗಳು ಒಮ್ಮೆ ಸರಿಯಾದ ಮಾಹಿತಿಯನ್ನು ನೀಡಿ ನೋಂದಣಿ ಮಾಡಿಕೊಳ್ಳಬೇಕು. ಇದನ್ನು ಮುಂದಿನ ಅಧಿಸೂಚನೆಗಳಿಗೂ ಪರಿಗಣಿಸಲಾಗುತ್ತದೆ. ಯೂಸರ್ ಐಡಿ ಮತ್ತು ಪಾಸ್‌ವರ್ಡ್ ಜೋಪಾನವಾಗಿ ಕಾಯ್ದಿಟ್ಟುಕೊಳ್ಳಬೇಕು. ಅಧಿಕೃತ https://kpsconline.karnataka.gov.in ವೆಬ್‌ಸೈಟ್‌ನಲ್ಲಿ ಹೊಸ ನೋಂದಣಿ ಲಿಂಕ್ ಅನ್ನು ಕ್ಲಿಕ್ ಮಾಡಬೇಕು. ಚಾಲ್ತಿಯಲ್ಲಿರುವ ಮೊಬೈಲ್ ನಂಬರ್ ಮತ್ತು ಇಮೇಲ್ ಐಡಿ ನಮೂದಿಸಿ ಅಗತ್ಯ ಮಾಹಿತಿಗಳನ್ನು ಅಪ್‌ಲೋಡ್ ಮಾಡುವ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬೇಕು.

    ಅರ್ಜಿ ಶುಲ್ಕ
    ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 600 ರೂ. ನಿಗದಿಪಡಿಸಿದ್ದು, ಒಬಿಸಿ ಅಭ್ಯರ್ಥಿಗಳು 300 ರೂ. ಹಾಗೂ ಮಾಜಿ ಸೈನಿಕರು 50 ರೂ. ಅರ್ಜಿ ಶುಲ್ಕವನ್ನು ನೆಟ್ ಬ್ಯಾಂಕಿಂಗ್, ಡೆಬಿಟ್/ಕ್ರೆಡಿಟ್ ಕಾರ್ಡ್ ಅಥವಾ ಯುಪಿಐ ಮೂಲಕ ಪಾವತಿಸಬೇಕು.

    ಆಯ್ಕೆ ಪ್ರಕ್ರಿಯೆ
    ಕನ್ನಡ ಭಾಷಾ ಪರೀಕ್ಷೆ ಕಡ್ಡಾಯವಾಗಿದ್ದು, ಕನಿಷ್ಠ 50 ಅಂಕ ಗಳಿಸುವ ಮೂಲಕ ಅರ್ಹತೆ ಪಡೆಯುವ ಅಭ್ಯರ್ಥಿಗಳಿಗೆ ಎರಡು ಪತ್ರಿಕೆಗಳನ್ನು ಒಳಗೊಂಡ ಸ್ಪರ್ಧಾತ್ಮಕ ಪರೀಕ್ಷೆ ಏರ್ಪಡಿಸಲಾಗುತ್ತದೆ. 200 ಅಂಕಗಳ ಸಾಮಾನ್ಯ ಪತ್ರಿಕೆ ಹಾಗೂ 200 ಅಂಕಗಳ ನಿರ್ದಿಷ್ಟ ಪತ್ರಿಕೆಯಲ್ಲಿ ಗಳಿಸುವ ಅಂಕಗಳನ್ನು ಆಧರಿಸಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

    ಪ್ರಮುಖ ಮಾಹಿತಿ
    ಅರ್ಜಿ ಸಲ್ಲಿಸುವಾಗ ಮೀಸಲಾತಿ ಕೋರದೆ ತದನಂತರದಲ್ಲಿ ಮೀಸಲಾತಿ ಪರಿಗಣಿಸುವಂತೆ ಸಲ್ಲಿಸುವ ಮನವಿಯನ್ನು ಸ್ವೀಕರಿಸುವುದಿಲ್ಲ. ಶುಲ್ಕ ಪಾವತಿಸದ ಹಾಗೂ ದಾಖಲೆಗಳನ್ನು ಅಪ್‌ಲೋಡ್ ಮಾಡದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ದಾಖಲೆ ಪರಿಶೀಲನೆ ವೇಳೆ ಅರ್ಜಿಯೊಂದಿಗೆ ಲಗತ್ತಿಸಲಾದ ದಾಖಲೆಗಳನ್ನೇ ಹಾಜರುಪಡಿಸಬೇಕು.

    ಅರ್ಜಿ ಸಲ್ಲಿಕೆ ಪ್ರಾರಂಭ : 11-03-2024
    ಅರ್ಜಿ ಸಲ್ಲಿಸಲು ಕೊನೇ ದಿನ : 10-04-2024
    ಪರೀಕ್ಷಾ ದಿನಾಂಕ(ತಾತ್ಕಾಲಿಕ): 21-07-2024
    ಹೆಚ್ಚಿನ ಮಾಹಿತಿಗಾಗಿ: http://kpsc.kar.nic.in
    ಅಥವಾ [email protected]
    ಸಹಾಯವಾಣಿ: 080-30574957/30574901 

    ಟಿಎಚ್‌ಡಿಸಿಯಲ್ಲಿ ನೇಮಕಾತಿ; 100 ಹುದ್ದೆಗಳು, ಆಯ್ಕೆ ಪ್ರಕ್ರಿಯೆ, ವೇತನ, ಅರ್ಹತೆ ವಿವರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts