More

    ಕೆಎಸ್‌ಎಎಡಿಯಲ್ಲಿ ನೇಮಕಾತಿ; ಕೆಪಿಎಸ್‌ಇಯಿಂದ ಅಧಿಸೂಚನೆ ಪ್ರಕಟ

    ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ (ಕೆಎಸ್‌ಎಎಡಿ) ಖಾಲಿ ಇರುವ ಗ್ರೂಪ್-ಎ ಮತ್ತು ಗ್ರೂಪ್-ಬಿ ಉಳಿಕೆ ವೃಂದದ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದ್ದು, ರಾಜ್ಯ ಸರ್ಕಾದಡಿ ಕಾರ್ಯನಿರ್ವಹಿಸಲು ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು.

    ಒಟ್ಟು ಹುದ್ದೆಗಳು-112

    ಹುದ್ದೆಯ ವಿವರ
    ಲೆಕ್ಕಪರಿಶೋಧನಾಧಿಕಾರಿ (ಗ್ರೂಪ್-ಬಿ)54
    ಸಹಾಯಕ ನಿಯಂತ್ರಕರು (ಗ್ರೂಪ್-ಎ) 58

    ವಿದ್ಯಾರ್ಹತೆ
    ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಎಂಕಾಂ, ಎಂಬಿಎ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದವರು ಅಥವಾ ಇನ್‌ಸ್ಟಿಟ್ಯೂಟ್ ಆಫ್ ಕಾಸ್ಟ್ ಅಕೌಂಟೆಂಟ್ಸ್ ಆಫ್ ಇಂಡಿಯಾದ ಅಸೋಸಿಯೇಟ್ ಸದಸ್ಯರು ಅರ್ಜಿ ಸಲ್ಲಿಸಲು ಅರ್ಹರು.

    ವಯೋಮಿತಿ, ವೇತನ
    ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 21ವರ್ಷ ವಯಸ್ಸಾಗಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 38ವರ್ಷ ಹಾಗೂ ಎಸ್‌ಸಿ-ಎಸ್‌ಟಿ ಅಭ್ಯರ್ಥಿಗಳಿಗೆ 40ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಮಾಜಿ ಸೈನಿಕರು ಹಾಗೂ ಅಂಗವಿಕಲರಿಗೆ ವಯೋಸಡಿಲಿಕೆ ಅನ್ವವಾಗಲಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 43,100 ರೂ.ನಿಂದ 83,900 ರೂ. ಮಾಸಿಕ ವೇತನ ಪಾವತಿಸಲಾಗುತ್ತದೆ.

    ಅರ್ಜಿ ಸಲ್ಲಿಸುವ ವಿಧಾನ
    ಕೆಪಿಎಸ್‌ಸಿಯಲ್ಲಿ ಒನ್ ಟೈಮ್ ರಿಜಿಸ್ಟ್ರೇಷನ್ (ಒಟಿಆರ್) ಪ್ರಕ್ರಿಯೆ ಇದ್ದು, ಅಭ್ಯರ್ಥಿಗಳು ಒಮ್ಮೆ ಸರಿಯಾದ ಮಾಹಿತಿಯನ್ನು ನೀಡಿ ನೋಂದಣಿ ಮಾಡಿಕೊಳ್ಳಬೇಕು. ಇದನ್ನು ಮುಂದಿನ ಅಧಿಸೂಚನೆಗಳಿಗೂ ಪರಿಗಣಿಸಲಾಗುತ್ತದೆ. ಯೂಸರ್ ಐಡಿ ಮತ್ತು ಪಾಸ್​​​ವರ್ಡ್ ಜೋಪಾನವಾಗಿ ಕಾಯ್ದಿಟ್ಟುಕೊಳ್ಳಬೇಕು. ಅಧಿಕೃತ https://kpsconline.karnataka.gov.in ವೆಬ್‌ಸೈಟ್‌ನಲ್ಲಿ ಹೊಸ ನೋಂದಣಿ ಲಿಂಕ್ ಅನ್ನು ಕ್ಲಿಕ್ ಮಾಡಬೇಕು. ಚಾಲ್ತಿಯಲ್ಲಿರುವ ಮೊಬೈಲ್ ನಂಬರ್ ಮತ್ತು ಇಮೇಲ್ ಐಡಿ ನಮೂದಿಸಿ ಅಗತ್ಯ ಮಾಹಿತಿಗಳನ್ನು ಅಪ್‌ಲೋಡ್ ಮಾಡುವ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬೇಕು.

    ಅರ್ಜಿ ಶುಲ್ಕ
    ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 600 ರೂ. ನಿಗದಿಪಡಿಸಿದ್ದು, ಒಬಿಸಿ ಅಭ್ಯರ್ಥಿಗಳು 300 ರೂ. ಹಾಗೂ ಮಾಜಿ ಸೈನಿಕರು 50 ರೂ. ಅರ್ಜಿ ಶುಲ್ಕವನ್ನು ನೆಟ್ ಬ್ಯಾಂಕಿಂಗ್, ಡೆಬಿಟ್/ಕ್ರೆಡಿಟ್ ಕಾರ್ಡ್ ಅಥವಾ ಯುಪಿಐ ಮೂಲಕ ಪಾವತಿಸಬೇಕು. ಎಸ್‌ಸಿ-ಎಸ್‌ಟಿ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ವಿನಾಯಿತಿ ನೀಡಲಾಗಿದೆ.

    ಆಯ್ಕೆ ಪ್ರಕ್ರಿಯೆ
    ಪೂರ್ವಭಾವಿ ಪರೀಕ್ಷೆ (ವಸ್ತುನಿಷ್ಠ ಬಹು ಆಯ್ಕೆ ಮಾದರಿ), ಮುಖ್ಯ ಪರೀಕ್ಷೆ (ಲಿಖಿತ)ಗಳಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸುವ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

    ಪ್ರಮುಖ ಮಾಹಿತಿ
    ಅಭ್ಯರ್ಥಿಗಳು ಒಮ್ಮೆ ಅರ್ಜಿ ಸಲ್ಲಿಸಿದರೆ ಯಾವುದೇ ಕಾರಣಕ್ಕೂ ತಿದ್ದುಪಡಿ ಮಾಡಲು ಅವಕಾಶವಿಲ್ಲ. ಹಾಗಾಗಿ ಅರ್ಜಿ ಸಲ್ಲಿಸುವ ಮುನ್ನ ವಿಳಾಸ, ಪ್ರವರ್ಗ, ತಂದೆ-ತಾಯಿ ಹೆಸರು, ವಿದ್ಯಾರ್ಹತೆ, ವಯಸ್ಸು ಸೇರಿ ಇತರ ಅಗತ್ಯ ಮಾಹಿತಿಗಳನ್ನು ಸರಿಪಡಿಸಿಕೊಂಡು ಆನ್‌ಲೈನ್ ಅರ್ಜಿ ಸಲ್ಲಿಸಬೇಕು. ತಪ್ಪನ್ನು ತಿದ್ದುಪಡಿ ಮಾಡಿವಂತೆ ಸಲ್ಲಿಸಲಾಗುವ ಮನವಿ/ಕೋರಿಕೆಗಳನ್ನು ಪರಿಗಣಿಸುವುದಿಲ್ಲ ಎಂದು ಆಯೋಗ ಸ್ಪಷ್ಟವಾಗಿ ತಿಳಿಸಿದೆ.

    ಅರ್ಜಿ ಸಲ್ಲಿಕೆ ಪ್ರಾರಂಭ: 18-03-2024
    ಅರ್ಜಿ ಸಲ್ಲಿಸಲು ಕೊನೇ ದಿನ : 17-04-2024
    ಪೂರ್ವಭಾವಿ ಪರೀಕ್ಷೆ (ತಾತ್ಕಾಲಿಕ): 02-06-2024
    ಪಠ್ಯಕ್ರಮಕ್ಕಾಗಿ: http://kpsc.kar.nic.in/Syllabus

    ಹೆಚ್ಚಿನ ಮಾಹಿತಿಗಾಗಿ: ಕೇಂದ್ರ ಕಚೇರಿ ಸಹಾಯವಾಣಿ: 080-30574957/30574901 ಅಥವಾ 080-30574927/ 22261092 ಗೆ ಸಂಪರ್ಕಿಸಬಹುದು.

    ಭೂಮಾಪಕರ ಹುದ್ದೆ ಭರ್ತಿಗೆ ಅರ್ಜಿ; ಕೆಪಿಎಸ್‌ಸಿಯಿಂದ ಅಧಿಸೂಚನೆ ಪ್ರಕಟ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts