More

    ಗೆಜೆಟೆಡ್ ಪ್ರೊಬೇಷನರ್‌ನ 384 ಹುದ್ದೆ ಭರ್ತಿಗೆ ಕೆಪಿಎಸ್ಸಿ ಅಧಿಸೂಚನೆ

    ಬೆಂಗಳೂರು ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್ಸಿ) 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್‌ನ 384 ಹುದ್ದೆಗಳನ್ನು (ಗ್ರೂಪ್ ಎ ಮತ್ತು ಬಿ) ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ.

    ಗ್ರೂಪ್ ‘ಎ’ನಲ್ಲಿ 159 ಹುದ್ದೆಗಳು ಮತ್ತು ಗ್ರೂಪ್ ‘ಬಿ’225 ಹುದ್ದೆಗಳು ಸೇರಿ 384 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಸಂಬಂಧ ಆಯೋಗವು ನಡೆಸುವ ಪೂರ್ವಭಾವಿ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಮಾ.4ರಿಂದ ಏ.3ರ ಅವಧಿಯಲ್ಲಿ ಅರ್ಜಿ ಸಲ್ಲಿಸಬಹುದು. ಮೇ 5ರಂದು ಪೂರ್ವಭಾವಿ ಪರೀಕ್ಷೆ ನಡೆಸುವುದಾಗಿ ಅಧಿಸೂಚನೆಯಲ್ಲಿ ಪ್ರಕಟಿಸಿದೆ.

    ಒಂದು ಬಾರಿ ಅರ್ಜಿ ಸಲ್ಲಿಸಿದ ನಂತರ ಬದಲಾವಣೆಗೆ ತಂತ್ರಾಂಶದಲ್ಲಿ ಅವಕಾಶವಿಲ್ಲದ ಕಾರಣ ಅಭ್ಯರ್ಥಿಗಳೇ ಕೊನೇ ದಿನಾಂಕದೊಳಗೆ ಅರ್ಜಿಗಳಲ್ಲಿರುವ ದೋಷಗಳನ್ನು ಸರಿಪಡಿಸಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ. ಕೆಪಿಎಸ್ಸಿ ವೆಬ್‌ಸೈಟ್ https://kpsconline.karnataka.gov.
    ನಲ್ಲಿ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಬಹುದಾಗಿದೆ.

    ಸಾಮಾನ್ಯ ಅಭ್ಯರ್ಥಿಗಳಿಗೆ 600 ರೂ., ಒಬಿಸಿ ಗಳಿಗೆ 300 ರೂ. ಮತ್ತು ಪರಿಶಿಷ್ಟ ಜಾತಿ ಮತ್ತು ಪಂಗಡ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಸಾಮಾನ್ಯ ಅಭ್ಯರ್ಥಿಗಳಿಗೆ 38, ಒಬಿಸಿಗಳಿಗೆ 41 ಮತ್ತು ಪರಿಶಿಷ್ಟ ಜಾತಿ, ಪಂಗಡ ವಿದ್ಯಾರ್ಥಿಗಳಿಗೆ 43 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts